ದಿನದ ಸುದ್ದಿ

ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Published

on

ಸುದ್ದಿದಿನ,ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗಳ ನೇಮಕಾತಿ ಸಂಬಂಧ ಜ.07 ರನ್ವಯ ಪ್ರಥಮ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಹೊರಡಿಸಲಾಗಿರುತ್ತದೆ.

ಈ ಆಯ್ಕೆ ಪಟ್ಟಿಯನ್ನು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿಯ ಸೂಚನಾ ಫಲಕದಲ್ಲಿ ಅಳವಡಿಸಲಾಗಿದ್ದು, ಈ ಬಗ್ಗೆ ಅಭ್ಯರ್ಥಿಗಳು ಕಚೇರಿ ವೇಳೆಯಲ್ಲಿ ಬಂದು ಪರಿಶೀಲಿಸಬಹುದಾಗಿರುತ್ತದೆ ಹಾಗೂ ಈ ಕಚೇರಿ ವೆಬ್‍ಸೈಟ್ ವಿಳಾಸ www.dvgpolice.in ಇಲ್ಲಿ ಸಹ ವೀಕ್ಷಿಸಬಹುದಾಗಿರುತ್ತದೆ ಎಂದು ಪೊಲೀಸ್ ಅಧೀಕ್ಷಕರಾದ ಹನುಮಂತರಾಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9880346243

Trending

Exit mobile version