ದಿನದ ಸುದ್ದಿ
ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳು ಮೇಲ್ದರ್ಜೆಗೆ : ಸಿಎಂ ಬೊಮ್ಮಾಯಿ
ಸುದ್ದಿದಿನ ಡೆಸ್ಕ್ : ರಾಜ್ಯದ ಎಲ್ಲಾ ಪಾಲಿಟೆಕ್ನಿಕ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸುಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದರೆಯಲ್ಲಿ ರೈತ ನಿಧಿ ಫಲಾನುಭವಿ ವಿದ್ಯಾರ್ಥಿಗಳ ಜತೆ ಬುಧವಾರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿ, ವಿದ್ಯಾರ್ಥಿಗಳು ನವ ಕರ್ನಾಟಕದ ಮೂಲಕ ನವಭಾರತ ನಿರ್ಮಾಣ ಮಾಡುವ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.
ರಾಜ್ಯದಲ್ಲಿ 4 ಲಕ್ಷ ಮಹಿಳೆಯರಿಗೆ ಉದ್ಯೋಗ ಒದಗಿಸುವ ಯೋಜನೆ ರೂಪಿಸಲಾಗಿದೆ. ಕಾರ್ಮಿಕರು, ದುಡಿಯುವ ವರ್ಗದ ಕಲ್ಯಾಣಕ್ಕಾಗಿ ಅನೇಕ ಕಾರ್ಯಕ್ರಮ ಜಾರಿಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243