ದಿನದ ಸುದ್ದಿ
ದಾವಣಗೆರೆ ವಿವಿ ಘಟಿಕೋತ್ಸವ ; ಮೂವರಿಗೆ ಗೌರವ ಡಾಕ್ಟರೇಟ್
ಸುದ್ದಿದಿನ, ದಾವಣಗೆರೆ : ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಮಾಜಿ ಅಧ್ಯಕ್ಷರಾಗಿದ್ದ ನ್ಯಾಯಮೂರ್ತಿ ಶಿವರಾಜ ಪಾಟೀಲ, ಬೆಂಗಳೂರು ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಪ್ರೊ.ಕೆ.ಸಿದ್ದಪ್ಪ ಹಾಗೂ ಹಿರಿಯ ಪತ್ರಕರ್ತ, ವ್ಯಂಗ್ಯಚಿತ್ರಕಾರ ಎಚ್.ಬಿ.ಮಂಜುನಾಥ ಅವರಿಗೆ ದಾವಣಗೆರೆ ವಿಶ್ವವಿದ್ಯಾನಿಲಯವು ತನ್ನ 11ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟೊರೇಟ್ ಪದವಿ ನೀಡಿ ಸನ್ಮಾನಿಸಲಿದೆ.
ಗೌರವ ಡಾಕ್ಟೊರೇಟ್ ಪದವಿಗಾಗಿ ಒಟ್ಟು 6 ಅರ್ಜಿಗಳು ಬಂದಿದ್ದವು. ಅವುಗಳನ್ನು ಉನ್ನತ ಮಟ್ಟದ ತಜ್ಞರ ಸಮಿತಿ ಪರಿಶೀಲಿಸಿ ನಾಲ್ಕು ಜನರ ಹೆಸರನ್ನು ಶಿಫಾರಸು ಮಾಡಿತ್ತು. ಅದರಲ್ಲಿ ಗೌರವಾನ್ವಿತ ರಾಜ್ಯಪಾಲರು ಮೂವರ ಹೆಸರನ್ನು ಅಂತಿಮಗೊಳಿಸಿದ್ದಾರೆ. ಗೌರವ ಡಾಕ್ಟೊರೇಟ್ ಪದವಿಗೆ ಮನ್ನಣೆ ಪಡೆದಿರುವ ಮೂವರು ಗಣ್ಯರೂ ತಮ್ಮದೇ ಕ್ಷೇತ್ರದಲ್ಲಿ ಅಪಾರ ಸಾಧನೆ ಮಾಡಿದ್ದಾರೆ ಎಂದು ಕುಲಪತಿ ಪ್ರೊ.ಬಿ.ಡಿ.ಕುಂಬಾರ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243