ದಿನದ ಸುದ್ದಿ

ಪ್ರಧಾನಮಂತ್ರಿ ಆವಾಸ್ ಯೋಜನೆ : ಮನೆ ನಿರ್ಮಾಣಕ್ಕೆ ಆರ್ಥಿಕ ನೆರವು

Published

on

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ಆವಾಸ್ ಯೋಜನೆ -ಪಿಎಂಎವೈ ಅಡಿಯಲ್ಲಿ 3 ಕೋಟಿ ಗ್ರಾಮೀಣ ಮತ್ತು ನಗರ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರ ಆರ್ಥಿಕ ನೆರವು ನೀಡಲು ನಿರ್ಧರಿಸಿದೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅರ್ಹ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮೂಲಭೂತ ಸೌಕರ್ಯಗಳೊಂದಿಗೆ ಮನೆಗಳ ನಿರ್ಮಾಣಕ್ಕೆ ನೆರವು ಒದಗಿಸಲು ಕೇಂದ್ರ ಸರ್ಕಾರವು 2015-16 ರಿಂದ ಪ್ರಧಾನ ಮಂತ್ರಿ ಆವಾಸ್ ಯೋಜನೆ (ಪಿಎಂಎವೈ) ಯನ್ನು ಅನುಷ್ಠಾನಗೊಳಿಸುತ್ತಿದೆ.

ಪಿಎಂಎವೈ ಅಡಿಯಲ್ಲಿ, ಕಳೆದ 10 ವರ್ಷಗಳಲ್ಲಿ ವಸತಿ ಯೋಜನೆಗಳ ಅಡಿಯಲ್ಲಿ ಅರ್ಹ ಬಡ ಕುಟುಂಬಗಳಿಗಾಗಿ ಒಟ್ಟು 4.21 ಕೋಟಿ ಮನೆಗಳ ನಿರ್ಮಾಣ ಕಾರ್‍ಯವನ್ನು ಪೂರ್ಣಗೊಳಿಸಲಾಗಿದೆ. ಪಿಎಂಎವೈ ಅಡಿಯಲ್ಲಿ ನಿರ್ಮಿಸಲಾದ ಎಲ್ಲಾ ಮನೆಗಳಿಗೆ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಗಳ ಇತರ ಯೋಜನೆಗಳ ಸಮನ್ವಯದೊಂದಿಗೆ ಶೌಚಾಲಯಗಳು, ಎಲ್ ಪಿ ಜಿ ಸಂಪರ್ಕ, ವಿದ್ಯುತ್ ಸಂಪರ್ಕ, ನಲ್ಲಿ ಸಂಪರ್ಕ ಮುಂತಾದ ಇತರ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ.

ಅರ್ಹ ಕುಟುಂಬಗಳ ಸಂಖ್ಯೆಯ ಹೆಚ್ಚಳದಿಂದ ಉಂಟಾಗುವ ವಸತಿ ಅವಶ್ಯಕತೆಗಳನ್ನು ಪೂರೈಸಲು 3 ಕೋಟಿ ಹೆಚ್ಚುವರಿ ಗ್ರಾಮೀಣ ಮತ್ತು ನಗರ ಕುಟುಂಬಗಳಿಗೆ ಮನೆ ನಿರ್ಮಾಣಕ್ಕೆ ನೆರವು ನೀಡಲು ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version