Connect with us

ದಿನದ ಸುದ್ದಿ

ದಾವಣಗೆರೆ | ಈ ಏರಿಯಾಗಳಲ್ಲಿ ನಾಳೆ ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ : ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ ಫೀಡರ್‍ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ಬೆ.ವಿ.ಕಂ.ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ .ಎ ಮತ್ತು ಬಿ. ಬ್ಲಾಕ್, ಜಯನಗರ ಎ,ಬಿ& ಸಿ ಬ್ಲಾಕ್ ಭೂಮಿಕ ನಗರ ಜಯಂತ್ ಕಾನ್ವೆಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಆವರಗೆರೆ ವಿದ್ಯುತ್ ವಿತರಣ ಕೇಂದ್ರದಂಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 25 ರಂದು ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೋಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ ಯೋಜನೆಯಡಿ ಅರ್ಹ ಉದ್ದಿಮೆದಾರರಿಗೆ ನೆರವು ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಈಗಾಗಲೇ ಬ್ಯಾಂಕಿನಿಂದ ಸಾಲ ಪಡೆದು ಘಟಕಗಳನ್ನು ಸ್ಥಾಪಿಸಿರುವ ಅರ್ಹ ಉದ್ದಿಮೆದಾರರು ಹಾಗೂ ಬ್ಯಾಂಕ ಸಾಲ ಪಡೆದು ಉದ್ದಿಮೆ ಸ್ಥಾಪಿಸಲು ಇಚ್ಚಿಸಿರುವ ಉದ್ದಿಮೆದಾರರು ಹೆಚ್ಚಿನ ವಿವರಗಳಿಗೆ ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಪಿ.ಬಿ ರಸ್ತೆ ದಾವಣಗೆರೆ ಇವರನ್ನು ಸಂಪರ್ಕಿಸಬಹುದೆಂದು ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

Continue Reading

Trending