ದಿನದ ಸುದ್ದಿ
ಪೆಟ್ರೋಲ್ – ಡೀಸೆಲ್ ಬೆಲೆ ಇಳಿಸಿ : ಪ್ರಧಾನಿ ಮೋದಿ
ಸುದ್ದಿದಿನ ಡೆಸ್ಕ್ : ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಕಡಿಮೆ ಮಾಡದ ರಾಜ್ಯಗಳು ತೆರಿಗೆ ಕಡಿತಗೊಳಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಒತ್ತಾಯಿಸಿದರು.
ಇದು ಜನರಿಗೆ ಮಾಡುತ್ತಿರುವ ಅನ್ಯಾಯವಾಗಿದೆ. ಏರುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯ ಹೊರೆಯನ್ನು ಕಡಿಮೆ ಮಾಡುವ ಸಲುವಾಗಿ ಕೇಂದ್ರ ಸರ್ಕಾರ ಕಳೆದ ವರ್ಷ ನವೆಂಬರ್‌ನಲ್ಲಿ ಅಬಕಾರಿ ಸುಂಕ ಕಡಿಮೆ ಮಾಡಿತ್ತು ಎಂದು ಅವರು ನೆನಪಿಸಿದರು.
ದೇಶದ ಕೋವಿಡ್-19 ಪರಿಸ್ಥಿತಿ ಕುರಿತು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯಮಂತ್ರಿಗಳ ಜತೆ ನಡೆಸಿದ ವರ್ಚುಯಲ್ ಸಂವಾದಲ್ಲಿ ಅವರು ಈ ಕಳವಳ ವ್ಯಕ್ತಪಡಿಸಿದರು.
ಕೋವಿಡ್-19 ಸಾಂಕ್ರಾಮಿಕ ಕಾಣಿಸಿಕೊಂಡ ಅವಧಿಯಲ್ಲಿ ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಕೆಲಸ ಮಾಡಿದ ರೀತಿ, ಕೊರೋನಾ ವಿರುದ್ಧ ಹೋರಾಟದಲ್ಲಿ ದೇಶ ಪ್ರಮುಖ ಪಾತ್ರ ವಹಿಸಿದೆ ಎಂದು ಪ್ರಧಾನಿ ಹೇಳಿದರು. ಜಾಗತಿಕ ಪರಿಸ್ಥಿತಿಗಳ ದೃಷ್ಟಿಯಿಂದ ಭಾರತದ ಆರ್ಥಿಕತೆಯ ಸದೃಢತೆಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಮನ್ವಯ ಹಿಂದೆಂದಿಗಿಂತಲೂ ಹೆಚ್ಚು ಅವಶ್ಯಕ ಎಂದು ಮೋದಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243