ದಿನದ ಸುದ್ದಿ
ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ
ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಿದ್ದಾರೆ. ಕೇಂದ್ರ ಗ್ರಾಮೀಣಾಭಿವೃದ್ಧಿ, ಕೃಷಿ ಹಾಗೂ ರೈತ ಕಲ್ಯಾಣ ಖಾತೆ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಈ ವಿಷಯ ಪ್ರಕಟಿಸಿದ್ದಾರೆ.
ಅವರು, ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ ಹತ್ತು ವರ್ಷಗಳಲ್ಲಿ 11 ಕೋಟಿ ರೈತರ ಖಾತೆಗಳಿಗೆ 3 ಲಕ್ಷ ಕೋಟಿ ರೂಪಾಯಿಗಳನ್ನು ಯೋಜನೆಯಡಿ ವರ್ಗಾಯಿಸಲಾಗಿದೆ ಎಂದು ಹೇಳಿದರು.
ಜೂನ್ 18 ರಂದು ವಾರಾಣಸಿಯಲ್ಲಿ ನಡೆಯಲಿರುವ ಪ್ರಧಾನಿಮಂತ್ರಿಯವರ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಎಲ್ಲ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿರುವುದಾಗಿ ಅವರು ತಿಳಿಸಿದರು.
ರೈತರ ಕಲ್ಯಾಣ ವಿಷಯಕ್ಕೆ ಸಂಬಂಧಿಸಿದ ಎಲ್ಲ ವಿಚಾರಗಳ ಬಗ್ಗೆ ಅಧಿಕಾರಗಳೊಂದಿಗೆ ಚರ್ಚೆ ನಡೆಸಿರುವುದಾಗಿ ತಿಳಿಸಿದ ಅವರು, ಸರ್ಕಾರದ 100 ದಿನಗಳ ಕಾರ್ಯ ಯೋಜನೆಯ ಬಗ್ಗೆ ಪರಿಶೀಲನೆ ನಡೆಸಿದ್ದಾಗಿ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243