ದಿನದ ಸುದ್ದಿ
2,637 ಗ್ರಾಮೀಣ ಅಂಚೆ ನೌಕರರ ಹುದ್ದೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಭಾರತೀಯ ಅಂಚೆ ಇಲಾಖೆ, ಕರ್ನಾಟಕ ಅಂಚೆ ವೃತ್ತವು ಕರ್ನಾಟಕದಲ್ಲಿರುವ 2,637 ಗ್ರಾಮೀಣ ಅಂಚೆ ನೌಕರರ ಹುದ್ದೆಗಳನ್ನು ತುಂಬಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕನಿಷ್ಠ ವಿದ್ಯಾರ್ಹತೆ ಎಸ್‍ಎಸ್‍ಎಲ್‍ಸಿ ಮತ್ತು ವಯೋಮಿತಿ ಕನಿಷ್ಠ 18 ರಿಂದ 40 ವರ್ಷಗಖಾಗಿದ್ದು, ಅನುಸೂಚಿತ ಜಾತಿ/ಬುಡಕಟ್ಟು/ಹಿಂದುಳಿದ ವರ್ಗಗಳಿಗೆ ಸೇರದ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ. ಅಭ್ಯರ್ಥಿಗಳು ತಮ್ಮ ಹೆಸರನ್ನು ವೆಬ್‍ಸೈಟ್ http://indiapost.gov.in
ಅಥವಾ http://appost.in/gdsonline
ರಲ್ಲಿ ನೋಂದಾಯಿಸಿಕೊಳ್ಳಬಹುದು.
ಇತರ ಹಿಂದುಳಿದ ವರ್ಗಗಳ ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ.100 ಅರ್ಜಿ ಶುಲ್ಕವನ್ನು ರಾಜ್ಯದ ಯಾವುದೇ ಮುಖ್ಯ ಕಚೇರಿ ಅಥವಾ ಆಯ್ದ ಅಂಚೆ ಕಚೇರಿಗಳ ಕೌಂಟರ್‍ನಲ್ಲಿ ಪಾವತಿಸಿಬಹುದು. ಯು.ಆರ್.ಎಲ್ ಲಿಂಕ್ ಮೂಲಕ ಕೂಡ ಪಾವತಿಸಿಬಹುದು.
ಮಹಿಳಾ ಅಭ್ಯರ್ಥಿಗಳಿಗೆ ಮತ್ತು ಅನುಸೂಚಿತ ಜಾತಿ/ಬುಡಕಟ್ಟು ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ. ಅರ್ಜಿಗಳಯನ್ನು ಸೆ.04 ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ವೆಬ್‍ಸೈಟ್ http://appost.in/gdsonline
ಸಂರ್ಪಕಿಸುವಂತೆ ಚಿತ್ರದುರ್ಗ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.