Connect with us

ದಿನದ ಸುದ್ದಿ

ಪಾಲಿಟೆಕ್ನಿಕ್ ಶಿಕ್ಷಣದಿಂದ ಉದ್ಯೋಗ ಖಚಿತ : ಸಚಿವ ಡಾ.ಅಶ್ವಥ್ ನಾರಾಯಣ್

Published

on

ಸುದ್ದಿದಿನ,ಉಡುಪಿ : ಪಾಲಿಟೆಕ್ನಿಕ್ ಶಿಕ್ಷಣ ಪಡೆಯುವದರಿಂದ ವಿದ್ಯಾರ್ಥಿಗಳಿಗೆ ಖಚಿತವಾಗಿ ಉದ್ಯೋಗ ಪಡೆಯಬಹುದಾಗಿದ್ದು, ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲಿಟೆಕ್ನಿಕ್ ಕಾಲೇಜುಗಳಿಗೆ ಸೇರ್ಪಡೆಗೊಂಡು ಅದರ ಪ್ರಯೋಜನ ಪಡೆಯುವಂತೆ , ರಾಜ್ಯದ ಉನ್ನತ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ವಿದ್ಯುನ್ಮಾನ ಐಟಿ&ಬಿಟಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಡಾ.ಅಶ್ವಥ್ ನಾರಾಯಣ್ ಹೇಳಿದರು.

ಅವರು ಇಂದು ಬೆಳಪುನಲ್ಲಿ 8 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉದ್ಘಾಟಿಸಿ ಮಾತನಾಡಿದರು.

ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ 21 ನೇ ಶತಮಾನದ ಅವಶ್ಯಕತೆಗಳಿಗೆ ಅನುಗುಣವಾಗಿ ಕೋರ್ಸ್ ಗಳನ್ನು ಅಳವಡಿಸಿಕೊಂಡಿದ್ದು ,ಈ ಕೋಸ್ ð ಗಳನ್ನು ಅಳವಡಿಸಿಕೊಳ್ಳುವ ಮೊದಲು ವಿವಿಧ ಪ್ರಸಿದ್ದ ಕೈಗಾರಿಕೆಗಳ ಮುಖ್ಯಸ್ಥರು ಮತ್ತು ಕೈಗಾರಿಕಾ ತಂತ್ರಜ್ಞರೊAದಿಗೆ ಚರ್ಚಿಸಿ , ಮುಂದಿನ ದಿನಗಳಲ್ಲಿ ತಂತ್ರಜ್ಞಾನದ ಬಳಕೆಗೆ ಅಗತ್ಯವಿರುವ ಕೋಸ್ ðಗಳನ್ನು ಮಾರ್ಪಡಿಸಿ,ಮರು ಸಿದ್ದಪಡಿಸಿದ್ದು, ದೇಶದಲ್ಲಿ ಈ ರೀತಿ ಇಡೀ ಪಠ್ಯವನ್ನು ಮಾರ್ಪಡಿಸಿದ ಮೊದಲ ಇದನ್ನು ಇಡೀ ರಾಜ್ಯ ಕರ್ನಾಟಕವು ವಾಗಿದೆ ಎಂದರು.

ನೂತನ ರಾಷ್ಟಿçÃಯ ಶಿಕ್ಷಣ ನೀತಿಯಂತೆ ಮಲ್ಟಿ ಎಂಟ್ರಿ- ಮಲ್ಟಿ ಎಕ್ಸಿಟ್ ಮಾದರಿಯಲ್ಲಿ ಪಾಲಿಟೆಕ್ನಿಕ್ ಶಿಕ್ಷಣವನ್ನು ಸಿದ್ದಪಡಿಸಿದ್ದು,ಒಂದು ವರ್ಷ, 2 ವರ್ಷ ಮತ್ತು 3 ವರ್ಷ ಅಭ್ಯಾಸ ಮಾಡುವವರಿಗೆ ಅಗತ್ಯವಿರುವ ಶಿಕ್ಷಣವನ್ನು ರೂಪಿಸಿದ್ದು,ಇದು ಅಂತಾರಾಜ್ಯ ಮತ್ತು ದೇಶದ ಮಾನದಂಡಗಳಿಗೆ ಅನುಗುಣವಾಗಿ ರೂಪಿಸಿದೆ ಎಂದರು.

ರಾಜ್ಯದ ಪಾಲಿಟೆಕ್ನಿಕ್ ಕಾಲೇಜುಗಳಲ್ಲಿ ಕಲಿಕೆಯಲ್ಲಿ ಗುಣಮಟ್ಟ ಹೆಚ್ಚಿಸಲು , ಕಾಂಪ್ರೆöÊನ್ಸಿವ್ ಲರ್ನಿಂಗ್ ಮ್ಯಾನೇಜ್ ಮೆಂಟ್ ಸಿಸ್ಟಂ, ಎಲ್ಲಾ ಕ್ಸಾಸ್ ರೂ ಂ ಗಳಿಗೆ ಇಂಟರ್ನೆಟ್ ಎನೇಬಲ್ ಸ್ಮಾಟ್ ಕ್ಲಾಸ್ ಹಾಗೂ ವಿದ್ಯಾರ್ಥಿಗಳಿಗೆ ಟ್ಯಾಬ್ ನ ನೀಡುವ ಮೂಲಕ , ಕಲಿಕೆಯಲ್ಲಿ ಸಂಪೂರ್ಣ ಡಿಜಿಟಲೈಸೇಶನ್ ಮಾಡಲಾಗುವುದು ಎಂದರು.

ಬೆಳಪು ನಲ್ಲಿ ನಿರ್ಮಾಣಗೊಳ್ಳುತ್ತಿರುವ ವಿಜ್ಞಾನ ಕೇಂದ್ರವನ್ನು 2022 ರ ಮಾರ್ಚ್ ನಲ್ಲಿ ಉದ್ಘಾಟಿಸಲಾಗುವುದು ಹಾಗೂ ಇಲ್ಲಿ ಸ್ನಾತಕೋತ್ತರ ವಿಜ್ಞಾನ ಕೇಂದ್ರ ಕೂಡಾ ಪ್ರಾರಂಭವಾಗಲಿದೆ ಎಂದರು.

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, ಬಹು ಬೇಡಿಕೆ ಇರುವ ಕೋರ್ಸ್ಗಳಿಗೆ ಮಾತ್ರ ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದು, ಅಂತಹ ಕೋಸ್ ðಗಳನ್ನೇ ಕಾಪು ಪಾಲಿಟೆಕ್ನಿಕ್ ನಲ್ಲಿ ಆರಂಭಿಸಲಾಗಿದೆ, ನೂತನ ಶಿಕ್ಷಣ ನೀತಿಯಂತೆ ಆಯಾ ಭಾಗಗಳಿಗೆ ಅಗತ್ಯವಿರುವ ಶಿಕ್ಷಣವನ್ನು ನೀಡಲು ಹೆಚ್ಚಿನ ಸ್ವಾತಂತ್ರö್ಯ ನೀಡಲಾಗಿದೆ ಎಂದರು.

ಕಾಪು ಶಾಸಕ ಲಾಲಾಜಿ ಮೆಂಡನ್ ಮಾತನಾಡಿ, ಪಾಲಿಟೆಕ್ನಿಕ್ ಕಾಲೇಜಿಗೆ ಅಗತ್ಯವಿರುವಿನ್ನಿತರ ಮೂಲಬೂತ ಸೌಕರ್ಯಗಳು ಹಾಗೂ ರಸ್ತೆ ಸಂಪರ್ಕ ಮತ್ತು ಸಾರಿಗೆ ವ್ಯವಸ್ಥೆ ಒದಗಿಸಲಾಗುವುದು,ಬೆಳಪು ನಲ್ಲಿ ವಿಜ್ಞಾನ ಕೇಂದ್ರ ಕೂಡಾ ಶೀಘ್ರದಲ್ಲಿ ಆರಂಭಗೊಳ್ಳಿದ್ದು,ಬೆಳಪು ಶಿಕ್ಷಣ ಕ್ಷೇತ್ರದ ಸಮೂಹ ಕೇಂದ್ರವಾಗಲಿದೆ ,ವಿದ್ಯಾರ್ಥಿಗಳು ಇದರ ಪ್ರಯೋಜನಗಳನ್ನು ಪಡೆಯಬೇಕು ಎಂದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ , ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬೆಳಪು ಗ್ರಾಮ ಪಂಚಾಯತ್ ಅಧ್ಯಕ್ಷೆ ಶೋಭಾ ಬಿ ಭಟ್,ನಿವೃತ್ತ ಪ್ರಾಂಶುಪಾಲ ಗಣಪತಿ ಮತ್ತಿತರರು ಉಪಸ್ಥಿತರಿದ್ದರು.

ಕಾಪು ಪಾಲಿಟೆಕ್ನಿಕ್ ಕಾಲೇಜಿನ ಉಪನ್ಯಾಸಕ ಸುನಿಲ್ ಕುಮಾರ್ ಶೆಟ್ಟಿ ಸ್ವಾಗತಿಸಿದರು, ಪಾಲಿಟೆಕ್ನಿಕ್ ನ ವಿಶೇಷಾಧಿಕಾರಿ ಮಂಜುನಾಥ ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಶಿವಮೊಗ್ಗಕ್ಕೆ ಇಂದು ಪ್ರಧಾನಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ, ಶಿವಮೊಗ್ಗ : ಪ್ರಧಾನಮಂತ್ರಿ ನರೇಂದ್ರ ಮೋದಿ ಇಂದು ಮಧ್ಯಾಹ್ನ 2 ಗಂಟೆಗೆ ಶಿವಮೊಗ್ಗದಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನುದ್ದೇಶಿ ಮಾತನಾಡಲಿದ್ದಾರೆ.

ಯುವಜನರು, ಮಹಿಳೆಯರು, ರೈತರು ಸೇರಿ ಸುಮಾರು ಎರಡೂವರೆ ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಎನ್.ರವಿಕುಮಾರ್ ಶಿವಮೊಗ್ಗದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚುನಾವಣಾ ಬಾಂಡ್ ಕುರಿತ ದತ್ತಾಂಶ ಬಿಡುಗಡೆ

Published

on

ಸುದ್ದಿದಿನ,ನವದೆಹಲಿ : ಚುನಾವಣಾ ಬಾಂಡ್ ಕುರಿತಂತೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ ಇಂದ ಲಭ್ಯವಾದ ಅಂಕಿಕೃತ ದತ್ತಾಂಶ ಮಾದರಿಯನ್ನು ಚುನಾವಣಾ ಆಯೋಗ ಭಾನುವಾರ ತನ್ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಿದೆ. www.eci.gov.in/candidate-politicalparty ವೆಬ್‌ಸೈಟ್‌ನಲ್ಲಿ ಈ ದತ್ತಾಂಶ ಲಭ್ಯವಿರುತ್ತದೆ.

ಸುಪ್ರೀಂಕೋರ್ಟ್ ನಿರ್ದೇಶಿಸಿದಂತೆ ರಾಜಕೀಯ ಪಕ್ಷಗಳು ಚುನಾವಣಾ ಬಾಂಡ್ ಕುರಿತ ದತ್ತಾಂಶಗಳನ್ನು ಮೊಹರು ಹಾಕಿದ ಲಕೋಟೆಯಲ್ಲಿ ಸಲ್ಲಿಸಿದ್ದವು ಎಂದು ಚುನಾವಣಾ ಆಯೋಗದ ಹೇಳಿಕೆ ತಿಳಿಸಿದೆ. ರಾಜಕೀಯ ಪಕ್ಷಗಳಿಂದ ಸ್ವೀಕರಿಸಿದ ಮೊಹರು ಹಾಕಿದ ಲಕೋಟೆಗಳನ್ನು ತೆರೆಯದೇ ಸುಪ್ರೀಂಕೋರ್ಟ್‌ಗೆ ಸಲ್ಲಿಸಲಾಗಿತ್ತು.

ಇದೇ 15ರಂದು ಸುಪ್ರೀಂಕೋರ್ಟ್ ನೀಡಿದ ಆದೇಶದ ಮೇರೆಗೆ ಸುಪ್ರೀಂಕೋರ್ಟ್‌ನ ರಿಜಿಸ್ಟ್ರಿ, ಭೌತಿಕ ಪ್ರತಿ ಹಾಗೂ ಅದರ ಡಿಜಿಟಲ್ ದಾಖಲೆಯಿರುವ ಪೆನ್‌ಡ್ರೈವ್ ಒಳಗೊಂಡ ಮೊಹರು ಹಾಕಿದ ಲಕೋಟೆಯನ್ನು ಹಿಂತಿರುಗಿಸಿತ್ತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಶ್ಮಿ ಚಂದ್ರಗಿರಿ ಅವರಿಗೆ ಪಿಎಚ್.ಡಿ ಪದವಿ

Published

on

ಸುದ್ದಿದಿನ,ಹಾವೇರಿ : ನಗರದ ರಶ್ಮಿ ಚಂದ್ರಗಿರಿ ಅವರು ಕರ್ನಾಟಕ ವಿಶ್ವವಿದ್ಯಾಲಯಕ್ಕೆ ಮಂಡಿಸಿದ “ದಲಿತ ಬಂಡಾಯ ಕಾದಂಬರಿಗಳಲ್ಲಿ ಸಾಂಸ್ಕೃತಿಕ ನೆಲೆಗಳು” ಎಂಬ ಮಹಾಪ್ರಬಂಧಕ್ಕೆ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರಧಾನ ಮಾಡಿದೆ.

ಇವರಿಗೆ ಡಾ.ಬಿಎಸ್.ಭಜಂತ್ರಿ , ಸಹಾಯಕ ಪ್ರಧ್ಯಾಪಕರು ಕರ್ನಾಟಕ ಕಲಾ ಮಹಾವಿದ್ಯಾಲಯ ಧಾರವಾಡ ಇವರು ಮಾರ್ಗದರ್ಶನ ಮಾಡಿದ್ದರು.

ಬರವಣಿಗೆಯಲ್ಲಿ ತೊಡಗಿಸಿಕೊಂಡಿರುವ ರಶ್ಮಿ ಚಂದ್ರಗಿರಿಯವರ ಹಲವು ಲೇಖನಗಳು ನಿಯತಕಾಲಿಕೆಗಳಲ್ಲಿ ಪ್ರಕಟಗೊಂಡಿವೆ. ಪ್ರಸ್ತುತ ಇವರು ಉಪನ್ಯಾಸಕಿಯಾಗಿ ಕಾರ್ಯನಿರ್ವಹಿಸಿತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending