Connect with us

ದಿನದ ಸುದ್ದಿ

1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲೆಗೆ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು : ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

Published

on

ಸುದ್ದಿದಿನ,ಹುಬ್ಬಳ್ಳಿ : ಕೇಂದ್ರ ಸರ್ಕಾರದ ಜಲಜೀವನ್ ಮಿಷನ್ ಹಾಗೂ ರಾಜ್ಯ ಸರ್ಕಾರದ ಜಲಧಾರೆ ಯೋಜನೆಯಡಿ 1100 ಕೋಟಿ ವೆಚ್ಚದಲ್ಲಿ ಧಾರವಾಡ ಜಿಲ್ಲೆಯಾದ್ಯಂತ ಮಲಪ್ರಭಾ ನದಿಯಿಂದ ಕುಡಿಯುವ ನೀರು ಸರಬರಾಜು ಮಾಡಲಾಗುವುದು ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ್ ಜೋಶಿ ಹೇಳಿದರು.

ಕುಸುಗಲ್ ಗ್ರಾಮದಲ್ಲಿ ಆಯೋಜಿಸಲಾದ ಘನ ತ್ಯಾಜ್ಯ ವಿಲೇವಾರಿ ಘಟಕ, ಶ್ರೀ ಬೀರಲಿಂಗೇಶ್ವರ ದೇವಸ್ಥಾನದ ಭೂಮಿ ಪೂಜೆ, ಮುಕ್ತಿ ವನಸಹಾಯ ಕೇಂದ್ರ ಉದ್ಘಾಟನೆ ನೆರವೇರಿಸಿ ಹಾಗೂ ಕಸ ವಿಲೇವಾರಿ ವಾಹನಕ್ಕೆ ಚಾಲನೆ ನೀಡಿ ಮಾತನಾಡಿದರು.

ಕೇಂದ್ರ ಸರ್ಕಾರ ಹರ್ ಘರ್ ಜಲ್ ಯೋಜನೆ ಮೂಲಕ ಪ್ರತಿ ಮನೆಗೆ ಶುದ್ಧ ಕುಡಿಯುವ ನೀರನ್ನು ಒದಗಿಸಲಾಗುವುದು. 24*7 ನೀರು ಲಭ್ಯವಾಗುವಂತೆ ಮಾಡಲಾಗುವುದು. ಸ್ವಚ್ಛ ಭಾರತ್ ಸ್ವಚ್ಛ ಗ್ರಾಮ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯತಿಗೆ ಸಾಕಷ್ಟು ಅನುದಾನ ಒದಗಿಸಲಾಗುತ್ತಿದೆ. ಪ್ರತಿ ಮನೆಯಲ್ಲೂ ಕಸ ವಿಂಗಡಣೆ ಮಾಡಬೇಕು. ಹಸಿ‌ ಹಾಗೂ ಕಸ ಸಂಗ್ರಹಿಸಲು ಗ್ರಾಮ ಪಂಚಾಯತಿಯಿಂದಲೇ ಹಸಿರು ಮತ್ತು ನೀಲಿ ಬುಟ್ಟಿಗಳನ್ನು ಉಚಿತವಾಗಿ ನೀಡಲಾಗುತ್ತಿದೆ.

ಕುಸುಗಲ್ ಗ್ರಾಮದಲ್ಲಿ 20 ಲಕ್ಷ ಅನುದಾನದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣ ಮಾಡಲಾಗುತ್ತಿದೆ. ಘಟಕ ನಿರ್ಮಾಣಕ್ಕೆ 5 ಲಕ್ಷ ಹಣವನ್ನು ನರೇಗಾದಡಿ ಕೊಡಲಾಗಿದೆ. ಧಾರವಾಡ ಜಿಲ್ಲೆಗೆ 60 ತ್ಯಾಜ್ಯ ವಿಲೇವಾರಿ ಘಟಕ ಮಂಜೂರು ಆಗಿವೆ. 20 ಘಟಕಗಳು ಕಾರ್ಯ ನಿರ್ವಹಿಸುತ್ತಿವೆ. ಸ್ವಚ್ಚತೆ ಗಮನ ನೀಡದೆ ಇರುವುದರಿಂದ ಹಲವು ಖಾಯಿಲೆಗಳು ಸಾಂಕ್ರಾಮಿಕ ರೋಗಗಳು ಹರಡುತ್ತವೆ. ರೋಗ ಬಂದಾಗ ಆಸ್ಪತ್ರೆಗಳಿಗೆ ಹಣ ವ್ಯಯಿಸುವ ಬದಲು ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದರು.

ಕುಸುಗಲ್ ಗ್ರಾಮಸ್ಥರು ನೀಡದ ಮನವಿ ಸ್ಪಂದಿಸಿದ ಕೇಂದ್ರ ಸಚಿವರು ಹುಬ್ಬಳ್ಳಿ ಬೈಪಾಸ್ ರಸ್ತೆಯಿಂದ ಕುಸುಗಲ್ ಗ್ರಾಮಕ್ಕೆ ಸರ್ವೀಸ್ ರೋಡ್ ನಿರ್ಮಿಸಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಭರವಸೆ ನೀಡಿದರು.

ಕಾರ್ಯಕ್ರಮದಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ಸಂಸ್ಥೆ ಅಧ್ಯಕ್ಷ ಹಾಗೂ‌ ನವಲಗುಂದ ಶಾಸಕ ಶಂಕರ ಪಾಟೀಲ ಮುನೇನಕೊಪ್ಪ, ಜಿ.ಪಂ.ಉಪಾಧ್ಯಕ್ಷ ಶಿವಾನಂದ ಕರಿಗಾರ, ಜಿ.ಪಂ.ಸಿಇಓ ಬಿ.ಸುಶೀಲಾ, ತಾಲೂಕು ಪಂಚಾಯತಿ‌ ಸದಸ್ಯೆ ದ್ಯಾವಲಾಬಿ ಕೋಂ ಮಿರ್ಜಾನವರ, ತಾ.ಪಂ.ಇಓ ಗಂಗಾಧರ ಕಂದಕೋರ, ಪಂಚಾಯತಿ ಅಭಿವೃದ್ಧಿ ಅಧಿಕಾರಿ ಶಶಿಧರ ಸೇರಿದಂತೆ ಮಾಜಿ ಗ್ರಾ.ಪಂ‌. ಸದಸ್ಯರು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending