Connect with us

ದಿನದ ಸುದ್ದಿ

ಹಿಂದಿ, ಇಂಗ್ಲಿಷ್ ನಂತರ ಕನ್ನಡ ಪತ್ರಿಕೋದ್ಯಮ ಸ್ವಾತಂತ್ರ್ಯಕ್ಕೂ ಬಂತು ಕುತ್ತು

Published

on

ಸುದ್ದಿದಿನ ಡೆಸ್ಕ್: ನ್ಯಾಯಗಳ ವಿರುದ್ಧ ಅಕ್ಷರಗಳ ಬೆಂಕಿಯುಂಡೆ ಉಗುಳುತ್ತಾ ದೇಶದ ರಾಜಕಾರಣಿಗಳ ಚಳಿ ಬಿಡಿಸಿದ ಗೌರಿ ಲಂಕೇಶ್ ಹತ್ಯೆ ನಡೆದು ಇಂದಿಗೆ ಒಂದು ವರ್ಷವಾಗಿದೆ. ಹತ್ಯೆ ಮಾಡಿದವರು ಯಾರೆಂಬ ಊಹೆಗಳು ನಿಜವಾಗುತ್ತವೆ. ಸತ್ಯ ಹೇಳುವ ಪತ್ರಿಕೋದ್ಯಮ ಇನ್ನು ಮುಂದುವರಿದರೆ ನಾವೆಷ್ಟು ಗೌರಿಗಳನ್ನು ಕಳೆದುಕೊಳ್ಳಬೇಕೋ ಗೊತ್ತಿಲ್ಲ. ಇದಕ್ಕಾಗಿಯೇ ಭಾರತದ ಕೆಲವು ಬಹು ದೊಡ್ಡ ಮಾಧ್ಯಮ ಸಂಸ್ಥೆಗಳು ಹಾಗೂ ಪತ್ರಿಕೆಗಳು ಶರಣಾಗತಿಯ ತಂತ್ರಗಳನ್ನು ಅನುಸರಿಸುತ್ತಿವೆ.

ಸುಪ್ರೀಂ ಕೋರ್ಟ್ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರು ಮೊನ್ನೆಯಷ್ಟೆ ಹೊಸಪೇಟೆಗೆ ಬಂದಿದ್ದರು. ವಿಚಾರ ಸಂಕಿರಣವೊಂದರಲ್ಲಿ ಮಾತನಾಡುತ್ತ ಪತ್ರಿಕೋದ್ಯಮಿಗಳನ್ನು ಹೇಗೆ ಬ್ಲಾಕ್ ಮೇಲ್ ಮಾಡಲಾಗುತ್ತಿದೆ. ತಮ್ಮ ವಿರುದ್ಧ ಬರೆಯದಂತೆ ಹೇಗೆ ನಿಯಂತ್ರಿಸುತ್ತದೆ ಎಂಬ ಮಾಹಿತಿಗಳನ್ನು ಪುಂಖಾನುಪುಂಖವಾಗಿ ನೀಡುತ್ತಾ ಹೋದರು. ಆದರೆ, ಇದನ್ನು ವರದಿ ಮಾಡಿದ ಮಾಧ್ಯಮಗಳು ಭೂಷಣ್ ಈ ಕುರಿತು ನೀಡಿದ ಹೇಳಿಕೆಗಳನ್ನು ತೇಲಿಸಿ ಬರೆದು ತಮಗೇನು ಗೊತ್ತೇ ಇಲ್ಲವೇನೋ ಎಂಬಂತೆ ಮೌನಕ್ಕೆ ಶರಣಾಗಿವೆ. ಅಸಲಿಗೆ ಭೂಷಣ್ ಹೇಳಿದ್ದು ಹೀಗಿತ್ತು. ಸದ್ಯ ಪತ್ರಿಕೋದ್ಯಮ ತುರ್ತು ಪರಿಸ್ಥಿತಿ ದೇಶದಲ್ಲಿದೆ.ಪತ್ರಿಕೆಗಳು, ಹಾಗೂ ಮಾಧ್ಯಮಗಳನ್ನು ಬ್ಲಾಕ್ ಮೇಲ್ ಮಾಡಿ ರಾಜಕೀಯ ಪಕ್ಷ ಹಾಗೂ ಅದಕ್ಕೆ ಸಂಬಂಧಿಸಿದ ಸಂಘಟನೆಯೊಂದು ತಮ್ಮ ವಿರುದ್ಧ ಏನೂ ಬರೆಯದಂತೆ ಷಡ್ಯಂತ್ರ ರೂಪಿಸುತ್ತಿದೆ. ‌ಈ ಪಕ್ಷವು ತನ್ನದೇ ಆದ ದೊಡ್ಡ ಐಟಿ ಸೆಲ್ ರೂಪಿಸಿಕೊಂಡಿದ್ದು ದೇಶದ ಪ್ರಾದೇಶಿಕ ಮಾಧ್ಯಮಗಳು ಹಾಗೂ ಪತ್ರಿಕೆಗಳನ್ನು ತನ್ನ ಹಿಡಿತಕ್ಕೆ ತೆಗೆದುಕೊಳ್ಳಲು ಯತ್ನಿಸುತ್ತಿದೆ. ಅದರಲ್ಲಿ ಈಗ ಬಹುತೇಕ ಸಫಲವಾಗಿದೆ ಕೂಡ. ಈ ಐಟಿ ಸೆಲ್ ಶಿವಮೊಗ್ಗದಂತ ಸಣ್ಣ ಊರಿನಿಂದ ಹಿಡಿದು ಮುಂಬಯಿಯಂತ ದೊಡ್ಡ ನಗರಗಳಲ್ಲೂ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ. ಒಂದು ಮೂಲದ ಪ್ರಕಾರ ಈ ಐಟಿ ಸೆಲ್‍ನಲ್ಲಿ ಕೆಲಸ ಮಾಡುವ ಪ್ರತಿ ಬರಹಗಾರನಿಗೆ ಕನಿಷ್ಠ 50 ಸಾವಿರ ರೂಪಾಯಿ ಸಂಬಳ ನೀಡಲಾಗುತ್ತಿದೆ.ಹೀಗೆ ಅರ್ಧ ಲಕ್ಷ ರೂ. ಸಂಬಳ ಪಡೆಯುತ್ತಿರುವ ಇವರು ಸುಳ್ಳು ಸುದ್ದಿಗಳನ್ನು ಬಿತ್ತುವುದು, ಕೋಮು ಗಲಭೆ ಸೃಷ್ಟಿಸುವುದು. ಒಂದು ಧರ್ಮದ ಕುರಿತು ಇಲ್ಲ ಸಲ್ಲದ ಸುದ್ದಿ ಬರೆಯುವುದು. ಇನ್ನೊಂದು ಧರ್ಮವನ್ನು ಪ್ರಚೋದಿಸುವಂತಹ ಸುದ್ದಿಗಳನ್ನು ಬರೆಯುತ್ತಿದ್ದಾರೆ. ಇದಿಷ್ಟೆ ಅಲ್ಲ ಈ ಐಟಿ ಸೆಲ್ ಸಾಕುತ್ತಿರುವ ರಾಜಕೀಯ ಪಕ್ಷವು ದೇಶವನ್ನು ಉದ್ಧಾರ ಮಾಡುತ್ತಿದೆ ಎಂಬ ಸುಳ್ಳು ಸುದ್ದಿಯನ್ನು ಫೇಸ್‍ಬುಕ್, ಟ್ವಿಟರ್, ವಾಟ್ಸ್ ಆಪ್ ಮೂಲಕ ಹರಡುವುದು ಇದರ ಮುಖ್ಯ ಉದ್ದೇಶ.

ಕಳೆದ ಹಲವು ವರ್ಷಗಳಿಗೆ ಹೋಲಿಸಿದರೆ ಪತ್ರಿಕೆಗಳು ನಡೆಯಲು ಅಗತ್ಯವಾಗಿ ಬೇಕಿರುವ ನ್ಯೂಸ್‍ಪ್ರಿಂಟ್‍ಗಳ ಬೆಲೆ ಈಗ ಶೇ. 50ರಷ್ಟು ಹೆಚ್ಚಾಗಿದೆ. ಹಣ ಹೆಚ್ಚಿಗೆ ಕೊಟ್ಟರೂ ನ್ಯೂಸ್ ಪ್ರಿಂಟ್‍ಗಳನ್ನು ಖರೀದಿಸಲು ಅನುಮತಿ ಸಿಗುತ್ತಿಲ್ಲ. ಪರಿಸರವನ್ನು ಉಳಿಸುವ ಸಲುವಾಗಿ ನ್ಯೂಸ್‍ಪ್ರಿಂಟ್ ಬೆಲೆ ಏರಿಕೆ ಮಾಡಿ ಅದರ ಬಳಕೆ ಕಡಿಮೆ ಮಾಡಲಾಗುತ್ತಿದೆ ಎಂದು ಬೂಸಿ ಬಿಡಲಾಗುತ್ತಿದೆ. ಆದರೆ, ಪತ್ರಿಕೋದ್ಯಮವನ್ನು ನಿಯಂತ್ರಿಸಲು ಕಂಡುಕೊಂಡಿರುವ ಬಹು ದೊಡ್ಡ ದಾರಿ ಇದು.

ಕನ್ನಡದ ದೊಡ್ಡ ಪತ್ರಿಕೆ ಮೇಲೆ ರಾಜಕೀಯ ಪ್ರಭಾವ

ರಾಜಕೀಯ ಸಂಘಟನೆಯೊಂದು ತಾನು ಮಾಧ್ಯಮಗಳನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿರುವ ಬಗ್ಗೆ ಹೆಮ್ಮೆಯಿಂದ ಹೇಳಿಕೊಂಡು ಓಡಾಡುತ್ತಿದೆ. ತಾನು ಕನ್ನಡದ ಒಂದು ದೊಡ್ಡ ಪತ್ರಿಕೆಗೆ ವಾರ್ನಿಂಗ್ ಕೊಟ್ಟಿರುವುದಾಗಿ ಅದು ಬೀಗುತ್ತಿದೆ. ಆ ಸಂಘಟನೆಯ ಕಾರ್ಯಕರ್ತರ ಪ್ರಕಾರ. ಇತ್ತೀಚೆಗೆ ಬಹುಮತ ಸಾಬೀತುಪಡಿಸಲು ವಿಫಲವಾದ ಪಕ್ಷವೊಂದು ತನ್ನ ಆತ್ಮಾವಲೋಕನಾ ಸಭೆಯಲ್ಲಿ ತನ್ನ ವಿಫಲತೆಗೆ ಕಾರಣವಾದ 20 ಅಂಶಗಳ ಪಟ್ಟಿ ಮಾಡಿತು.
ಪ್ರಾದೇಶಿಕ ಹಾಗೂ ರಾಷ್ಟೀಯ ಪಕ್ಷಗಳು ಅಧಿಕಾರ ರಚಿಸಲು ನಾವು ಬಿಡುವುದಿಲ್ಲ ಎಂದು ದೇಶದ ಉನ್ನತ ಸ್ಥಾನದಲ್ಲಿರುವ ರಾಜಕೀಯ ನಾಯಕರೊಬ್ಬರು ದಿಲ್ಲಿಯಲ್ಲಿ ಮಾಡಿದ್ದ ಭಾಷಣವನ್ನು ಕನ್ನಡ ಪತ್ರಿಕೆಯು ತನ್ನ ಮುಖಪುಟದಲ್ಲಿ ವರದಿ ಮಾಡಿತ್ತು. ಈ ವರದಿಯು , ಹೇಳಿಕೆ ನೀಡಿದ ರಾಜಕಾರಣಿಯ ಪಕ್ಷದ ವಿರುದ್ಧ ಕನ್ನಡಿಗರು ಸಂಘಟನೆಯಾಗಲು ಕಾರಣವಾಯಿತು ಎಂಬ ಅಭಿಪ್ರಾಯಗಳು ವ್ಯಕ್ತವಾದವು.

ಈ ಸುದ್ದಿಯನ್ನು ಪಿಟಿಐ ವರದಿ ಮಾಡಿದೆ ಎಂದು ಪತ್ರಿಕೆ ಹೇಳಿತ್ತು. ಇದನ್ನು ಆಧರಿಸಿ ಆ ರಾಜಕೀಯ ಪಕ್ಷವು ಪಿಟಿಐ ಕಚೇರಿಯಾದ್ಯಂತ ತಡಕಾಡಿ ಆ ಸುದ್ದಿ ಪಿಟಿಐನಿಂದ ವರದಿಯಾಗಿಲ್ಲ ಎಂಬುದನ್ನು ಖಚಿತಪಡಿಸಿಕೊಂಡು ಆ ಪತ್ರಿಕೆಯ ಕಚೇರಿಗೆ ಹೋಯಿತು. ಆ ಪಕ್ಷದ ಹಿರಿಯ ನಾಯಕ ಹಾಗೂ ಮಾಜಿ ಸಚಿವರು ಸಂಪಾದಕರೊಂದಿಗೆ ಮಾತನಾಡಿ ಈ ಸುದ್ದಿ ಕೊಟ್ಟವರು ಯಾರು ಎಂಬುದಾಗಿ ಪ್ರಶ್ನಿಸಿತು. ಅಂದಹಾಗೆ ಅದು ಪಿಟಿಐನಿಂದ ವರದಿಯಾಗಿದ್ದ ಸುದ್ದಿ ಆಗಿರಲಿಲ್ಲ ಬದಲಾಗಿ ಅದೇ ಸಂಸ್ಥೆಯ ಇಂಗ್ಲಿಷ್ ವರದಿಗಾರರು ದಿಲ್ಲಿಯಿಂದ ನೀಡಿದ ವರದಿಯಾಗಿತ್ತು. ಅದನ್ನು ಯತಾವತ್ತಾಗಿ ಭಾಷಾಂತರ ಮಾಡಲಾಗಿತ್ತು. ಭಾಷಾಂತರಿಸಿದ ಹಿರಿಯ ಪತ್ರಕರ್ತರಿಗೆ ಕ್ಷಮಾಧಾನ ನೀಡಲಾಗಿದೆಯಾದರೂ ಅದನ್ನು ವರದಿ ಮಾಡಿದ ಇಂಗ್ಲಿಷ್ ಪತ್ರಿಕೆ ವರದಿಗಾರನಿಗೆ ಇನ್ನು ಕಿರುಕುಳ ತಪ್ಪಿಲ್ಲ ಎಂಬ ಮಾಹಿತಿಗಳು ಬಂದಿವೆ.

ಕನ್ನಡಿಗರ ವಿಶ್ವಾಸ ಗಳಿಸಿ ಸ್ವಾತಂತ್ರ ನಂತರದ ದಿನಗಳಿಂದಲೂ ಸಮಾಜದ ಕಟ್ಟಕಡೆಯ ವ್ಯಕ್ತಿಪರವಾಗಿ ನಿಂತಿದ್ದ ಈ ದೊಡ್ಡ ಪತ್ರಿಕೆಯ ಕತೆಯೇ ಹೀಗಾದರೆ ಮಿಕ್ಕ ಪತ್ರಿಕೆಗಳ ಕತೆಯೇನು? ಕೋಬ್ರಾ ಪೋಸ್ಟ್ ಈಗಾಗಲೇ ನೀಡಿರುವ ಸೂಜಿ ಮೊನೆ ಕಾರ್ಯಚರಣೆಯಲ್ಲಿ ಸಿಕ್ಕಿಬಿದ್ದಿರುವ ಸಂಪಾದಕರನ್ನು ನೋಡಿದ್ದೀರ. ಇದರರ್ಥ ಕೆಲವರು ಆ ಪಕ್ಷದ ಜತೆ ಕೈ ಜೋಡಿಸಿ ಡೀಲ್ ಆಗಿದ್ದಾರೆ. ಇನ್ನೂ ಕೆಲವರು ಡೀಲ್ ಆಗದೆ ಬೆದರಿಕೆ ಎದುರಿಸುತ್ತಿದ್ದಾರೆ.

ಏನು ಮಾಡಬೇಕು?

ಮಾಧ್ಯಮ ಸಂಸ್ಥೆಗಳ ಮೇಲೆ ರಾಜಕೀಯ ನಾಯಕರು, ಪಕ್ಷಗಳ ಪ್ರಭಾವ ಬೀರುತ್ತಿರುವುದು ಇಂದು ನಿನ್ನೆಯದಲ್ಲ. ಯಾವ ಸರಕಾರ ಬಂದರೂ, ಯಾವ ಪಕ್ಷ ಅಧಿಕಾರಕ್ಕೆ ಬಂದರೂ ಇಂಥ ಅನಾಚಾರ ತಪ್ಪಲ್ಲ. ಈಗ ಸ್ವಲ್ಪ ಹೆಚ್ಚಾಗಿದೆ ಎಂದುಕೊಳ್ಳೋಣ. ವಿಶ್ವಾಸಾರ್ಹವಾದ ಸುದ್ದಿಗಳನ್ನು ತಿಳಿಯಬೇಕಿದ್ದರೆ ನವ ಹಾಗೂ ಸ್ವತಂತ್ರ ಮಾಧ್ಯಮಗಳನ್ನು ಆಯ್ಕೆ ಮಾಡಿಕೊಳ್ಳಿ. ಅವುಗಳಿ ಆಗಿ ನಿಮ್ಮ ಕೈಲಾದಷ್ಟು ಸಹಾಯ ಮಾಡಿ. ಐದು ರೂಪಾಯಿಂದ ಸಾವಿರ ರೂ. ವರೆಗೆ ಆರ್ಥಿಕ ಸಹಾಯ ಮಾಡಿ ಅವನ್ನು ಪೋಷಿಸಿ.

ನಮಸ್ಕಾರ
ಸುದ್ದಿದಿನ ಸಂಪಾದಕೀಯ ಬಳಗ

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ5 hours ago

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ. ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ,...

ದಿನದ ಸುದ್ದಿ5 hours ago

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ತಿರಸ್ಕೃತಗೊಂಡ...

ದಿನದ ಸುದ್ದಿ3 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ3 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ4 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ5 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ5 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ1 week ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ2 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ2 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

Trending