ದಿನದ ಸುದ್ದಿ
ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ | ಎಸ್‌ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
ಸುದ್ದಿದಿನ, ಮೈಸೂರು : ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣದಲ್ಲಿ ಎಸ್‌ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಅವರು, ಸಂತ್ರಸ್ತೆಯರಿಗೆ ನೆರವು ನೀಡುವ ಬದಲು, ಸರ್ಕಾರ ಹಿಂಸೆ ನೀಡುತ್ತಿದೆ ಎಂದು ದೂರಿದ್ದಾರೆ. ಪೆನ್‌ಡ್ರೈವ್ ಚಿತ್ರೀಕರಣ ಮಾಡಿದವರು ಹಾಗೂ ಹಂಚಿದವರ ಬಗ್ಗೆ ತನಿಖೆ ಮಾಡದೇ ಕೆಲವು ರಾಜಕಾರಣಿಗಳಿಗೆ ತೊಂದರೆ ನೀಡಲಾಗುತ್ತಿದೆ ಎಂದು ದೂರಿದರು.
ಭ್ರಷ್ಟಾಚಾರದ ಪೆನ್‌ಡ್ರೈವ್ ನೀಡಿದರೆ ರಾಜ್ಯ ಸರ್ಕಾರ ತನಿಖೆ ನಡೆಸಲು ಸಿದ್ಧವಿದೆಯೇ ಎಂದು ಪ್ರಶ್ನಿಸಿದ್ದಾರೆ.
ರೈತರ ಬರಪರಿಹಾರ ಹಣ ಸಾಲಕ್ಕೆ ಜಮೆ ಮಾಡುವ ಬ್ಯಾಂಕ್ ವರ್ತನೆ ಖಂಡಿಸಿದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ
ಸುದ್ದಿದಿನ ಡೆಸ್ಕ್ : ರೈತರ ಬ್ಯಾಂಕ್ ಖಾತೆಗಳಿಗೆ ಜಮೆ ಆಗಿರುವ ಬರ ಪರಿಹಾರ ಹಣವನ್ನು ಸಾಲಕ್ಕೆ ಜಮೆ ಮಾಡಿಕೊಳ್ಳುತ್ತಿರುವ ಬ್ಯಾಂಕ್‌ಗಳ ವರ್ತನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಖಂಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ಅವರು ಯಾವ ಕಡೆಯಿಂದ ನೋಡಿದರೂ ರೈತರ ಸಂಕಷ್ಟಕ್ಕೆ ಕೊನೆಯೇ ಇಲ್ಲ ಎನ್ನುವಂತಾಗಿದೆ. ಹೆಸರಿಗೆ ಅನ್ನದಾತ, ಅವರ ಕಣ್ಣೀರು ಒರೆಸಿ ಅವರಿಗೆ ಧಾತನಾಗಿ ನಿಲ್ಲಬೇಕಿದ್ದ ರಾಜ್ಯ ಸರ್ಕಾರ ಕೈಕಟ್ಟಿ ಕೂತಿದೆ ಎಂದು ಹೇಳಿದ್ದಾರೆ.
ರಾಜ್ಯ ಸರ್ಕಾರ ಕೂಡಲೇ ಸಾಲ ನೀಡಿರುವ ಎಲ್ಲಾ ಬ್ಯಾಂಕ್‌ಗಳ ಮುಖ್ಯಸ್ಥರ ಸಭೆ ಕರೆದು, ಈ ಬಗ್ಗೆ ಗಂಭೀರವಾಗಿ ಚರ್ಚೆ ನಡೆಸಬೇಕು. ಬರ ಪರಿಹಾರ ಮೊತ್ತವನ್ನು ಸಾಲಕ್ಕೆ ಜಮೆ ಮಾಡದಂತೆ ತಾಕೀತು ಮಾಡಬೇಕು ಎಂದು ಸಲಹೆ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243