ದಿನದ ಸುದ್ದಿ

ಮತದಾನ ಪ್ರಮಾಣ ಕಳೆದ ಬಾರಿಗಿಂತ ಹೆಚ್ಚಳ

Published

on

ಸುದ್ದಿದಿನ ಡೆಸ್ಕ್ : ನಿನ್ನೆ ನಡೆದ ಕರ್ನಾಟಕ ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಶಾಂತಿಯುತ ಮತದಾನವಾಗಿದ್ದು, ಶೇಕಡ 72.81ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

2008ರ ಚುನಾವಣೆಯಲ್ಲಿ ಶೇಕಡ 72.44ರಷ್ಟು ಮತದಾನವಾಗಿದ್ದು ಅದಕ್ಕೆ ಹೋಲಿಸಿದರೆ ಈ ಬಾರಿ ಮತದಾನದ ಪ್ರಮಾಣ ತುಸು ಹೆಚ್ಚಾಗಿದೆ. ಅಂಚೆ ಮತಗಳು ಹಾಗೂ ಮನೆಯಿಂದಲೇ ಮಾಡಿದ ಮತಗಳನ್ನು ಪರಿಗಣಿಸಿದರೆ ಶೇಕಡವಾರು ಮತದಾನ ಇನ್ನು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಜಿಲ್ಲಾವಾರು ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಶೇಕಡ ೮೫.೮೩ರಷ್ಟು ಮತದಾನದೊಂದಿಗೆ ಮೊದಲ ಸ್ಥಾನದಲ್ಲಿದ್ದರೆ, ರಾಮನಗರ ಶೇಕಡ 84.98 ರಷ್ಟು ಪ್ರಮಾಣದೊಂದಿಗೆ ಎರಡನೇ ಸ್ಥಾನದಲ್ಲಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಶೇಕಡ 56.98ರಷ್ಟು ಮತದಾನವಾಗಿದ್ದು, 2018ರ ಚುನಾವಣೆಯಲ್ಲಿ ಶೇಕಡ 56.92ರಷ್ಟು ಮತದಾನವಾಗಿತ್ತು. ರಾಜ್ಯದ 224 ವಿಧಾನಸಭಾ ಕ್ಷೇತ್ರಗಳ ಎಲ್ಲ ಮತ ಯಂತ್ರಗಳನ್ನು ಭದ್ರವಾಗಿ ಇಡಲಾಗಿದ್ದು, ಸ್ಟ್ರಾಂಗ್ ರೂಂಗಳಲ್ಲಿ 3 ಹಂತದ ಭದ್ರತೆಯನ್ನು ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಎಲ್ಲಾ ಜಿಲ್ಲೆಗಳ ಚುನಾವಣಾಧಿಕಾರಿಗಳು ಸ್ಟ್ರಾಂಗ್ ರೂಂ ಕೇಂದ್ರಗಳಿಗೆ ಭೇಟಿ ನೀಡಿ ಸುರಕ್ಷತೆಯನ್ನು ಪರಿಶೀಲಿಸಿದರು. ನಾಡಿದ್ದು13 ರಂದು 34 ಕೇಂದ್ರಗಳಲ್ಲಿ ಮತ ಎಣಿಕೆ ನಡೆಯಲಿದ್ದು, ಅಂದೇ ಫಲಿತಾಂಶ ಹೊರಬೀಳುವ ನಿರೀಕ್ಷೆ ಇದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version