ದಿನದ ಸುದ್ದಿ
ಸರ್ಕಾರದ ಮಂಡಳಿಗಳಿಗೆ ಸಚಿವರ ಮಕ್ಕಳ ಆಯ್ಕೆ ; ಏನಿದು ಕುಟುಂಬ ರಾಜಕೀಯ
ಸುದ್ದಿದಿನಡೆಸ್ಕ್:ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನಾರಚಿಸಲಾಗಿದ್ದು, ಶಾಸಕರ ಜತೆಗೆ ಕೆಲ ಸಚಿವರು, ಶಾಸಕರ ಮಕ್ಕಳನ್ನು ಮಂಡಳಿಗೆ ಸದಸ್ಯರನ್ನಾಗಿ ನೇಮಿಸಲಾಗಿದೆ.
ಮುಂದಿನ ಮೂರು ವರ್ಷಗಳ ಅವಧಿಗೆ ವನ್ಯ ಜೀವಿ ಮಂಡಳಿಯನ್ನು ರಚಿಸಿ ಆದೇಶಿಸಲಾಗಿದ್ದು, ಮಂಡಳಿ ನಿಯಮದಂತೆ ಸಿಎಂ ಅಧ್ಯಕ್ಷ ಹಾಗೂ ಅರಣ್ಯ ಸಚಿವ ಈಶ್ವರ್ ಖಂಡ್ರೆ ಉಪಾಧ್ಯಕ್ಷರಾಗಿರಲಿದ್ದಾರೆ. ಅವರೊಂದಿಗೆ ವಿವಿಧ ವಿಭಾಗಗಳಲ್ಲಿ 16 ಮಂದಿಯನ್ನು ಸದಸ್ಯರನ್ನಾಗಿ ನೇಮಿಸಲಾಗಿದೆ.
ರಾಜ್ಯ ವಿಧಾನಮಂಡಲದ ಸದಸ್ಯರಾಗಿ ಶಾಸಕರಾದ ಅಶೋಕ್ ಎಂ.ಪಟ್ಟಣ, ಎಚ್.ಎಂ.ಗಣೇಶ್ ಪ್ರಸಾದ್, ವಿಧಾನಪರಿಷತ್ ಸದಸ್ಯ ಪುಟ್ಟಣ್ಣ ಅವರನ್ನು ನಿಯೋಜಿಸಲಾಗಿದೆ. ವನ್ಯಜೀವಿ ಬಗ್ಗೆ ಕೆಲಸ ಮಾಡುವ ಸರ್ಕಾರೇತರ ಸಂಸ್ಥೆಗಳಿಂದ ವೈಲ್ಡ್‌ಲೈಫ್ ಅಸೋಸಿಯೇಷನ್ ಆಫ್ ಸೌತ್ ಇಂಡಿಯಾದ ಸುಶೀಲ್ ಗ್ಯಾನ್ ಚಂದ್, ಟೈಗರ್ಸ್ ಅನ್‌ಲಿಮಿಟೆಡ್ ವೈಲ್ಡ್ ಲೈಫ್ ಸೊಸೈಟಿಯ ಸೀಮಾ ಬೇಗಂ ಖಲೀಲ್, ಬೆಂಗಳೂರು ಟ್ರಸ್ಟ್‌ನ ಡಾ. ಆರ್.ವಿ.ದಿನೇಶ್ ಅವರನ್ನು ನೇಮಿಸಲಾಗಿದೆ.
ಸಂರಕ್ಷಣಾ ವಿಶೇಷ ತಜ್ಞರು, ಜೀವಿ ಶಾಸ್ತ್ರಜ್ಞರು ಹಾಗೂ ಪರಿಸರವಾದಿಗಳ ವಿಭಾಗದಲ್ಲಿ ಸಚಿವ ಎಂ.ಬಿ. ಪಾಟೀಲ್ ಪುತ್ರ ಧ್ರುವ್ ಪಾಟೀಲ್, ಶಾಸಕ ವಿನಯ್ ಕುಲಕರ್ಣಿ ಪುತ್ರಿ ವೈಶಾಲಿ ಕುಲಕರ್ಣಿ ಅವರೂ ಸೇರಿದಂತೆ ರವೀಂದ್ರ ರಘುನಾಥ್, ಚಿಕ್ಕಣ್ಣ, ಡಾ. ರಾಜ್‌ಕುಮಾರ್ ಎಸ್.ಅಲೆ, ಸಂಕೇತ್ ಪೂವಯ್ಯ, ಅಜಿತ್ ಕರಿಗುಡ್ಡಯ್ಯ, ವಿನಯ್‌ಕುಮಾರ್ ಮಾಳಿಗೆ, ಡಾ. ಸಂತೃಪ್ತ, ಮಲ್ಲಪ್ಪ ಎಸ್.ಅಂಗಡಿ ಅವರನ್ನು ಸದಸ್ಯರನ್ನಾಗಿಸಲಾಗಿದೆ.
ಉಳಿದಂತೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿವಿಧ ಇಲಾಖೆಗಳು, ಸಂಸ್ಥೆಗಳ 10 ಅಧಿಕಾರಿಗಳನ್ನು ಪದನಿಮಿತ್ತ ಸದಸ್ಯರನ್ನಾಗಿಸಲಾಗಿದೆ. ರಾಜ್ಯ ವನ್ಯ ಜೀವಿ ವಿಭಾಗದ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರು ಮಂಡಳಿಯ ಸದಸ್ಯ ಕಾರ್ಯದರ್ಶಿಯಾಗಿ ಕೆಲಸ ಮಾಡಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದೇವದಾಸಿ ಪುನರ್ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ಎಮ್.ಸಿ.ಸಿ ‘ಬಿ’ ಬ್ಲಾಕ್, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಫೆಬ್ರವರಿ 12 ರೊಳಗಾಗಿ ಕಚೇರಿ ಸಲ್ಲಿಸಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ಯೋಜನಾಧಿಕಾರಿಗಳ ಹುದ್ದೆ ಸಂಖ್ಯೆ-1, ನಿವೃತ್ತ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಎಂಎಸ್ಡಬ್ಲ್ಯೂ, ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ, ಮನಃಶಾಸ್ತ್ರದಲ್ಲಿ ಎಂ.ಎಸ್ಸಿ, ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ಚನ್ನಗಿರಿ ತಾಲ್ಲೂಕು ಯೋಜನಾ ಅನುಷ್ಟಾನಾಧಿಕಾರಿಗಳು ಹುದ್ದೆ ಸಂಖ್ಯೆ-1, ಬಿಎಸ್ಡಬ್ಲ್ಯೂ, ಬಿಎ ಇನ್ ಸೋಶಿಯಲಾಜಿ, ಎಂಎಸ್ಸಿ ಇನ್ ಸೈಕೋಲಾಜಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು. ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
ದೇವದಾಸಿ ಪುನರ್ ವಸತಿ ಯೋಜನೆ, ಜಿಲ್ಲಾ ಕಚೇರಿ, ದಾವಣಗೆರೆ ಸ್ಥಳಕ್ಕೆ ದಾಖಲಾಧಿಕಾರಿಗಳ ಹುದ್ದೆ ಸಂಖ್ಯೆ-1, ಬಿಕಾಂ ಪದವಿ ಅಥವಾ ತತ್ಸಮಾನ ಪದವಿ ಹಾಗೂ ಕಡ್ಡಾಯವಾಗಿ ಕಂಪ್ಯೂಟರ್ ಕನ್ನಡ ಮತ್ತು ಇಂಗ್ಲೀಷ್ ಟೈಪಿಂಗ್ ಜ್ಞಾನವನ್ನು ಹೊಂದಿರಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ: 08192-222117 ಸಂಪರ್ಕಿಸಬಹುದೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ
ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ ಘಟಕಗಳಿಂದ ರಾಜ್ಯದಾದ್ಯಂತ ಬರುವ ಭಕ್ತಾಧಿಗಳ ಅನುಕೂಲಕ್ಕಾಗಿ 25 ಹೆಚ್ಚುವರಿ ವಿಶೇಷ ವಾಹನ ಕಾರ್ಯಾಚರಣೆ ಮಾಡಲಾಗಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

ದಿನದ ಸುದ್ದಿ
ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ
ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು ಬಾಪೂಜಿ ಸೇವಾ ಕೇಂದ್ರ ಸಿಬ್ಬಂದಿ ವರ್ಗದವರಿಗೆ ತರಬೇತಿ ಆಯೋಜಿಸಲಾಗಿದೆ.
ತರಬೇತಿಯು ಜ.30 ರಂದು ಹೊನ್ನಾಳಿ ಉಪ ನೋಂದಣಿ ಕಚೇರಿ ಆವರಣ, ಜ.31 ರಂದು ಚನ್ನಗಿರಿ ಉಪ ನೋಂದಣಿ ಕಚೇರಿ ಆವರಣ, ಫೆ.2 ರಂದು ಹರಿಹರ ಉಪ ನೋದಣಿ ಕಚೇರಿ ಆವರಣ, ಫೆ.3 ರಂದು ದಾವಣಗೆರೆ ಉಪ ನೋಂದಣಿ ಕಚೇರಿ, ಫೆ.4 ರಂದು ಜಗಳೂರು ಉಪ ನೋಂದಣಿ ಕಚೇರಿ ಆವರಣಗಳಲ್ಲಿ ಮಧ್ಯಾಹ್ನ 1 ರಿಂದ 2 ಗಂಟೆಯವರೆಗೆ ನಡೆಯಲಿದೆ ಎಂದು ಜಿಲ್ಲಾ ನೋಂದಣಾಧಿಕಾರಿ ತಿಳಿಸಿದ್ದಾರೆ.


