ದಿನದ ಸುದ್ದಿ
ಪಂಚೇಂದ್ರಿಯಗಳಿಲ್ಲದ ಯಡಿಯೂರಪ್ಪ ಸರ್ಕಾರ : ಸಿದ್ದರಾಮಯ್ಯ ಕಿಡಿ
ಸುದ್ದಿದಿನ,ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದ ಸರ್ಕಾರವು ಪಂಚೇಂದ್ರಿಯಗಳನ್ನು ಕಳೆದುಕೊಂಡಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುಡುಗಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ಮಾತನಾಡಿದ ಅವರು, ಕೊರೊನಾ ವೈರಸ್‍ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನರಿಗೆ ನೆರವು ನೀಡುವಂತೆ ರಾಜ್ಯ ಸರ್ಕಾರಕ್ಕೆ ಎರಡು ಬಾರಿ ಮನವಿ ಸಲ್ಲಿಸಿದ್ದೇನೆ. ಅಸಂಘಟಿತ ಕಾರ್ಮಿಕರು, ಕುಲ ಕಸಬು ಮಾಡುವ ಕುಟುಂಬಗಳಿಗೆ ತಲಾ 10 ಸಾವಿರ ರೂ. ನೀಡುವಂತೆ ತಿಳಿಸಿದ್ದೇನೆ. ಆದರೆ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243