ದಿನದ ಸುದ್ದಿ
ಪಿಹೆಚ್‍ಡಿ | ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ವಿವಿಧ ಸ್ನಾತಕೋತ್ತರ ಅಧ್ಯಯನ ವಿಭಾಗಗಳಲ್ಲಿ 2021-22ನೇ ಶೈಕ್ಷಣಿಕ ಸಾಲಿನಲ್ಲಿ ಲಭ್ಯವಿರುವ ಪಿಹೆಚ್‍ಡಿ, ಪಿಡಿಎಫ್, ಡಿ.ಎಸ್‍ಇಸಿ, ಡಿ.ಲಿಟ್ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಆಹ್ವಾನಿಸಿದ್ದು, ಸರ್ಕಾರ ಪ್ರಸ್ತುತ ಲಾಕ್‍ಡೌನ್ ಘೋಷಿಸಿರುವುದರಿಂದ ಅರ್ಜಿ ಸಲ್ಲಿಕೆ ಅವದಿಯನ್ನು ಮೇ. 31 ರವರೆಗೆ ವಿಸ್ತರಿಸಲಾಗಿದೆ.
ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರವು ಮೇ 10 ರಿಂದ 24 ರವರೆಗೆ ಲಾಕ್‍ಡೌನ್ ಗೆ ಆದೇಶ ನೀಡುವುದರಿಂದ, ಕುಲಪತಿಗಳ ಅನುಮೋದನೆ ಮೇರೆಗೆ ಪಿಹೆಚ್‍ಡಿ, ಪಿಡಿಎಫ್, ಡಿ.ಎಸ್‍ಇಸಿ, ಡಿ.ಲಿಟ್ ಸಂಶೋಧನಾ ಸ್ಥಾನಗಳಿಗೆ ಅರ್ಜಿ ಸಲ್ಲಿಕೆ ಅವಧಿಯನ್ನು ಮೇ 31 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.
ಇದನ್ನೂ ಓದಿ | ಇಂದಿರಾ ಕ್ಯಾಂಟೀನ್ ನಲ್ಲಿ ಉಚಿತ ಊಟ ಸೌಲಭ್ಯ ಆರಂಭ
ಅರ್ಜಿದಾರರು ಭರ್ತಿ ಮಾಡಿದ ಅರ್ಜಿಗಳನ್ನು ಮೇ. 31 ರಂದು ಸಂಜೆ 5 ಗಂಟೆಗಳೊಳಗೆ ಸಂಬಂಧಪಟ್ಟ ವಿಭಾಗದಲ್ಲಿ ಸಲ್ಲಿಸಬಹುದು.ಪಿಹೆಚ್‍ಡಿ, ಪಿಡಿಎಫ್, ಡಿ.ಎಸ್‍ಇಸಿ, ಡಿ.ಲಿಟ್ ಸಂಶೋಧನಾ ಸ್ಥಾನಗಳಿಗೆ ಅರ್ಜಿಗಳನ್ನು ಡೌನ್‍ಲೋಡ್ ಮಾಡಿಕೊಳ್ಳಲು ವಿಶ್ವವಿದ್ಯಾನಿಲಯದ ವೆಬ್‍ಸೈಟ್ :
www.davanagereuniversity.ac.in
ಸಂಪರ್ಕಿಸಬಹುದು ಎಂದು ದಾವಣಗೆರೆ ವಿವಿ ಕುಲಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243