ದಿನದ ಸುದ್ದಿ
ಪಿಹೆಚ್‌ಡಿ ವಿದ್ಯಾರ್ಥಿಗಳಿಗೆ ವ್ಯಾಸಂಗ ವೇತನ-ಫೆಲೋಶಿಪ್‍ಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : 2019-20ನೇ ಸಾಲಿನಲ್ಲಿ ಪೂರ್ಣಾವಧಿ ಪಿ.ಹೆಚ್.ಡಿ ಅಧ್ಯಯನದಲ್ಲಿ ತೊಡಗಿರುವ ಹಿಂದುಳಿದ ವರ್ಗಗಳ ಪ್ರವರ್ಗ-1, 2ಎ, 3ಎ, 3ಎ, 3ಬಿ ಹಾಗೂ ಹಿಂದುಳಿದ ವರ್ಗಗಳಿಗೆ ಸೇರಿದ(ಓಬಿಸಿ) ಅರ್ಹ ನವೀಕರಣ ವಿದ್ಯಾರ್ಥಿಗಳಿಗೆ ಮಾಸಿಕ ರೂ.10.000/- ದಂತೆ ಮಾಸಿಕ ವ್ಯಾಸಂಗ ವೇತನ/ಫೆಲೋಶಿಪ್ ಮಂಜೂರು ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು www.backwardclasses.kar.nic.in ವೆಬ್‍ಸೈಟ್ ನಲ್ಲಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಸೆ.30 ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 8050770004 ಗೆ ಸಂಪರ್ಕಿಸಬಹುದೆಂದು ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243