ದಿನದ ಸುದ್ದಿ
ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು : ಪ್ರಧಾನಿ ನರೇಂದ್ರ ಮೋದಿ
ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ, ಬದಲಾಗಿ ದೇಶದ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
ಭಾರತ ಪರಮಾಣು ಬೆದರಿಕೆಗೆ ಅಂಜುವುದಿಲ್ಲ, ಹಾಗೆಯೇ ಅದನ್ನು ಸಹಿಸುವುದಿಲ್ಲ – ಪ್ರಧಾನಿ ನರೇಂದ್ರ ಮೋದಿ
ಸುದ್ದಿದಿನಡೆಸ್ಕ್:ಅಪರೇಷನ್ ಸಿಂಧೂರ ಕಾರ್ಯಚರಣೆಯ ತಾತ್ಕಾಲಿಕ ಸ್ಥಗಿತ ಒಂದು ಸಮಾಪ್ತಿಯ ನಿರ್ಧಾರವಲ್ಲ, ಮುಂಬರುವ ದಿನಗಳಲ್ಲಿ ಪಾಕಿಸ್ತಾನ ತನ್ನ ಬದ್ಧತೆಗೆ ಅನುಗುಣವಾಗಿ ಮುಂದಿನ ಕ್ರಮಗಳನ್ನು ಅನುಸರಿಸುತ್ತದೆಯೇ ಎಂಬುದನ್ನು ಭಾರತ ಪರಿಶೀಲಿಸಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಕಳೆದ ರಾತ್ರಿ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ನರೇಂದ್ರ ಮೋದಿಯವರು ಆಪರೇಷನ್ ಸಿಂಧೂರ ಆರಂಭದ ಮೂರನೇ ದಿನದಲ್ಲೇ ಪಾಕಿಸ್ತಾನ ತನ್ನ ನಿರೀಕ್ಷೆಗಿಂತ ಹೆಚ್ಚು ನಷ್ಟವನ್ನು ಅನುಭವಿಸಿದೆ. ಭಾರತೀಯ ಸಶಸ್ತ್ರ ಪಡೆಗಳು ನಡೆಸಿದ ಆಪರೇಷನ್ ಸಿಂಧೂರ್ ಕೇವಲ ಹೆಸರಲ್ಲ, ಬದಲಾಗಿ ದೇಶದ ಸಾಮೂಹಿಕ ಭಾವನೆಗಳು ಮತ್ತು ಸ್ಥಿತಿಸ್ಥಾಪಕತ್ವದ ಪ್ರಬಲ ಸಂಕೇತವಾಗಿದೆ. ಆಪರೇಷನ್ ಸಿಂಧೂರ ನ್ಯಾಯಕ್ಕಾಗಿ ಅಚಲ ಪ್ರತಿಜ್ಞೆಯಾಗಿದೆ. ಆಪರೇಷನ್ ಸಿಂಧೂರ ಭಯೋತ್ಪಾದನೆಯ ವಿರುದ್ಧದ ಹೋರಾಟವನ್ನು ಮರು ವ್ಯಾಖ್ಯಾನಿಸಿದೆ ಮತ್ತು ಹೊಸ ಮಾನದಂಡ ಮತ್ತು ಹೊಸ ಸಾಮಾನ್ಯತೆಯನ್ನು ಸ್ಥಾಪಿಸಿದೆ ಎಂದು ಅವರು ಹೇಳಿದರು.
ಭಾರತದ ಭದ್ರತಾ ನೀತಿಯ ಮೂರು ಪ್ರಮುಖ ಸ್ತಂಭಗಳನ್ನು ವಿವರಿಸಿದ ಪ್ರಧಾನಿ, ಭಯೋತ್ಪಾದನೆಗೆ ನಿರ್ಣಾಯಕ ಪ್ರತೀಕಾರವೇ ಅದರ ಮೊದಲ ಸ್ತಂಭವಾಗಿದೆ. ಭಾರತದ ಮೇಲಿನ ಯಾವುದೇ ಭಯೋತ್ಪಾದಕ ದಾಳಿಗೆ ಬಲವಾದ ಮತ್ತು ದೃಢವಾದ ಪ್ರತಿಕ್ರಿಯೆ ನೀಡಲಾಗುವುದು ಎಂದು ಹೇಳಿದರು. ಭಾರತ ಪರಮಾಣು ಬೆದರಿಕೆಗಳಿಗೆ ಅಂಜುವುದಿಲ್ಲ. ಇನ್ನು ಮುಂದೆ ಯಾವುದೇ ಪರಮಾಣು ಬೆದರಿಕೆಯನ್ನು ಸಹಿಸದಿರುವುದು ಎರಡನೆಯ ಸ್ತಂಭವಾಗಿದೆ. ಭಯೋತ್ಪಾದನಾ ಚಟುವಟಿಕೆಗಳ ಪ್ರಾಯೋಜಕರು ಮತ್ತು ಭಯೋತ್ಪಾದಕರ ನಡುವೆ ಯಾವುದೇ ವ್ಯತ್ಯಾಸವಿಲ್ಲ. ಇದುವೇ ಮೂರನೇ ಸ್ಥಂಭ ಎಂದು ಹೇಳಿದ ಅವರು, ಭಯೋತ್ಪಾದಕರಿಗೆ ಆಶ್ರಯ ನೀಡುವ ಮತ್ತು ರಕ್ಷಿಸುವವರನ್ನು ಭಯೋತ್ಪಾದಕರಿಂದ ಭಿನ್ನವಾಗಿ ನೋಡಲಾಗುವುದಿಲ್ಲ ಎಂದರು.
ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು
ಹಾಗೆಯೇ ರಕ್ತ ಮತ್ತು ನೀರು ಒಟ್ಟಿಗೆ ಹರಿಯಲಾರವು ಎಂದು ಪ್ರದಾನ ಮಂತ್ರಿಯವರು ತಮ್ಮ ಭಾಷಣದಲ್ಲಿ ತಿಳಿಸಿದ್ದಾರೆ. ಭಾರತದ ಏಕತೆಯೇ ಅದರ ಶಕ್ತಿಯ ಮೂಲವಾಗಿದೆ. ಯುದ್ಧದ ಕಾಲವಲ್ಲದ ಈ ಯುಗದಲ್ಲಿ ಭಯೋತ್ಪಾದನೆಗೂ ಅವಕಾಶವಿಲ್ಲ. ಅದರ ವಿರುದ್ಧ ಶೂನ್ಯ ಸಹಿಷ್ಣುತೆಯೇ ಉತ್ತಮ ಹಾಗೂ ಸುರಕ್ಷಿತ ಭವಿಷ್ಯಕ್ಕೆ ಖಾತ್ರಿ ಎಂದರು.
ಪಾಕಿಸ್ತಾನ ತನ್ನ ಭಯೋತ್ಪಾದಕ ಮೂಲಸೌಕರ್ಯವನ್ನು ನಾಶಪಡಿಸಬೇಕು. ಪಾಕಿಸ್ತಾನ ಸೇನೆ ಮತ್ತು ಪಾಕಿಸ್ತಾನ ಸರ್ಕಾರ ಭಯೋತ್ಪಾದನೆಯನ್ನು ಪೋಷಿಸುವುದನ್ನು ಮುಂದುವರಿಸಿದರೆ, ಒಂದು ದಿನ ಅದು ಪಾಕಿಸ್ತಾನದ ಸ್ವಂತ ವಿನಾಶಕ್ಕೆ ಕಾರಣವಾಗುತ್ತದೆ ಎಂದು ಅವರು ಎಚ್ಚರಿಸಿದರು.
ಭಾರತ ಮತ್ತು ಪಾಕಿಸ್ತಾನದ ನಡುವೆ ಮಾತುಕತೆ ನಡೆದರೆ, ಅದು ಭಯೋತ್ಪಾದನೆ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ-ಪಿಒಕೆ ಬಗ್ಗೆ ಮಾತ್ರ ಎಂದು ಪ್ರಧಾನಿ ಮೋದಿ ತಮ್ಮ ಭಾಷಣದಲ್ಲಿ ಸ್ಪಷ್ಟಪಡಿಸಿದರು. ಇದೇ ವೇಳೆ ಭಾರತದ ಸೇನೆ, ಗುಪ್ತಚರ ಸಂಸ್ಥೆಗಳು ಮತ್ತು ವಿಜ್ಞಾನಿಗಳಿಗೆ ಗೌರವ ಸೂಚಿಸಿದ ಪ್ರಧಾನಿ, ಈ ಕಾರ್ಯಾಚರಣೆಯಲ್ಲಿ ತೊಡಗಿದ ಸಶಸ್ತ್ರ ಪಡೆಗಳ ಧೈರ್ಯ ಹಾಗೂ ಶೌರ್ಯವನ್ನು ದೇಶದ ತಾಯಂದಿರು, ಸಹೋದರಿಯರು ಮತ್ತು ಪುತ್ರಿಯರಿಗೆ ಅರ್ಪಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್‍ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್‍ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್‍ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


