ನಿತ್ಯ ಭವಿಷ್ಯ
ನೀವು ಆಕರ್ಷಕರಾಗಿ ಕಾಣಬೇಕೇ? ಹೀಗೆ ಮಾಡಿ
ಕಾರ್ಯಸಿದ್ದಿ ಆಂಜನೇಯ ಜ್ಯೋತಿಷ್ಯಂಜ್ಯೋತಿಷ್ಯರು ಪ್ರದಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ :9945410150
ನಿಮ್ಮ ವ್ಯಕ್ತಿತ್ವ ವಿಚಾರ ವರ್ಚಸ್ಸು ಹಾಗೂ ಜೀವನಶೈಲಿಯಿಂದ ಆಕರ್ಷಿತರಾಗಿ ಕೆಲವರಿಗೆ ಕಾಣುವಿರಿ.
ಆಕರ್ಷಣೆ ಇದ್ದರೆ ಮಾತ್ರ ವ್ಯಕ್ತಿಯು ಇನ್ನೊಬ್ಬರ ಮನಸ್ಸನ್ನು ರಂಜಿಸಲು ಅಥವಾ ಆ ಮನಸ್ಸಿನಲ್ಲಿ ಸ್ಥಿತನಾಗಲು ಸಾಧ್ಯವಾಗಿರುತ್ತದೆ. ಆದರೆ ಇನ್ನೊಬ್ಬರ ಒಲವನ್ನು ಬೆಳೆಸಿಕೊಳ್ಳಲು ನೀವು ವಿಫಲರಾಗಿರುವುದು ಅಥವಾ ನಿಮ್ಮ ಬಗ್ಗೆ ಇಲ್ಲಸಲ್ಲದ ಕೆಲವು ವಿಚಾರಗಳಿಂದ ಬೇಜಾರಾಗಿರಬಹುದು. ಇದು ಪ್ರೀತಿಯ ವಿಷಯ ಇರಬಹುದು ಅಥವಾ ಬೇರೆ ವಿಚಾರಗಳು ಸಹ ಇರಬಹುದು ಯಾವಾಗ ವ್ಯಕ್ತಿ ತನ್ನ ಆಕರ್ಷಣೆಯನ್ನು ಕಳೆದುಕೊಳ್ಳುತ್ತಾನೆ ಆಗ ಅವನು ಕಳಾಹೀನವಾಗುವುದು ಅಥವಾ ಅವನ ವ್ಯಕ್ತಿತ್ವ ಕೆಟ್ಟ ವಿಚಾರದಲ್ಲಿ ಪಾಲ್ಗೊಳ್ಳಬಹುದು.
ಆಕರ್ಷಣ ಸಿದ್ದಿ ಸಾಧನೆಯಿಂದ ಮತ್ತು ತಂತ್ರ ವಿದ್ಯೆಯಿಂದ ಬಹಳಷ್ಟು ನಿಮಗೆ ಲಾಭ ಹಾಗೂ ಇನ್ನೊಬ್ಬರ ಮನಸ್ಥಿತಿಯನ್ನು ನಿಮ್ಮ ವಿಚಾರವಾಗಿ ಕೇಂದ್ರೀಕರಿಸಿ ಕೊಳ್ಳುವ ಶಕ್ತಿ ರೂಡಿಸಿಕೊಳ್ಳಬಹುದಾಗಿದೆ.
ಓಂ ನಮೋ ಆದಿಪುರುಷಾಯಸ್ಯ!
ಆಕರ್ಷಣ ಕುರು ಕುರು ಸ್ವಾಹಾ!! ಈ ಮಂತ್ರವನ್ನು ನೀವು ಒಂಬತ್ತು ದಿನಗಳ ಕಾಲ ಪ್ರತಿನಿತ್ಯ ಬೆಳಗಿನ ಜಾವ 108 ಬಾರಿ ಜಪಿಸಿ ಇದರಿಂದ ದಿನದಿಂದ ದಿನಕ್ಕೆ ನೀವು ಆಕರ್ಷಿತವಾಗಿ ನಿಮ್ಮ ವ್ಯಕ್ತಿತ್ವ ಎಲ್ಲರಿಗೂ ಕಾಣಿಸುತ್ತದೆ ಅನುಮಾನ ಬೇಡ.
ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್
ನಿಮ್ಮ ಗುಪ್ತ ಕಠಿಣ ಸಮಸ್ಯೆಗಳಿಗೆ ದೈವಿಕ ಶಾಸ್ತ್ರೋಕ್ತ ಪರಿಹಾರ ಶತಸಿದ್ಧ.
9945410150

ದಿನದ ಸುದ್ದಿ
ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ
ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್ ಕುಣಿಗಲ್ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್. ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್. ಎನ್ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್ ಹಿರಿಯಡಕ ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ ʼಬಾವಿಗೆ ಬಿದ್ದರೂʼ, ಒಟ್ಟು ಈ ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.
ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.
ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.
ಕವಿತೆ ಸ್ಪರ್ಧೆ ಫಲಿತಾಂಶ
ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.
ಫೈಜ್ನಟ್ರಾಜ್ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.
ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.
ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

ದಿನದ ಸುದ್ದಿ
ಇಂದಿನ ರಾಶಿ ಭವಿಷ್ಯ: ಯಾವ ರಾಶಿಗೆ ಶುಭ? ಯಾವ ರಾಶಿಗೆ ಎಚ್ಚರಿಕೆ? ಇಲ್ಲಿದೆ 12 ರಾಶಿಗಳ ಸಂಪೂರ್ಣ ಭವಿಷ್ಯ!
ಸುದ್ದಿದಿನ,ನಿತ್ಯಭವಿಷ್ಯ: ಸೆಪ್ಟೆಂಬರ್ 10, 2026 ರ ನಿಮ್ಮ ಜಾತಕವನ್ನು ಅನ್ವೇಷಿಸಿ. ವೃತ್ತಿ, ಹಣ, ಪ್ರೀತಿ ಮತ್ತು ಆರೋಗ್ಯದ ಸಂಪೂರ್ಣ ಭವಿಷ್ಯವಾಣಿಗಳನ್ನು ಓದಿ.
http://Visit : www.suddidina.com
ಮೇಷ: ಹಣಕಾಸಿನ ವಿಚಾರದಲ್ಲಿ ಶುಭ ದಿನ. ಬಾಕಿ ಇರುವ ಕೆಲಸಗಳು ಪೂರ್ಣಗೊಳ್ಳಲಿವೆ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ.
ವೃಷಭ: ಹೊಸ ಜವಾಬ್ದಾರಿಗಳು ನಿಮ್ಮನ್ನು ಹುಡುಕಿ ಬರಲಿವೆ. ಮಾತಿನ ಮೇಲೆ ನಿಯಂತ್ರಣ ಇರಲಿ. ಪ್ರಯಾಣದ ಯೋಗವಿದೆ.
ಮಿಥುನ: ಉದ್ಯೋಗದಲ್ಲಿ ಪ್ರಗತಿಯ ಸೂಚನೆ. ಸ್ನೇಹಿತರ ಭೇಟಿಯಿಂದ ಮನಸ್ಸಿಗೆ ಉಲ್ಲಾಸ. ಆರೋಗ್ಯದ ಬಗ್ಗೆ ಸ್ವಲ್ಪ ಕಾಳಜಿ ವಹಿಸಿ.
ಕರ್ಕಾಟಕ: ವ್ಯಾಪಾರದಲ್ಲಿ ಲಾಭದ ನಿರೀಕ್ಷೆ. ದಾಂಪತ್ಯದಲ್ಲಿ ಸಾಮರಸ್ಯ ಹೆಚ್ಚಾಗಲಿದೆ. ಹಳೆಯ ಸಾಲ ವಸೂಲಿಯಾಗಲಿದೆ.
ಸಿಂಹ: ಆತ್ಮವಿಶ್ವಾಸ ಹೆಚ್ಚಾಗುವ ದಿನ. ಸರ್ಕಾರಿ ಕೆಲಸಗಳು ಸುಗಮವಾಗಿ ನಡೆಯಲಿವೆ. ಮಕ್ಕಳಿಂದ ಶುಭ ಸುದ್ದಿ ಸಿಗಲಿದೆ.
ಕನ್ಯಾ: ಕೆಲಸದ ಒತ್ತಡ ಹೆಚ್ಚಿರಬಹುದು, ತಾಳ್ಮೆಯಿಂದ ಇರಿ. ಅನಗತ್ಯ ಖರ್ಚುಗಳನ್ನು ತಪ್ಪಿಸಿ. ಸಂಜೆ ವೇಳೆಗೆ ಶುಭ ಸುದ್ದಿ.
ತುಲಾ: ಹೊಸ ಅವಕಾಶಗಳು ಬಾಗಿಲು ತಟ್ಟಲಿವೆ. ನಿಮ್ಮ ಪ್ರತಿಭೆಗೆ ಮನ್ನಣೆ ಸಿಗಲಿದೆ. ಪ್ರೇಮ ವಿಚಾರದಲ್ಲಿ ಸಕಾರಾತ್ಮಕ ಬೆಳವಣಿಗೆ.
ವೃಶ್ಚಿಕ: ಆಸ್ತಿ ವಿಚಾರದಲ್ಲಿ ಜಯ ಸಿಗಲಿದೆ. ಹಿರಿಯರ ಆರೋಗ್ಯದ ಬಗ್ಗೆ ಗಮನವಿರಲಿ. ನಿಮ್ಮ ಯೋಜನೆಗಳು ಯಶಸ್ವಿಯಾಗಲಿವೆ.
ಧನು: ಧೈರ್ಯದಿಂದ ಕೈಗೊಂಡ ನಿರ್ಧಾರ ಯಶಸ್ಸು ತರಲಿದೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯ ಬಗೆಹರಿಯಲಿದೆ. ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ.
ಮಕರ: ಆದಾಯಕ್ಕಿಂತ ಖರ್ಚು ಹೆಚ್ಚಾಗುವ ಸಾಧ್ಯತೆ. ಕಛೇರಿಯಲ್ಲಿ ನಿಮ್ಮ ಮಾತಿಗೆ ಬೆಲೆ ಸಿಗಲಿದೆ. ವಾಹನ ಚಲಾಯಿಸುವಾಗ ಎಚ್ಚರಿಕೆ.
ಕುಂಭ: ನಿಮ್ಮ ಕಠಿಣ ಪರಿಶ್ರಮಕ್ಕೆ ಫಲ ಸಿಗುವ ದಿನ. ಹೊಸ ವಸ್ತು ಖರೀದಿ ಯೋಗವಿದೆ. ಸಾಮಾಜಿಕ ಕ್ಷೇತ್ರದಲ್ಲಿ ಗೌರವ ಹೆಚ್ಚಾಗಲಿದೆ.
ಮೀನ: ಮನಸ್ಸಿನಲ್ಲಿ ಗೊಂದಲಗಳು ನಿವಾರಣೆಯಾಗಲಿವೆ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ. ದೂರದ ಸಂಬಂಧಿಯಿಂದ ಸುದ್ದಿ ಬರಲಿದೆ.

ನಿತ್ಯ ಭವಿಷ್ಯ
ಮೇಷದಿಂದ ಮೀನದವರೆಗೆ: ಉದ್ಯೋಗ, ಹಣಕಾಸು, ಕುಟುಂಬ, ಆರೋಗ್ಯದಲ್ಲಿ ಏನಿದೆ?
ಸುದ್ದಿದಿನ,ರಾಶಿಭವಿಷ್ಯ: ಇಂದಿನ ದಿನವು ಪ್ರತಿಯೊಂದು ರಾಶಿಗೂ ವಿಭಿನ್ನ ಅನುಭವಗಳನ್ನು ತರುವ ಸಾಧ್ಯತೆ ಇದೆ. ಕೆಲವರಿಗೆ ವೃತ್ತಿಜೀವನದಲ್ಲಿ ಹೊಸ ಅವಕಾಶಗಳು ಎದುರಾಗಬಹುದು. ಮತ್ತೊಂದೆಡೆ, ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯ ನಿರ್ಧಾರ ಅಗತ್ಯವಾಗಬಹುದು. ಕುಟುಂಬದವರೊಂದಿಗೆ ಉತ್ತಮ ಸಮಯ ಕಳೆಯುವ ಅವಕಾಶ ಕೆಲವು ರಾಶಿಗಳಿಗೆ ದೊರೆಯಲಿದ್ದು, ವಿದ್ಯಾರ್ಥಿಗಳಿಗೆ ಏಕಾಗ್ರತೆಯಿಂದ ಅಧ್ಯಯನ ನಡೆಸಲು ಅನುಕೂಲಕರ ವಾತಾವರಣ ನಿರ್ಮಾಣವಾಗಬಹುದು. ದಿನದ ಪ್ರಮುಖ ನಿರ್ಧಾರಗಳಲ್ಲಿ ಆತುರಕ್ಕಿಂತ ವಿವೇಕಕ್ಕೆ ಆದ್ಯತೆ ನೀಡುವುದು ಉತ್ತಮ.
http://Visit : www.suddidina.com
ಮೇಷ ರಾಶಿ
ಉದ್ಯೋಗ ಕ್ಷೇತ್ರದಲ್ಲಿ ಹೊಸ ಜವಾಬ್ದಾರಿ ದೊರೆಯಬಹುದು. ಹಣಕಾಸಿನ ವಿಚಾರದಲ್ಲಿ ಅನಗತ್ಯ ಖರ್ಚು ತಪ್ಪಿಸಿ. ಕುಟುಂಬದಲ್ಲಿ ಸಂತಸದ ವಾತಾವರಣ ಇರಲಿದೆ. ವಿದ್ಯಾರ್ಥಿಗಳು ಪ್ರಯತ್ನ ಮುಂದುವರಿಸಬೇಕು.
ವೃಷಭ ರಾಶಿ
ಬಹುದಿನಗಳಿಂದ ಬಾಕಿ ಉಳಿದ ಕೆಲಸಗಳು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರಿಗಳಿಗೆ ಹೊಸ ಅವಕಾಶಗಳು ಸಿಗಬಹುದು. ಕುಟುಂಬದವರ ಸಲಹೆ ಉಪಯುಕ್ತವಾಗಲಿದೆ. ಆರೋಗ್ಯದ ಕಡೆ ಗಮನ ನೀಡಿ.
ಮಿಥುನ ರಾಶಿ
ಕೆಲಸದಲ್ಲಿ ನಿಮ್ಮ ಸಾಮರ್ಥ್ಯ ಪ್ರದರ್ಶಿಸಲು ಅವಕಾಶ ಸಿಗಲಿದೆ. ಹೊಸ ಪರಿಚಯಗಳು ಭವಿಷ್ಯದಲ್ಲಿ ಸಹಕಾರಿಯಾಗಬಹುದು. ಹಣದ ವ್ಯವಹಾರದಲ್ಲಿ ದಾಖಲೆಗಳನ್ನು ಪರಿಶೀಲಿಸಿ ಮುಂದುವರಿಯಿರಿ.
ಕಟಕ ರಾಶಿ
ಕುಟುಂಬದ ವಿಚಾರಗಳು ಹೆಚ್ಚಿನ ಗಮನ ಸೆಳೆಯಬಹುದು. ಉದ್ಯೋಗದಲ್ಲಿ ಒತ್ತಡ ಕಂಡುಬಂದರೂ ಸಮಾಧಾನದಿಂದ ನಿರ್ವಹಿಸಿ. ಆತುರದ ನಿರ್ಧಾರಗಳಿಂದ ದೂರವಿರುವುದು ಒಳಿತು.
ಸಿಂಹ ರಾಶಿ
ವೃತ್ತಿಜೀವನದಲ್ಲಿ ಪ್ರಗತಿಯ ಸೂಚನೆಗಳಿವೆ. ಹಿರಿಯರಿಂದ ಮೆಚ್ಚುಗೆ ದೊರೆಯಬಹುದು. ಹಣಕಾಸಿನ ಸ್ಥಿತಿ ಸುಧಾರಿಸುವ ಅವಕಾಶವಿದೆ. ಸ್ನೇಹಿತರೊಂದಿಗೆ ಉತ್ತಮ ಸಮಯ ಕಳೆಯಬಹುದು.
ಕನ್ಯಾ ರಾಶಿ
ಹೊಸ ಯೋಜನೆ ಆರಂಭಿಸಲು ದಿನ ಅನುಕೂಲಕರವಾಗಿರಬಹುದು. ಕೆಲಸದಲ್ಲಿ ಏಕಾಗ್ರತೆ ಹೆಚ್ಚಲಿದೆ. ಖರೀದಿ ಮಾಡುವಾಗ ಅಗತ್ಯ-ಅನಗತ್ಯವನ್ನು ಅಳೆಯಿರಿ. ವಿದ್ಯಾರ್ಥಿಗಳಿಗೆ ಉತ್ತಮ ದಿನ.
ತುಲಾ ರಾಶಿ
ಸಂಬಂಧಗಳಲ್ಲಿ ಸಣ್ಣ ಭಿನ್ನಾಭಿಪ್ರಾಯಗಳು ಉಂಟಾದರೂ ಮಾತುಕತೆಯಿಂದ ಪರಿಹರಿಸಬಹುದು. ಉದ್ಯೋಗದಲ್ಲಿ ಹೊಸ ಜವಾಬ್ದಾರಿ ಬರಬಹುದು. ಹಣಕಾಸಿನಲ್ಲಿ ಸ್ಥಿರತೆ ಕಂಡುಬರಲಿದೆ.
ವೃಶ್ಚಿಕ ರಾಶಿ
ಹಳೆಯ ಕೆಲಸವೊಂದು ಪೂರ್ಣಗೊಳ್ಳುವ ಸಾಧ್ಯತೆ ಇದೆ. ವ್ಯಾಪಾರದಲ್ಲಿ ಎಚ್ಚರಿಕೆಯ ಹೆಜ್ಜೆ ಅಗತ್ಯ. ಕುಟುಂಬದವರಿಂದ ಬೆಂಬಲ ಸಿಗಲಿದೆ. ಆರೋಗ್ಯದ ಕಡೆ ನಿರ್ಲಕ್ಷ್ಯ ಬೇಡ.
ಧನು ರಾಶಿ
ಹೊಸ ಅವಕಾಶಗಳು ನಿಮ್ಮ ಗಮನ ಸೆಳೆಯಬಹುದು. ದೂರದ ಪ್ರಯಾಣದ ಯೋಜನೆ ರೂಪುಗೊಳ್ಳಬಹುದು. ಹಣದ ವಿಚಾರದಲ್ಲಿ ಉತ್ತಮ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ. ಆತ್ಮವಿಶ್ವಾಸ ಹೆಚ್ಚಲಿದೆ.
ಮಕರ ರಾಶಿ
ಕೆಲಸದ ಒತ್ತಡ ಹೆಚ್ಚಾಗಬಹುದು, ಆದರೆ ನಿಮ್ಮ ಯೋಜನೆಯಂತೆ ಕಾರ್ಯನಿರ್ವಹಿಸಿದರೆ ಯಶಸ್ಸು ಸಿಗಲಿದೆ. ಹಿರಿಯರ ಮಾರ್ಗದರ್ಶನ ಪ್ರಯೋಜನಕಾರಿ. ಕುಟುಂಬದಲ್ಲಿ ನೆಮ್ಮದಿ ಇರಲಿದೆ.
ಕುಂಭ ರಾಶಿ
ಹೊಸ ವಿಚಾರಗಳನ್ನು ಕಾರ್ಯರೂಪಕ್ಕೆ ತರಲು ಉತ್ತಮ ಸಮಯ. ಉದ್ಯೋಗದಲ್ಲಿ ಬದಲಾವಣೆಯ ಬಗ್ಗೆ ಯೋಚಿಸುತ್ತಿದ್ದರೆ ಮಾಹಿತಿ ಸಂಗ್ರಹಿಸಿ ನಿರ್ಧರಿಸಿ. ಸ್ನೇಹಿತರಿಂದ ನೆರವು ದೊರೆಯಬಹುದು.
ಮೀನ ರಾಶಿ
ಮನಸ್ಸಿನ ಗೊಂದಲಗಳು ನಿಧಾನವಾಗಿ ಕಡಿಮೆಯಾಗಬಹುದು. ಕುಟುಂಬದೊಂದಿಗೆ ಸಂತಸದ ಕ್ಷಣಗಳು ಸಿಗಲಿವೆ. ಹಣಕಾಸಿನ ವಿಚಾರದಲ್ಲಿ ಉಳಿತಾಯಕ್ಕೆ ಆದ್ಯತೆ ನೀಡಿ. ವಿದ್ಯಾರ್ಥಿಗಳಿಗೆ ಪರಿಶ್ರಮದ ಫಲ ದೊರೆಯಬಹುದು.



