ದಿನದ ಸುದ್ದಿ
ಅ.21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ
ಸುದ್ದಿದಿನ,ದಾವಣಗೆರೆ:ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಅಕ್ಟೋಬರ್ 21 ರಂದು ಬೆಳಿಗ್ಗೆ 8 ಗಂಟೆಗೆ ನಗರದ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಆಯೋಜಿಸಲಾಗಿದೆ.
ಪೂರ್ವವಲಯ ಪೊಲೀಸ್ ಉಪಮಹಾನಿರೀಕ್ಷಕರಾದ ಬಿ.ರಮೇಶ್ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಭಾಗವಹಿಸುವರು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243