ದಿನದ ಸುದ್ದಿ

ಪ್ರಮುಖ ಸುದ್ದಿಗಳು

Published

on

ಪ್ರಮುಖ ಸುದ್ದಿಗಳು

  1. ಸಂಸದರ ಆದರ್ಶ ಗ್ರಾಮದಡಿ ಆಯ್ಕೆಯಾಗಿರುವ ಕಡಬ ತಾಲೂಕಿನ ಬಳ್ಪ ಗ್ರಾಮದ ಸಂಪೂರ್ಣ ಅಭಿವೃದ್ಧಿಗಾಗಿ ಹಲವಾರು ಕಾಮಗಾರಿಗಳು ಹಾಗೂ ವಿವಿಧ ಯೋಜನೆಗಳ ಅನುಷ್ಠಾನಕ್ಕೆ 60 ಕೋಟಿ ರೂಪಾಯಿ ಒದಗಿಸಲಾಗಿದೆ ಎಂದು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಮಂಗಳೂರಿನಲ್ಲಿ ತಿಳಿಸಿದ್ದಾರೆ.
  2. ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚು ಮಾನವ ದಿನಗಳನ್ನು ಸೃಜಿಸುವಂತೆ ದಾವಣಗೆರೆ ಸಂಸದ ಜಿ.ಎಂ.ಸಿದ್ದೇಶ್ವರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ದಾವಣಗೆರೆಯಲ್ಲಿ ನಿನ್ನೆ ಜಿಲ್ಲಾ ಸಮನ್ವಯ ಅಭಿವೃದ್ಧಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ದುಡಿಯುವ ಕೈಗಳಿಗೆ ಹೆಚ್ಚು ಉದ್ಯೋಗ ನೀಡುವ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯ ಲಾಭವನ್ನು ಬಹುಪಾಲು ಜನರಿಗೆ ತಲುಪಿಸುವುದು ಅಧಿಕಾರಿಗಳ ಕರ್ತವ್ಯ ಎಂದು ತಿಳಿಸಿದ್ದಾರೆ.
  3. ಗಣಿಗಾರಿಕೆ ಕ್ಷೇತ್ರದಲ್ಲಿ ಹಲವು ಬದಲಾವಣೆ ಮಾಡಲಾಗಿದ್ದು, ಪರಿಸರಕ್ಕೆ ಯಾವುದೇ ಧಕ್ಕೆಯಾಗದಂತೆ ಕ್ರಮಕೈಗೊಳ್ಳಲಾಗುತ್ತಿದೆ. ಅದಿರು ಮತ್ತು ಲೋಹ ಕ್ಷೇತ್ರದ ಆತ್ಮನಿರ್ಭರತೆಗೆ ಹಲವಾರು ಕ್ರಮಗಳನ್ನು ಜರುಗಿಸಲಾಗಿದೆ ಎಂದು ಕೇಂದ್ರ ಕಲ್ಲಿದ್ದಲು ಖಾತೆ ಸಚಿವ ಪ್ರಹ್ಲಾದ್ ಜೋಶಿ ದೆಹಲಿಯಲ್ಲಿ ಹೇಳಿದ್ದಾರೆ.
  4. ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 10 ಸಾವಿರದ 649 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ. ಇದೇ ಅವಧಿಯಲ್ಲಿ 19 ಸಾವಿರದ 677 ಸೋಂಕಿತರು ಚೇತರಿಸಿಕೊಂಡಿದ್ದಾರೆ. ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 96 ಸಾವಿರದ 442ರಷ್ಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
  5. ಕೋವಿಡ್ ವಿರುದ್ಧ ದೇಶಾದ್ಯಂತ ನಡೆಯುತ್ತಿರುವ ಸಾರ್ವತ್ರಿಕ ಲಸಿಕಾ ಅಭಿಯಾನದಡಿ ಕಳೆದ 24 ಗಂಟೆಗಳಲ್ಲಿ 27 ಲಕ್ಷ 17 ಸಾವಿರದ 979 ಲಸಿಕಾ ಡೋಸ್‌ಗಳನ್ನು ನೀಡಲಾಗಿದೆ. ಇದರೊಂದಿಗೆ ಇದೂವರೆಗೆ 210 ಕೋಟಿ 58 ಲಕ್ಷ 83 ಸಾವಿರದ 682 ಲಸಿಕಾ ಡೋಸ್‌ಗಳನ್ನು ನೀಡಿದಂತಾಗಿದೆ ಎಂದು ಸಚಿವಾಲಯ ತಿಳಿಸಿದೆ.
  6. ಸ್ವರಸಾಮ್ರಾಟ ಪಂಡಿತ ಬಸವರಾಜ ರಾಜಗುರು ರಾಷ್ಟ್ರೀಯ ಟ್ರಸ್ಟ್ ಕೊಡಮಾಡುವ ಪ್ರಸಕ್ತ ಸಾಲಿನ ಪಂಡಿತ್ ಬಸವರಾಜ ರಾಜಗುರು ರಾಷ್ಟ್ರೀಯ ಪ್ರಶಸ್ತಿಗೆ ದೆಹಲಿಯ ಪಂಡಿತ್ ಮಧೂಪ್ ಮೂದ್ಗಲ್ ಭಾಜನರಾಗಿದ್ದಾರೆ. ಪ್ರಶಸ್ತಿ 1ಲಕ್ಷ ರೂಪಾಯಿ ನಗದು ಹಾಗೂ ಸ್ಮರಣಿಕೆ ಒಳಗೊಂಡಿದೆ. ಯುವ ಪ್ರಶಸ್ತಿಗೆ ಪ್ರತಿಭಾವಂತ ಹಾರ್ಮೋನಿಯಂ ವಾದಕ ಬೆಂಗಳೂರಿನ ಸತೀಶ ಕೊಳ್ಳಿ ಮತ್ತು ಪುಣೆಯ ಗಾಯಕ ವಿರಾಜ್ ಜೋಶಿ ಅವರನ್ನು ಆಯ್ಕೆ ಮಾಡಲಾಗಿದೆ. ಯುವ ಪ್ರಶಸ್ತಿ ತಲಾ 25 ಸಾವಿರ ರೂಪಾಯಿ ನಗದು ಮತ್ತು ಸ್ಮರಣಿಕೆ ಒಳಗೊಂಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version