ದಿನದ ಸುದ್ದಿ
ಮುತಾಲಿಕ್ ಹೇಳಿಕೆಗೆ ಟ್ವಿಟರ್ ನಲ್ಲಿ ಖಡಕ್ ಪ್ರತಿಕ್ರಿಯೆ ನೀಡಿದ ಪ್ರಕಾಶ್ ರೈ..!
ಸುದ್ದಿದಿನ ಡೆಸ್ಕ್ : ಹಿಂದುತ್ವವಾದಿ ಸಂಘಟನೆಯ ಪರಶುರಾಮ್ ವಾಘ್ಮೋರೆ ಗೌರಿಲಂಕೇಶ್ ಹತ್ಯೆ ಮಾಡಿರುವುದಾಗಿ ಒಪ್ಪಿಕೊಂಡ ಹಿನ್ನೆಲೆ, ಶ್ರೀರಾಮಸೇನೆ ಮುಖ್ಯಸ್ಥ ಪರಶುರಾಮ್ ಯಾರೆಂದು ನನಗೆ ಗೊತ್ತಿಲ್ಲ, ಹತ್ಯೆಯ ವಿಚಾರಕ್ಕೂ ನಮ್ಮ ಸಂಘಟನೆಗೂ ಯಾವ ಸಂಬಂಧವೂ ಇಲ್ಲ. ಬೀದಿಯಲ್ಲಿ ಯಾವುದಾದರು ನಾಯಿ ಸತ್ತರೆ ಅದಕ್ಕೆ ನಾವು ಕಾರಣಾನ ಎಂದು ಗೌರಿ ಲಂಕೇಶ್ ಅವರನ್ನು ನಾಯಿಗೆ ಹೋಲಿಸಿ ತನ್ನ ಹಿಡಿತವಿಲ್ಲದ ನಾಲಗೆಯನ್ನು ಪ್ರದರ್ಶಿಸಿದ್ದರು.
ಮುತಾಲಿಕ್ ರ ಈ ಹೇಳಿಕೆಗೆ just asking ನ ಪ್ರಕಾಶ್ ರೈ ಟ್ಟೀಟ್ ಮೂಲಕ ಅವರಿಗೆ ಈ ರೀತಿಯಾಗಿ ಪ್ರತಿಕ್ರಿಯಿಸಿದ್ದಾರೆ.
SHAME..SHAME..Is supreme leader..his party president and its law makers elated that one more has joined the gang of “ dog remark “ users …who can stoop low..against who ever questions them….or disagree with their ideology…. #justasking…..https://t.co/bVEtLEvgtp
— Prakash Raj (@prakashraaj) June 18, 2018
“ಶೇಮ್..ಶೇಮ್ …ಇವನೊಬ್ಬ ಪರಮೋಚ್ಚ ನಾಯಕ. ಇವನ ಪಕ್ಷದ ಅಧ್ಯಕ್ಷ ಹಾಗೂ ಅದರ ಜನ ಪ್ರತಿನಿಗಳೆಲ್ಲರು ” ನಾಯಿ ಬೈಗುಳ”ದ ಬಳಕೆದಾರರು. ಆ ಗುಂಪಿಗೆ ಮತ್ತೊಬ್ಬರ ಸೇರ್ಪಡೆ. ಇಂಥವರ ವಿರುದ್ಧ ಯಾರಾದ್ರೂ ಪ್ರಶ್ನೆ ಮಾಡಿದ್ರೆ ಅಥವಾ ಸೈದ್ಧಾಂತಿಕಭಿನ್ನಾಭಿಪ್ರಾಯ ಹೊಂದಿದ್ರೆ, ಎಂಥ ಕೀಳುಮಟ್ಟಕ್ಕಾದರೂ ಇಳಿಯುತ್ತಾರೆ.”
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಪಿಎಂ ಸ್ವನಿಧಿ ಯೋಜನೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕøತ ಯೋಜನೆಯಾದ ಡೇ-ನಲ್ಮ್ ರಾಷ್ಟ್ರೀಯ ನಗರ ಜೀವನೋಪಾಯ ಅಭಿಯಾನದ ಉಪಘಟಕವಾದ ಪಿ.ಎಂ. ಸ್ವನಿಧಿ ಯೋಜನೆಯಡಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಬೀದಿ ಬದಿ ವ್ಯಾಪಾರಸ್ಥರು, ಸಾರ್ವಜನಿಕ ಸ್ಥಳಗಳಲ್ಲಿ ಹಾಲು ಮಾರಾಟಗಾರರು, ದಿನಪತ್ರಿಕೆ ಹಾಕುವವರು, ಅಸಕ್ತ ಸಾರ್ವಜನಿಕರು ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಪುಸ್ತಕ, ಹಾಗೂ ಪಾನ್ ಕಾರ್ಡ್ ದಾಖಲಾತಿಗಳೊಂದಿಗೆ ಪಾಲಿಕೆಯ ನಗರ ಬಡತನ ನಿವಾರಣಾ ಕೋಶ, ನಲ್ಮ್ ಶಾಖೆ(ಎಸ್.ಜೆ.ಎಸ್.ಆರ್.ವೈ ಕೆಂಪು ಕಟ್ಟಡ) ಮಹಾಪಾಲಿಕೆ ದಾವಣಗೆರೆ ಇಲ್ಲಿಗೆ ಸಲ್ಲಿಸಬೇಕೆಂದು ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿ ವಾಸವಿದ್ದರೆ ಮಾಹಿತಿ ಕೊಡಿ
ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆ ವ್ಯಾಪ್ತಿಯಲ್ಲಿನ ಬೀದಿ ನಾಯಿಗಳ ಉಪಟಳ ತಡೆಯಲು ಖಾಸಗಿ ಹಾಗೂ ಸರ್ಕಾರಿ ಶಿಕ್ಷಣ ಸಂಸ್ಥೆಗಳು, ಖಾಸಗಿ ಮತ್ತು ಸರ್ಕಾರಿ ಆಸ್ಪತೆಗಳು, ಕ್ರೀಡಾ ಸಂಕೀರ್ಣ, ಬಸ್ ನಿಲ್ದಾಣ, ರೈಲ್ವೇ ನಿಲ್ದಾಣಗಳಲ್ಲಿ ಯಾವುದೇ ಬೀದಿ ನಾಯಿಗಳು ವಾಸವಿದ್ದಲ್ಲಿ ಮಾಹಿತಿಯನ್ನು ಹರಿಹರ ಪೌರಾಯುಕ್ತರಿಗೆ ನೀಡಲು ತಿಳಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಖರೀದಿಸಿದ ಸಾಮಾಗ್ರಿಗಳ ಬಿಲ್ಲಿನ ದಿನಾಂಕಕ್ಕೂ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಇರುವ ವ್ಯತ್ಯಾಸಕ್ಕೆ ಸ್ಪಷ್ಟನೆ ಕೋರಿ 3 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ಕರ್ತವ್ಯ ಲೋಪ ಎಸಗಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ರೇಣುಕಾ ದೇವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಕೆ.ಎ.ಓಬಳೇಶ್ ದೂರು ನೀಡಿದ್ದಾರೆ.
ದಾವಣಗೆರೆ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 2020-21 ರಿಂದ 2024-25ನೇ ಸಾಲಿನ ಅವಧಿಯ ದಾಸ್ತಾನು ವಹಿಯನ್ನು ಮಾಹಿತಿಹಕ್ಕು ಅಧಿನಿಯಮ ಅಡಿಯಲ್ಲಿ ಪಡೆದು ಪರಿಶಿಲನೆ ಮಾಡಿದಾಗ ಸಾಮಾಗ್ರಿಗಳು ಖರೀದಿ ದಿನಾಂಕ ಹಾಗೂ ದಾಸ್ತಾನು ವಹಿಯಲ್ಲಿ ನಮೂದಾಗಿರುವ ದಿನಾಂಕಕ್ಕೂ ಸಾಕಷ್ಟು ವ್ಯತ್ಯಾಸ ಕಂಡು ಬಂದಿದ್ದು, ಈ ಬಗ್ಗೆ ಸ್ಪಷ್ಟತೆ ನೀಡುವಂತೆ ಹಿಂದುಳಿದ ವರ್ಗಗಳ ಇಲಾಖೆಯ ಜಿಲ್ಲಾ ಅಧಿಕಾರಿಯವರಿಗೆ ಅರ್ಜಿ ಸಲ್ಲಿಸಿರುತ್ತಾರೆ. ನಿಗದಿತ ಅವಧಿಯಲ್ಲಿ ಯಾವುದೇ ಸ್ಪಷ್ಟನೆ ನೀಡದ ಕಾರಣ ಜ್ಞಾಪನವನ್ನು ನೀಡಲಾಗಿತ್ತು. ಜ್ಞಾಪನ ಪತ್ರ ನೀಡಿ ನಿಗದಿತ ಅವಧಿ ಮುಕ್ತಾಯವಾದರೂ ಯಾವುದೇ ಸ್ಪಷ್ಟನೆ ನೀಡದೆ ನಿರ್ಲಕ್ಷö್ಯ ತೋರಿದ ರೇಣುಕಾ ದೇವಿಯವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ7 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ6 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ6 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ3 days agoಕರ್ತವ್ಯ ಲೋಪ | ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ ಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ5 days agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ5 days agoಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

