ದಿನದ ಸುದ್ದಿ

ಅನ್ನಭಾಗ್ಯ | ಅದು ಪ್ಲಾಸ್ಟಿಕ್ ಅಕ್ಕಿಯಲ್ಲ ; ಪೌಷ್ಟಿಕಾಂಶವುಳ್ಳ ಸಾರವರ್ಧಿತ ಅಕ್ಕಿ

Published

on

ಸುದ್ದಿದಿನಡೆಸ್ಕ್:ಅನ್ನಭಾಗ್ಯದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿಯಂತಹ ಕಾಳುಗಳು ಇದ್ದಲ್ಲಿ ನಾಗರಿಕರು ಆತಂಕ ಪಡುವ ಅಗತ್ಯವಿಲ್ಲ. ಅದು ಪ್ಲಾಸ್ಟಿಕ್ ಅಕ್ಕಿಯಲ್ಲ, ಬದಲಿಗೆ ಆರೋಗ್ಯವನ್ನು ಉತ್ತಮವಾಗಿಸುವ ಪೌಷ್ಟಿಕಾಂಶವುಳ್ಳ ಸಾರವರ್ಧಿತ ಅಕ್ಕಿ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.

ಪ್ರಯೋಗಾಲಯದಿಂದ ಪರೀಕ್ಷೆಗೆ ಒಳಪಟ್ಟ ಸಾರವರ್ಧಿತ ಅಕ್ಕಿಯನ್ನು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರದಿಂದ ಬಳಕೆಗೆ ಯೋಗ್ಯ ಎಂದು ಪರಿಗಣಿಸಲಾಗಿರುತ್ತದೆ ಎಂದು ಇಲಾಖೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version