ದಿನದ ಸುದ್ದಿ
ಶಿವರಾಜ ಎಸ್ ಅವರಿಗೆ ಪಿಎಚ್ ಡಿ ಪದವಿ
ಸುದ್ದಿದಿನ ಡೆಸ್ಕ್ : ಶಿವರಾಜ ಎಸ್ ಇವರು, ಹಂಪಿ ಕನ್ನಡ ವಿಶ್ವವಿದ್ಯಾಲಯದಿಂದ ಡಾಕ್ಟರೇಟ್ ಪದವಿಯನ್ನು ಪಡೆದಿದ್ದಾರೆ.
“ಚಿತ್ರದುರ್ಗ ಜಿಲ್ಲೆ ಗ್ರಾಮೀಣ ಆರೋಗ್ಯ ನಿರ್ವಹಣೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಪಾತ್ರ. (ಸಮಾಜಕಾರ್ಯ ಶಿಸ್ತನ್ನು ಅನುಲಕ್ಷಿಸಿ) ಎಂಬ ವಿಷಯದ ಮೇಲೆ ಸಂಶೋಧನೆಯನ್ನು ಮಾಡಿ ಪ್ರಬಂಧ ಮಂಡಿಸಿದ್ದು, ಈ ಪ್ರೌಢ ಪ್ರಬಂಧಕ್ಕೆ ಹಂಪಿ ಕನ್ನಡ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿಯನ್ನು ನೀಡಿದೆ.
ಮಾನವಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಎಲ್.ಶ್ರೀನಿವಾಸ ಇವರ ಮಾರ್ಗದರ್ಶನದಲ್ಲಿ ಹಾಗೂ ಡಾ. ರಮೇಶ ಎಂ ಸೋನಕಾಂಬಳೆ ಸಹಾಯಕ ಪ್ರಾಧ್ಯಾಪಕರು ಸಮಾಜಕಾರ್ಯ ಅಧ್ಯಯನ ವಿಭಾಗ, ಕರ್ನಾಟಕ ರಾಜ್ಯ ಅಕ್ಕಮಹಾದೇವಿ ವಿಶ್ವವಿದ್ಯಾಲಯ, ವಿಜಯಪುರ ಇವರ ಸಹ ಮಾರ್ಗದರ್ಶನದಲ್ಲಿ ಪಿಎಚ್ ಡಿ ಪಡೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243