ದಿನದ ಸುದ್ದಿ

ದಾವಣಗೆರೆ ಉತ್ತರ ವಲಯ : ಫಿಜಿಯೋಥೆರಪಿಸ್ಟ್ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2020-21ನೇ ಸಾಲಿನ ಸಮಗ್ರ ಶಿಕ್ಷಣ ಕರ್ನಾಟಕ ಸಮನ್ವಯ ಶಿಕ್ಷಣದ ಅನುಮೋದಿತ ಚಟುವಟಿಕೆಯಾದ ತೀವ್ರತರ ವಿಕಲತೆ ಹೊಂದಿರುವ ವಿಕಲಚೇತನ ವಿದ್ಯಾರ್ಥಿಗಳಿಗೆ ದೈಹಿಕ ಚಿಕಿತ್ಸೆ/ಫಿಜಿಯೋಥೆರಪಿ ಮಾಡಿಸುವ ಸಲುವಾಗಿ ಕ್ಷೇತ್ರ ಸಂಪನ್ಮೂಲ ಕೇಂದ್ರ, ದಾವಣಗೆರೆ ಉತ್ತರ ವಲಯ ಇಲ್ಲಿಗೆ ಒಂದು ಫಿಜಿಯೋಥೆರಪಿಸ್ಟ್ ಹುದ್ದೆ (ಡಿಪ್ಲೋಮ ಇನ್ ಫಿಜಿಯೋಥೆರಪಿಸ್ಟ್/ಬ್ಯಾಚುಲರ್ ಆಫ್ ಫಿಜಿಯೋಥೆರಪಿಸ್ಟ್) ನೇಮಕ ಮಾಡಿಕೊಳ್ಳಲು ಅರ್ಜಿಯನ್ನು ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನ.13 ರ ಒಳಗಾಗಿ ಭರ್ತಿ ಮಾಡಿದ ಅರ್ಜಿಯನ್ನು ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಕೆ.ಆರ್.ರಸ್ತೆ, ದಾವಣಗೆರೆ ದಾವಣಗೆರೆ ಉತ್ತರ ವಲಯ ಇಲ್ಲಿಗೆ ಖುದ್ದಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ದೂ.ಸಂ: 9480695172, 9480695179 ನ್ನು ಸಂಪರ್ಕಿಸಬಹುದೆಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version