ದಿನದ ಸುದ್ದಿ
ದಾವಣಗೆರೆ | ಈ ಏರಿಯಾಗಳಲ್ಲಿ ನಾಳೆ ಕರೆಂಟ್ ಇರಲ್ಲ
ಸುದ್ದಿದಿನ,ದಾವಣಗೆರೆ : ಎಸ್.ಆರ್.ಎಸ್. ವಿದ್ಯುತ್ ಸ್ವೀಕರಣಾ ಕೇಂದ್ರದಿಂದ ಹೊರಡುವ ಸರಸ್ವತಿ ಫೀಡರ್‍ನಲ್ಲಿ ಕೆ.ಯು.ಐ.ಡಿ.ಎಫ್.ಸಿ. ಬೆ.ವಿ.ಕಂ.ವತಿಯಿಂದ ಜಲಸಿರಿ ಯೋಜನೆಯಡಿಯಲ್ಲಿ ನಿರಂತರ ಶುದ್ದಕುಡಿಯುವ ನೀರಿನ ಸರಬರಾಜು ಯೋಜನೆ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂನ್ 25 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಸರಸ್ವತಿ ಫೀಡರ್ ವ್ಯಾಪ್ತಿಯ ಸರಸ್ವತಿ ಬಡಾವಣೆ .ಎ ಮತ್ತು ಬಿ. ಬ್ಲಾಕ್, ಜಯನಗರ ಎ,ಬಿ& ಸಿ ಬ್ಲಾಕ್ ಭೂಮಿಕ ನಗರ ಜಯಂತ್ ಕಾನ್ವೆಂಟ್ ಕೆಎಸ್‍ಎಸ್ ಕಾಲೇಜ್ ಮತ್ತು ಸುತ್ತ ಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಆವರಗೆರೆ ವಿದ್ಯುತ್ ವಿತರಣ ಕೇಂದ್ರದಂಲ್ಲಿ ತುರ್ತಾಗಿ ನಿರ್ವಾಹಣ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 25 ರಂದು ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ, ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೋಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243