Connect with us

ದಿನದ ಸುದ್ದಿ

ಮೋದಿ ಅವಧಿಯಲ್ಲಿ ಹೆಚ್ಚಿನ ಆರ್ಟಿಐ ಅರ್ಜಿ ಸಲ್ಲಿಕೆ; ಎಷ್ಟು ತಿರಸ್ಕೃತ, ಎಷ್ಟಕ್ಕೆ ಪ್ರತಿಕ್ರಿಯೆ

Published

on

ಸುದ್ದಿದಿನ ಡೆಸ್ಕ್: ದೇಶದ ಪ್ರಧಾನ ಮಂತ್ರಿ ಕಚೇರಿಗೆ ಮಾಹಿತಿ ಕೋರಿ ಸಾವಿರಾರು ಸಂಖ್ಯೆಯಲ್ಲಿ ಆರ್ಟಿಐ ಅರ್ಜಿಗಳು ಸಲ್ಲಿಕೆಯಾಗುತ್ತಿದ್ದು, ಹಿಂದಿನ ಸರ್ಕಾರದ ಅವಧಿಗಿಂತ ಮೋದಿ ಅವಧಿಯಲ್ಲಿ ಅತಿ ಹೆಚ್ಚಿನ ಅರ್ಜಿಗಳು ಸಲ್ಲಿಕೆಯಾಗಿವೆ. ಪಿಟಿಐ ವರದಿಗಾರನೊಬ್ಬ ಸಲ್ಲಿಸಿದ್ದ ಆರ್ಟಿಐಗೆ ಪಿಎಂಒ ನೀಡಿರುವ ಮಾಹಿತಿಯ ಗಮನಿಸಿದಾಗ ನಾಗರಿಕರು ಸಲ್ಲಿಸಿದ ಅರ್ಜಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದೆ ಎಂಬ ಅಂಶ ತಿಳಿಯುತ್ತದೆ. 2016-17ನೇ ಸಾಲಿನಲ್ಲಿ 12,500 ಅರ್ಜಿಗಳು ಸಲ್ಲಿಕೆಯಾಗಿವೆ. ಇದು 2012ಕ್ಕಿಂತ ಅಧಿಕವಾಗಿದೆ ಎಂದು ಅಧಿಕೃತ ಮಾಹಿತಿ ತಿಳಿಸಿದೆ.

2016-17ನೇ ಸಾಲಿನಲ್ಲಿ 12,787, 2015-16ರಲ್ಲಿ 11,138, 2014-15ನೇ ಸಾಲಿನಲ್ಲಿ 12,674 ಅರ್ಜಿಗಳು ಸಲ್ಲಿಕೆಯಾಗಿವೆ. 2013-14ರಲ್ಲಿ 7,077 ಮತ್ತು 2012-13ರಲ್ಲಿ 5,828 ಪ್ರಶ್ನೆಗಳನ್ನು ಕೇಳಲಾಗಿದೆ. 2013ರಿಂದ 2018 ವರೆಗೆ ಪಿಎಂಒಗೆ ಸಲ್ಲಿಕೆಯಾಗಿರುವ ಆರ್ಟಿಐ, ತಕರಾರು ಅರ್ಜಿಗಳ ವಿವರ ನೀಡುವಂತೆ ಪಿಟಿಐ ಕರೆಸ್ಪಾಂಡೆನ್ಸ್ ಸಲ್ಲಿಸಿದ್ದ ಅರ್ಜಿಗೆ ಪಿಎಂಒ ಉತ್ತರಿಸಿದೆ.

ತಿರಸ್ಕೃತ ಅರ್ಜಿಗಳು:
ಪ್ರಧಾನ ಮಂತ್ರಿ ಕಚೇರಿಗೆ ಸಲ್ಲಿಸಿದ್ದ ಅರ್ಜಿಗಳನ್ನು ಯಾವ ವರ್ಷ ಎಷ್ಟು ಅರ್ಜಿ ತಿರಸ್ಕರಿಸಲಾಗಿದೆ ಎಂಬ ಮಾಹಿತಿ ನೀಡಲಾಗಿದೆ. 2016-17ರಲ್ಲಿ 1,306, 2015-16ರಲ್ಲಿ 2,234, 2014-15ರಲ್ಲಿ 2,795 ಆರ್ಟಿಐ ಅರ್ಜಿಗಳು ತಿರಸ್ಕೃತಗೊಂಡಿವೆ. 2013-14ನೇ ಸಾಲಿನಲ್ಲಿ 1,450, 2012-13ರಲ್ಲಿ 1,130 ಪ್ರಶ್ನೆಗಳನ್ನು ತಿರಸ್ಕರಿಸಲಾಗಿದೆ. ಮಾಹಿತಿ ಹಕ್ಕು ಕಾಯಿದೆಯ ನಿಬಂಧನೆಗಳ ಪ್ರಕಾರ ಅರ್ಜಿಗಳನ್ನು ತಿರಸ್ಕರಿಸಲಾಗಿದೆ ಎಂದು ಹೇಳಲಾಗಿದೆ.

ಭಾರತೀಯ ನಾಗರಿಕರು RTI ಕಾಯ್ದೆಯಡಿ ಸರ್ಕಾರದ ಇಲಾಖೆಗಳಿಂದ ಆಡಳಿತ ಸಂಬಂಧಿತ ಮಾಹಿತಿಯನ್ನು ಕಾಲ ಮಿತಿಯೊಳಗೆ ಪಡೆದುಕೊಳ್ಳಬಹುದು. ಸರ್ಕಾರ ನೀಡಿದ ಮಾಹಿತಿಯನ್ನು ಅರ್ಜಿದಾರರಿಗೆ ತೃಪ್ತಿ ಆಗದಿದ್ದರೆ ಸಂಬಂಧಿತ ಇಲಾಖೆಗೆ ತಕರಾರು ಅರ್ಜಿ ಸಲ್ಲಿಸಬಹುದು.

2016-17ರಲ್ಲಿ 1,592, 2015-16ರಲ್ಲಿ 1,478, 2014-15ರಲ್ಲಿ 1,306, 2013-14ರಲ್ಲಿ 701 ಹಾಗೂ 2012-13ರಲ್ಲಿ 632 ತಕರಾರು ಅರ್ಜಿ ಸಲ್ಲಿಕೆಯಾಗಿವೆ. ಇವುಗಳಲ್ಲಿ 2016-17ರಲ್ಲಿ 1,098, 2015-16ರಲ್ಲಿ 1,155, 2014-15ರಲ್ಲಿ 1,035, 2013-14 ಮತ್ತು 2012-13ನೇ ಸಾಲಿನಲ್ಲಿ ಕ್ರಮವಾಗಿ 506, 493 ತಕರಾರು ಅರ್ಜಿಗಳು ತಿರಸ್ಕೃತಗೊಂಡಿವೆ ಎಂದು ಪಿಎಂಒ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending