ದಿನದ ಸುದ್ದಿ

ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಪ್ರವೇಶ : ಅವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಫೆ.14 ರವರೆಗೆ ವಿಸ್ತರಿಸಲಾಗಿದೆ.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2020-21ನೇ ಸಾಲಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು ಅರ್ಜಿ ಅವಧಿಯನ್ನು ಫೆ.14 ರವರೆಗೆ ವಿಸ್ತರಿಸಲಾಗಿದೆ.

ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯವು ಪ್ರವರ್ಗ-1 (ಎಸ್.ಸಿ. ಮತ್ತು ಎಸ್.ಟಿ) ಕ್ಕೆ ರೂ.2.50 ಲಕ್ಷ ಹಾಗೂ ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಮತ್ತು ಇತರೆಗೆÉ ರೂ.1 ಲಕ್ಷದ ಮಿತಿಯಲ್ಲಿರಬೇಕು. ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್‍ಸೈಟ್ www.bcwd.karnataka.gov.in ನ್ನು ನೋಡಬಹುದು.

ಅರ್ಜಿ ಸಲ್ಲಿಸಲು www.bcwd.karnataka.gov.in ವೆಬ್‍ಸೈಟ್‍ನ್ನು ಸಂಪರ್ಕಿಸಬಹುದಾಗಿದ್ದು ತಾಂತ್ರಿಕ ತೊಂದರೆಗಳಾದಲ್ಲಿ bcwd.hostels@karnataka.gov.in
ಗೆ ಇ-ಮೇಲ್ ಮುಖಾಂತರ ಅಥವಾ ಅಗತ್ಯ ದಾಖಲೆಗಳೊಂದಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080-8050370006 ಕ್ಕೆ ಕರೆ ಮಾಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿಗಳಾದ ಎಸ್.ಆರ್.ಗಂಗಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version