ದಿನದ ಸುದ್ದಿ
ದಾವಣಗೆರೆ | ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ದಾವಣಗೆರೆ ವಿತರಣಾ ಕೇಂದ್ರದಲ್ಲಿ ಹಾಳಾಗಿರುವ ಪಾಟ್ಹೆಡ್ ಬದಲಾಯಿಸುವ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ನ.07 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 01 ಗಂಟೆಯವರೆಗೆ ಈ ಕೆಳಕಂಡ ಫೀಡರ್ ವ್ಯಾಪ್ತಿಯಲ್ಲಿ ಬರುವ ನಗರಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಫ್-1 ಎಸ್.ವಿ.ಟಿ. ಫೀಡರ್ ವ್ಯಾಪ್ತಿಯ ಎಂ.ಸಿ.ಸಿ. ಬಿ. ಬ್ಲಾಕ್, ಮಾಮಾಸ್ ಜಾಯಿಂಟ್ ರಸ್ತೆ, ಎಫ್-2 ಎಂ.ಸಿ.ಸಿ.ಬಿ ಫೀಡರ್ ವ್ಯಾಪ್ತಿಯ ಸಿದ್ದವೀರಪ್ಪ ಬಡಾವಣೆ, ಎಸ್.ಎಸ್. ಲೇಔಟ್ ಎ & ಬಿ ಬ್ಲಾಕ್, ಎಂ.ಸಿ.ಸಿ. ಬಿ. ಬ್ಲಾಕ್, ಕುವೆಂಪು ನಗರ, ಶಾಮನೂರು ರಸ್ತೆ, ಬಿ.ಐ.ಇ.ಟಿ. ಕಾಲೇಜು, ನೀಜಲಿಂಗಪ್ಪ ಬಡಾವಣೆ. ಎಫ್-5 ಮೌನೇಶ್ವರ ಫೀಡರ್ ವ್ಯಾಪ್ತಿಯ ಮೌನೇಶ್ವರ ಬಡಾವಣೆ, ಎಂ.ಯು.ಎಸ್.ಎಸ್. ಕಾಲೋನಿ, ನಿಟ್ಟುವಳ್ಳಿ, ನಿಟ್ಟುವಳ್ಳಿ ಹೊಸ ಬಡಾವಣೆ, ಲೆನಿನ್ ನಗರ, ಸರಸ್ವತಿ ನಗರ, ಶಕ್ತಿ ನಗರ, ಎಫ್-6 ಡಿ.ಸಿ.ಎಂ. ಫೀಡರ್ ವ್ಯಾಪ್ತಿಯ ಡಿ.ಸಿ.ಎಂ. ಟೌನ್ ಶಿಫ್, ಕೊಟ್ಟುರೇಶ್ವರ ಬಡಾವಣೆ.
ಕೆ.ಎಸ್.ಆರ್.ಟಿ.ಸಿ., ತಾಲೂಕು ಆಪೀಸ್, ಅಗ್ನಿ ಶಾಮಕ ಠಾಣೆ. ಏಫ್-7 ಜಿ & ಎಸ್. ಫೀಡರ್ ವ್ಯಾಪ್ತಿಯ ಗಣೇಶ್ ಮಿಲ್, ಭಗತ್ ಸಿಂಗ್ ನಗರ, ಕೆ.ಎಸ್.ಆರ್.ಟಿ.ಸಿ. ಸುತ್ತಮುತ್ತ, ಈರುಳ್ಳಿ ಮಾರುಕಟ್ಟೆ, ತರಕಾರಿ ಮಾರುಕಟ್ಟೆ. ಎಫ್-8 ಕೆ.ಟಿ.ಜೆ. ಫೀಡರ್ ವ್ಯಾಪ್ತಿಯ ಕೆ.ಟಿ.ಜೆ. ನಗರ, ಡಾಂಗೇ ಪಾರ್ಕ್, ಶಿವಪ್ಪ ವೃತ್ತ, ತ್ರಿಶೂಲ್ ರಸ್ತೆ, ಕೆ.ಬಿ. ಬಡಾವಣೆ, ಲಾಯರ್ ರಸ್ತೆ, ಅಶೋಕ ರಸ್ತೆ. ಎಫ್-9 ಪಿ.ಜೆ.ಫೀಡರ್ ವ್ಯಾಪ್ತಿಯ ಪಿ.ಜೆ. ಬಡಾವಣೆ, ರಾಂ. & ಕೋ ವೃತ್ತ, ಪೋಲಿಸ್ ಕ್ವಾಟ್ರರ್ಸ್, ಚರ್ಚ್ ರಸ್ತೆ, ಈದ್ಗಾ ಕಾಂಪ್ಲೆಕ್ಸ್, ಅರುಣಾ ಚಿತ್ರ ಮಂದಿರ.
ಎಫ್-10 ಸಿ.ಜಿ.ಎಚ್. ಫೀಡರ್ ವ್ಯಾಪ್ತಿಯ ವಿನೋಭ ನಗರ, ಸಿ.ಜೆ. ಆಸ್ಪತ್ರೆ, ಬಾಪೂಜಿ ಆಸ್ಪತ್ರೆ, ಎಂ.ಸಿ.ಸಿ. ಎ ಬ್ಲಾಕ್, ಪಿ.ಜೆ. ಬಡಾವಣೆ, ರಾಂ. & ಕೋ ವೃತ್ತ, ಏಫ್-12 ಬಸವೇಶ್ವರ ಫೀಡರ್ ವ್ಯಾಪ್ತಿಯ ಎಸ್.ಎಸ್. ಬಿ. ಬ್ಲಾಕ್, ಬಾಲಾಜಿ ನಗರ, ಬಸವೇಶ್ವರ ನಗರ, ಕುಂದವಾಡ ವಾಟರ್ ಸಪ್ಲೇ, ಎಫ್-4 ಬಿ.ಟಿ. ಫೀಡರ್ ವ್ಯಾಪ್ತಿಯ ರೆಹಮಾನ್ ರ್ರಸ್ತೆ, ದೇವೇಂದ್ರಪ್ಪ ಮಿಲ್, ಕೊರಚರ ಹಟ್ಟಿ, ಯಲ್ಲಮ್ಮ ಪಾರ್ಕ್, ದೇವರಾಜ್ ಕಾಟ್ರರ್ಸ್, ಇಂದಿರಾ ನಗರ, ಕಾರ್ಲ್ಮಾಕ್ರ್ಸ್ ನಗರ, ಸಿದ್ದರಾಮೇಶ್ವರ ಬಡಾವಣೆ, ಮಂಡಕ್ಕಿ ಬಟ್ಟಿ, ಶಿವಪಾರ್ವತಿ ನಗರ, ಕೋಳಿಚನ್ನಪ್ಪ ಮಿಲ್.
ಎಫ್-11 ಎಲ್.ಎಫ್-1 ಫೀಡರ್ ವ್ಯಾಪ್ತಿಯ ಮಂಡೀ ಪೇಟೆ, ಬಿನ್ನಿ ಕಂಪನಿ ರಸ್ತೆ, ಮಹಾವೀರ ರಸ್ತೆ, ಎನ್.ಆರ್. ರಸ್ತೆ, ಇಸ್ಲಾಂ ಪೇಟೆ, ಬೆಳ್ಳೂಡಿ ಗಲ್ಲಿ, ಬಿ.ಟಿ. ಗಲ್ಲಿ, ವಿಜಯಲಕ್ಷಿ ರಸ್ತೆ, ಎಂ.ಜಿ. ರಸ್ತೆ, ಗೂಡ್ಶೆಡ್ಡ್ ರಸ್ತೆ, ಗಡಿಯಾರ ಕಂಬ, ಆಜಾದ್ನಗರ, ಅಕ್ಸಾ ಮಸೀದಿ, ಹೆಗಡೆ ನಗರ, ಮಾಗನಹಳ್ಳಿ ರಸ್ತೆ, ಅಮೆಜಾನ್ ಬಾಬಜಾನ್ ದರ್ಗಾ, ಜೋಗಲ್ ಬಾಬಾ ಲೇಔಟ್ ಹಾಗೂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ3 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ2 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

