Connect with us

ದಿನದ ಸುದ್ದಿ

ಅ.18 ಕ್ಕೆ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ಲಿಖಿತ ಪರೀಕ್ಷೆ

Published

on

ಸುದ್ದಿದಿನ,ದಾವಣಗೆರೆ : ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್(ಸಿಎಆರ್/ಡಿಎಆರ್-ಪುರುಷ) ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ 7262 ಅಭ್ಯರ್ಥಿಗಳಿಗೆ ಅ.18 ರ ಬೆಳಿಗ್ಗೆ 11 ರಿಂದ 12.30 ರವರೆಗೆ ಲಿಖಿತ ಪರೀಕ್ಷೆಯನ್ನು ದಾವಣಗೆರೆ ನಗರದ ಕೆಳಕಂಡ ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಗುವುದು.

ಅಥಣಿ ಸಂಯುಕ್ತ ಪದವಿಪೂರ್ವ ಕಾಲೇಜು ರೋಲ್ ಸಂಖ್ಯೆ 8609601 ರಿಂದ 8610000 ರವರೆಗೆ. ಎಸ್.ಬಿ.ಸಿ ಪ್ರಥಮ ದರ್ಜೆ ಕಾಲೇಜು ರೋಲ್ ಸಂಖ್ಯೆ 8610101 ರಿಂದ 8610500 ರವರೆಗೆ. ಬಿ.ಎಸ್.ಚನ್ನಬಸಪ್ಪ ಪ್ರಥಮ ದರ್ಜೆ ಕಾಲೇಜು ರೋಲ್ ಸಂಖ್ಯೆ 8610521 ರಿಂದ 8610800 ರವರೆಗೆ.

ಬಾಪೂಜಿ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರಿಂಗ್ ಮತ್ತು ಟೆಕ್ನಾಲಾಜಿ, ರೋಲ್ ಸಂಖ್ಯೆ 8610821 ರಿಂದ 8611220 ರವರೆಗೆ. ಸೇಂಟ್ ಜಾನ್ಸ್ ಆಂಗ್ಲ ಮಾಧ್ಯಮ ಶಾಲೆ, ರೋಲ್ ಸಂಖ್ಯೆ 8611241 ರಿಂದ 8611740 ರವರೆಗೆ. ಎ.ಜಿ.ಬಿ ಪ್ರಥಮ ದರ್ಜೆ ಕಾಲೇಜು, ರೋಲ್ ಸಂಖ್ಯೆ 8611761 ರಿಂದ 8612080 ರವರೆಗೆ.

ಎ.ವಿ ಕಮಲಮ್ಮ ಮಹಿಳಾ ಕಾಲೇಜು, ರೋಲ್ ಸಂಖ್ಯೆ 8612101 ರಿಂದ 8612600 ರವರೆಗೆ. ಎ.ಆರ್.ಜಿ ಕಲಾ ಮತ್ತು ವಾಣಿಜ್ಯ ಕಾಲೇಜು, ರೋಲ್ ಸಂಖ್ಯೆ 8612621 ರಿಂದ 8613120 ರವರೆಗೆ. ಜೈನ್ ಇನ್ಸ್‍ಟಿಟ್ಯೂಟ್ ಆಫ್ ಇಂಜಿನಿಯರಿಂಗ್ & ಟೆಕ್ನಾಲಾಜಿ, ರೋಲ್ ಸಂಖ್ಯೆ 8613141 ರಿಂದ 8613740 ರವರೆಗೆ.

ಶ್ರೀತರಳಬಾಳು ಜಗದ್ಗುರು ಸಂಯುಕ್ತ ಪದವಿಪೂರ್ವ ಕಾಲೇಜ್ ಅನುಭವ ಮಂಟಪ, ರೋಲ್ ಸಂಖ್ಯೆ 8613761 ರಿಂದ 8614360 ರವರೆಗೆ. ಸಿದ್ದಗಂಗಾ ಪಿ.ಯು ಕಾಲೇಜು ಸ್ಟೇಡಿಯಂ ಹತ್ತಿರ, ಸಿದ್ದಲಿಂಗೇಶ್ವರ ನಗರ ರೋಲ್ ಸಂಖ್ಯೆ 8614381 ರಿಂದ 8614820 ರವರೆಗೆ. ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜು ರೋಲ್ ಸಂಖ್ಯೆ 8614841 ರಿಂದ 8615300 ರವರೆಗೆ.

ಬಾಪೂಜಿ ಪಾಲಿಟೆಕ್ನಿಕ್ ರೋಲ್ ಸಂಖ್ಯೆ 8615321 ರಿಂದ 8615640 ರವರೆಗೆ. ಜೈನ್ ಪಾಲಿಟೆಕ್ನಿಕ್, ಬಾಡಾ ಕ್ರಾಸ್ ಹತ್ತಿರ ಆವರಗೆರೆ ರೋಲ್ ಸಂಖ್ಯೆ 8615661 ರಿಂದ 8616080 ರವರೆಗೆ. ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ರೋಲ್ ಸಂಖ್ಯೆ 8616101 ರಿಂದ 8616380 ರವರೆಗೆ. ಸರ್ಕಾರಿ ಪ್ರಥಮ ದರ್ಜೆ ಕಾಲೇಜು ರೋಲ್ ಸಂಖ್ಯೆ 8614601 ರಿಂದ 8617242 ರವರೆಗೆ ಇರುತ್ತದೆ.

ಅರ್ಹ ಅಭ್ಯರ್ಥಿಗಳು ಪ್ರವೇಶ ಪತ್ರಗಳನ್ನು ಇಲಾಖಾ ವೆಬ್‍ಸೈಟ್‍ನಲ್ಲಿ ಡೌನ್‍ಲೋಡ್ ಮಾಡಿಕೊಳ್ಳಬಹುದಾಗಿದ್ದು, ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಸೂಚಿಸಿರುವ ಅಗತ್ಯ ದಾಖಲಾತಿಗಳೊಂದಿಗೆ ಲಿಖಿತ ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯಕ್ಕಿಂತ 60 ನಿಮಿಷ ಮುಂಚಿತವಾಗಿ ಹಾಜರಾಬೆಕೆಂದು ಪೊಲೀಸ್ ಅಧೀಕ್ಷಕರಾದ ಹನುಮಂತರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending