Connect with us

ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಭಾರತದ 15ನೇ ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಅವರು ನಿನ್ನೆ ಪ್ರಮಾಣ ವಚನ ಸ್ವೀಕರಿದ್ದು, ಅವರಿಗೆ ದೇಶ-ವಿದೇಶಗಳಿಂದ ಅಭಿನಂದನೆ ಮಹಾಪೂರವೇ ಹರಿದು ಬರುತ್ತಿದೆ. ಬಳಿಕ ಮಾತನಾಡಿದ ನೂತನ ರಾಷ್ಟ್ರಪತಿ ಅವರು, ದೇಶ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಿಸಿಕೊಳ್ಳುತ್ತಿರುವಾಗ ದೇಶ ತಮ್ಮನ್ನು ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆ ಮಾಡಿದೆ ಎಂದು ನುಡಿದರು. ಕಾರ್ಗಿಲ್ ವಿಜಯ ದಿವಸ್ ಮುನ್ನಾದಿನವಾದ ನಿನ್ನೆ ದೇಶದ ಜನತೆಗೆ ಶುಭಾಶಯ ಕೋರಿ, ಈ ದಿನ ನಮ್ಮ ಸಶಸ್ತ್ರ ಪಡೆಗಳ ಶೌರ್ಯದ ಸಂಕೇತವಾಗಿದೆ ಎಂದರು.
  2. ರಾಜ್ಯದ ವಿವಿಧ ನಿಗಮ-ಮಂಡಳಿಗಳಿಗೆ ಅಧ್ಯಕ್ಷರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅರಣ್ಯ ಮತ್ತು ಜೀವಿಶಾಸ್ತ್ರ ಇಲಾಖೆ ವ್ಯಾಪ್ತಿಗೆ ಒಳಪಡುವ ಕರ್ನಾಟಕ ಗೇರು ಅಭಿವೃದ್ಧಿ ನಿಗಮಕ್ಕೆ ಕಾರ್ಕಳದ ಮಣಿ ರಾಜ ಶೆಟ್ಟಿ, ಪಶ್ಚಿಮ ಘಟ್ಟಗಳ ಸಂರಕ್ಷಣಾ ಕಾರ್ಯಪಡೆ ಸಮಿತಿಗೆ ಭಟ್ಕಳದ ಗೋವಿಂದ ಜಟ್ಟಪ್ಪ ನಾಯ್ಕ, ಮೃಗಾಲಯ ಪ್ರಾಧಿಕಾರಕ್ಕೆ ಮೈಸೂರಿನ ಕುವೆಂಪು ನಗರದ ಎಂ. ಶಿವಕುಮಾರ್, ಅರಣ್ಯ ಅಭಿವೃದ್ಧಿ ನಿಗಮಕ್ಕೆ ಶಿಕಾರಿಪುರದ ಎನ್. ರೇವಣ್ಣಪ್ಪ ಕೊಳಗಿ, ಕರ್ನಾಟಕ ಜೀವ ವೈವಿದ್ಯ ಮಂಡಳಿ ಅಧ್ಯಕ್ಷರನ್ನಾಗಿ ಮಡಿಕೇರಿಯ ಎಂ.ಎನ್. ರವಿ ಕಾಳಪ್ಪ, ಎಂ.ಸಿ ಅಂಡ್ ಎ ಗೆ ಗದಗದ ಕುರ್ತಕೋಟೆಯ ಎಂ.ಎಸ್. ಕರಿಗೌಡ್ರ, ಕರ್ನಾಟಕ ರಾಜ್ಯ ಜವಳಿ ಮೂಲ ಸೌಲಭ್ಯ ಅಭಿವೃದ್ಧಿ ನಿಗಮಕ್ಕೆ ಶಂಕರ ಬಿ ಪಾಟೀಲ್ ಮುನೇನ ಕೊಪ್ಪ, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷರಾಗಿ ಚಿಕ್ಕಬಳ್ಳಾಪುರದ ಕೆ.ವಿ. ನಾಗರಾಜ್ ನೇಮಕ ಮಾಡಲಾಗಿದೆ.
  3. ದೇಶದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ ಎಂದು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವ ಪ್ರಹ್ಲಾದ್ ಜೋಶಿ ರಾಜ್ಯಸಭೆಗೆ ನಿನ್ನೆ ತಿಳಿಸಿದ್ದಾರೆ. ಈ ಕುರಿತು ಲಿಖಿತ ಉತ್ತರ ನೀಡಿರುವ ಅವರು, 2020-21ನೇ ಸಾಲಿನಲ್ಲಿ 716 ದಶಲಕ್ಷ ಟನ್ ಕಲ್ಲಿದ್ದಲು ಉತ್ಪಾದನೆಯಾಗಿದ್ದು, ಕಳೆದ ವರ್ಷ 778 ದಶಲಕ್ಷ ಟನ್‌ಗೆ ಏರಿಕೆಯಾಗಿದೆ. ಈ ವರ್ಷದ ಜೂನ್ ಅಂತ್ಯದ ವೇಳೆಗೆ 204ದಶಲಕ್ಷ ಟನ್ ಕಲ್ಲಿದ್ದಲು ಉತ್ಪಾದನೆಯಾಗಿದ್ದು, ಹಿಂದಿನ ವರ್ಷದ ಇದೇ ಅವಧಿಯಲ್ಲಿ 166 ದಶಲಕ್ಷ ಟನ್ ಉತ್ಪಾದನೆಯಾಗಿತ್ತು. ಕಲ್ಲಿದ್ದಲು ಉತ್ಪಾದನೆಗೆ ಸರ್ಕಾರ ವ್ಯಾಪಕ ಕ್ರಮಗಳನ್ನು ಕೈಗೊಂಡಿದ್ದು, ಕೋಲ್ ಇಂಡಿಯಾ ಲಿಮಿಟೆಡ್ ಮೂಲಕ ಕಳೆದ ವರ್ಷ 52 ಕಲ್ಲಿದ್ದಲು ಯೋಜನೆಗಳಿಗೆ ಅನುಮತಿ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
  4. ಇಂದು ಕಾರ್ಗಿಲ್ ವಿಜಯ ದಿವಸ. ದೇಶಾದ್ಯಂತ ಕಾರ್ಗಿಲ್ ವಿಜಯೋತ್ಸವವನ್ನು ಆಚರಿಸಲಾಗುತ್ತಿದೆ. ಬೆಂಗಳೂರಿನ ರಾಷ್ಟ್ರೀಯ ಸೈನಿಕ ಸ್ಮಾರಕ ಟ್ರಸ್ಟ್‌ನಿಂದ ಬೆಂಗಳೂರಿನ ರಾಷ್ಟ್ರೀಯ ಮಿಲಿಟರಿ ಸ್ಮಾರಕದಲ್ಲಿ ಬೆಳಗ್ಗೆ 4.45ಕ್ಕೆ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ ಆಯೋಜಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹುತಾತ್ಮ ವೀರಯೋಧರಿಗೆ ಗೌರವ ನಮನ ಸಲ್ಲಿಸಲಿದ್ದಾರೆ.
  5. ದೇಶದ ೭೫ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಅಗಸ್ಟ್ 11 ರಿಂದ 15 ನೇ ತಾರೀಖಿನವರೆಗೆ ಪ್ರತಿ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ದೇಶಭಕ್ತಿ ಮೆರೆಯಲು ಬೆಂಗಳೂರು ನಗರ ವ್ಯಾಪ್ತಿಗೆ ರಾಜ್ಯ ಸರ್ಕಾರ 2 ಲಕ್ಷ ರಾಷ್ಟ್ರಧ್ವಜಗಳನ್ನು ಬಿಬಿಎಂಪಿಗೆ ಹಂಚಿಕೆ ಮಾಡಿದೆ. ಕೇಂದ್ರ ಸರ್ಕಾರದ ಹರ್ ಘರ್ ಮೆ ತಿರಂಗಾ ಎಂಬ ಅಭಿಯಾನದಡಿ ರಾಷ್ಟ್ರಧ್ವಜಗಳನ್ನು ಪಾಲಿಕೆಗೆ ರಾಜ್ಯ ಸರ್ಕಾರ ಹಂಚಿಕೆ ಮಾಡಿದೆ.
  6. ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಫಲಿತಾಂಶವನ್ನು ಇದೇ 30ರಂದು ಪ್ರಕಟಿಸಲಾಗುವುದು ಎಂದು ಕರ್ನಾಟಕದ ಉನ್ನತ ಶಿಕ್ಷಣ ಸಚಿವ ಡಾ.ಸಿಎನ್ ಅಶ್ವತ್ಥನಾರಾಯಣ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ ಕಟ್ಟುನಿಟ್ಟಾಗಿ ನಡೆಸಲಾಗಿತ್ತು’ ಎಂದರು.
  7. ರಾಜಧಾನಿ ಬೆಂಗಳೂರು ಮಹಾನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸುವ ನಿಟ್ಟಿನಲ್ಲಿ ವಿವಿಧ ಇಲಾಖೆಗಳು ಒಟ್ಟಿಗೆ ಸೇರಿ ಸಮರ್ಪಕವಾಗಿ ಕೆಲಸ ಮಾಡುತ್ತಿದ್ದು, ಹಂತ-ಹಂತವಾಗಿ ಸಮಸ್ಯೆ ಬಗೆಹರಿಸಲಾಗುತ್ತಿದೆ ಎಂದು ಬಿಬಿಎಂಪಿ ಮುಖ್ಯ ಆಯಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
  8. ಇಂದಿನ ಸ್ವಾತಂತ್ರ್ಯದ ಫಲ, ನಮ್ಮ ಹಿರಿಯರ ತ್ಯಾಗ, ಬಲಿದಾನದ ಸಂಕೇತವಾಗಿದೆ. ಭವಿಷ್ಯದ ಅರಿವು ಮೂಡಬೇಕಾದರೆ, ಇತಿಹಾಸದ ಅವಲೋಕನ ಮಾಡಿಕೊಳ್ಳಬೇಕು ಎಂದು ಗಣಿ, ಭೂ ವಿಜ್ಞಾನ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಹಾಲಪ್ಪ ಆಚಾರ್ ಹೇಳಿದ್ದಾರೆ.
  9. ವಿಶ್ವ ಅಥ್ಲಿಟಿಕ್ ಚಾಂಪಿಯನ್ ಶಿಪ್‌ನ ಜಾವಲಿನ್ ಎಸೆತ ಸ್ಪರ್ಧೆಯಲ್ಲಿ ರಜತ ಪದಕ ಗೆದ್ದ ಭಾರತದ ನೀರಜ್ ಚೋಪ್ರಾ ಸಾಧನೆಗೆ ಲೋಕಸಭೆಯಲ್ಲಿ ನಿನ್ನೆ ಸ್ಪೀಕರ್ ಓಂ ಬಿರ್ಲಾ, ಪ್ರಶಂಸೆ ವ್ಯಕ್ತಪಡಿಸಿದರು. ಅಥ್ಲಿಟಿಕ್ ಚಾಂಪಿಯನ್‌ಶಿಪ್‌ನಲ್ಲಿ ಭಾರತಕ್ಕೆ ಇದು ಪ್ರಥಮ ಬೆಳ್ಳಿ ಪದಕವಾಗಿದೆ. ಈ ಗೆಲುವಿನಿಂದ ದೇಶಾದ್ಯಂತ ಜನರಲ್ಲಿ ಉತ್ಸಾಹ ಹೆಚ್ಚಾಗಿದ್ದು, ಚೋಪ್ರಾ ಅವರಿಗೆ ಸದನದ ಪರವಾಗಿ ಅಭಿನಂದನೆ ಸಲ್ಲಿಸುವುದಾಗಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿ ರಾಘವೇಂದ್ರ ಎನ್ ಬಿ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದು ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ದಾವಣಗೆರೆ ವಿಶ್ವವಿದ್ಯಾಲಯದ ಮಟ್ಟದ ದೇಹದಾರ್ಢ್ಯ ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ರಾಘವೇಂದ್ರ ಚಿನ್ನದ ಪದಕ ಗೆಲ್ಲುವ ಮೂಲಕ ರಾಷ್ಟ್ರೀಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ..

ದಾವಣಗೆರೆ ನಗರದ ಜಿಎಫ್ ಜಿಸಿ ಕಾಲೇಜಿನಲ್ಲಿ ದಾವಣಗೆರೆ ವಿಶ್ವವಿದ್ಯಾಲಯ ಹಾಗೂ ದೈಹಿಕ ಶಿಕ್ಷಣ ನಿರ್ದೇಶಕರ ಸಂಘದಿಂದ ದೇಹದಾರ್ಢ್ಯ ಸ್ಪರ್ಧೆ ಹಾಗೂ ಆಯ್ಕೆ ಗಳು ನಡೆದವು, ಕಾಲೇಜಿನಲ್ಲಿ ಪ್ರಥಮ ಬಿಎ ವ್ಯಾಸಂಗ ಮಾಡುತ್ತಿರುವ ರಾಘವೇಂದ್ರ, ಹಳೇ ಕುಂದುವಾಡದ ಬಸವರಾಜ್, ಲಕ್ಷ್ಮಿದೇವಿ ದಂಪತಿಯ ಪುತ್ರನಾಗಿದ್ದು, ಸ್ಪರ್ಧೆಯಲ್ಲಿ 90ಕೆಜಿ ವಿಭಾಗದಲ್ಲಿ ದೇಹ ಪ್ರದರ್ಶಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾನೆ.

ಓದಿನ ಜೊತೆಗೆ ತನ್ನ ತಂದೆಯ ಕಿರಾಣಿ ಅಂಗಡಿಯಲ್ಲಿ ಕೆಲಸ ಮಾಡುತ್ತಾ ತನ್ನ ಕನಸನ್ನು ನನಸು ಮಾಡಿಕೊಳ್ಳಲು ಬಿಡುವಿನ‌ ವೇಳೆಯಲ್ಲಿ ಕೋಚ್ ಮಧು ಪೂಜಾರ್ ಮಾರ್ಗದರ್ಶನದಲ್ಲಿ ದೇಹ ಹುರಿಗೊಳಿಸಿ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ್ದಾನೆ, ಸ್ಪರ್ಧೆಯಲ್ಲಿ ಬೈಸಿಪ್ಸ್, ಲ್ಯಾಟ್ ಸ್ಟ್ರೈಡ್ ಪೋಸ್ ಕೊಟ್ಟು ನೋಡುಗರನ್ನು, ತೀರ್ಪುಗಾರರನ್ನು ಬೆರಗುಗೊಳಿಸಿದ್ದಾನೆ.

ಇನ್ನೂ ರಾಘವೇಂದ್ರನ ದೇಹ ಪ್ರದರ್ಶನ ವೇಳೆ ಶಿಳ್ಳೆ, ಚಪ್ಪಾಳೆ ಕೇಳಿ ಬಂದವು, ರಾಘವೇಂದ್ರ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದು ಬರುವ ಫೆಬ್ರುವರಿಯಲ್ಲಿ ಮಂಗಳೂರಿನಲ್ಲಿ ಸ್ಪರ್ಧೆ ನಡೆಯಲಿದೆ, ಇನ್ನೂ ಚಿನ್ನದ ಪದಕ ಗಳಿಸಿರುವ ರಾಘವೇಂದ್ರನಿಗೆ ಜಿಎಫ್ ಜಿಸಿ ಕಾಲೇಜು ಆಡಳಿತ ಮಂಡಳಿ, ಮಾರ್ಗದರ್ಶಕರು, ಹಳೇ ಕುಂದುವಾಡ ಗ್ರಾಮಸ್ಥರು ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಅದ್ವಿತೀಯ 2024ರಲ್ಲಿ ಜಿಎಂಐಟಿ ಕಾಲೇಜಿನ ಸಿಎಸ್ಇ ವಿದ್ಯಾರ್ಥಿಗಳ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನ

Published

on

ಸುದ್ದಿದಿನ,ದಾವಣಗೆರೆ:ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ಅಂಡ್ ಇಂಜಿನಿಯರಿಂಗ್ (ಸಿ.ಎಸ್.ಇ) ವಿಭಾಗದ 5ನೇ ಸೆಮಿಸ್ಟರ್ ‘ಎ’ ವಿಭಾಗದ ವಿದ್ಯಾರ್ಥಿಗಳಾದ ಅಭಿಷೇಕ್ ಯು. ಮತ್ತು ಅಫ್ರಿದ್ ಆರ್.ಕೆ. ಈ ಇಬ್ಬರು ಇತ್ತೀಚಿಗೆ ಹುಬ್ಬಳ್ಳಿಯ ಕೆಎಲ್‌ಇ ತಾಂತ್ರಿಕ ಸಂಸ್ಥೆಯಲ್ಲಿ ನಡೆದ ಅದ್ವಿತೀಯ 2024ರಲ್ಲಿ ಪೋಸ್ಟರ್ ಪ್ರಸ್ತುತಿಯಲ್ಲಿ ತೃತೀಯ ಸ್ಥಾನವನ್ನು ಗಳಿಸಿದ್ದಾರೆ.

ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಎಂ.ಬಿ. ಸಂಜಯ್ ಪಾಂಡೆ, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಬಿ.ಎನ್. ವೀರಪ್ಪ, ಇನ್ಫಾರ್ಮಶನ್ ಸೈನ್ಸ್ ಅಂಡ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಎಸ್. ನೀಲಾಂಬಿಕೆ, ವಿದ್ಯಾರ್ಥಿ ವ್ಯವಹಾರಗಳ ವಿಭಾಗದ ಉಪ ನಿರ್ದೇಶಕರಾದ ಎಂ. ಸಂತೋಷ ಕುಮಾರ್, ಜಿಎಂ ವಿಶ್ವವಿದ್ಯಾಲಯದ ಗಣಿತಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಕೆ.ಎಸ್. ಓಂಕಾರಪ್ಪ ಸೇರಿದಂತೆ ಆಡಳಿತ ಮಂಡಳಿ, ವಿಭಾಗದ ಮುಖ್ಯಸ್ಥರು ಮತ್ತು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ತುಮಕೂರಿನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಕ್ಕೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನ,ತುಮಕೂರು:ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕಾಗಿ ತುಮಕೂರಿನಲ್ಲಿ ಒಟ್ಟು 50 ಎಕರೆ ಜಾಗವನ್ನು ಕರ್ನಾಟಕ ಕ್ರಿಕೆಟ್ ಸಂಸ್ಥೆಗೆ ನೀಡಲಾಗಿದ್ದು ಇದು ಜಿಲ್ಲೆಯ ಆರ್ಥಿಕ ಬೆಳವಣಿಗೆ ಮತ್ತು ಅಭಿವೃದ್ಧಿಗೆ ಪೂರಕ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ತುಮಕೂರಿನ ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣ ನಿರ್ಮಾಣಕ್ಕೆ ಬ್ಯಾಟಿಂಗ್ ಮಾಡುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಆದಷ್ಟು ಶೀಘ್ರವೇ ಕ್ರೀಡಾಂಗಣ ನಿರ್ಮಾಣ ಮುಗಿಸಿ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆ ಪೂರೈಸಲಾಗುವುದು ಎಂದು ಹೇಳಿದ್ದಾರೆ. ಮೈಸೂರಿನಲ್ಲೂ ಕ್ರೀಡಾಂಗಣ ನಿರ್ಮಾಣಕ್ಕೆ ಕರ್ನಾಟಕ ಕ್ರಿಕೆಟ್ ಸಂಸ್ಥೆ ಬೇಡಿಕೆ ಮುಂದಿಟ್ಟಿದ್ದು ಮೈಸೂರಿನಲ್ಲೂ ಜಾಗ ನೀಡಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಾತನಾಡಿ, ಚೆನ್ನೈ-ಮುಂಬೈ ಇಂಡಸ್ಟ್ರೀಯಲ್ ಕಾರಿಡಾರ್ ಗಾಗಿ ಆರು ಹಂತದಲ್ಲಿ 20 ಸಾವಿರ ಎಕರೆ ಸ್ವಾಧೀನ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ವಸಂತನರಸಾಪುರದಲ್ಲಿ ಏಷ್ಯಾದಲ್ಲಿಯೇ ಅತಿ ದೊಡ್ಡ ಟೌನ್ ಶಿಪ್ ಪ್ರಾರಂಭವಾಗಿದೆ ಎಂದು ತಿಳಿಸಿದ ಅವರು, ಸ್ಥಳೀಯರಿಗೆ ಉದ್ಯೋಗ ನೀಡಬೇಕು ಎಂದು ಕೈಗಾರಿಕೆಗಳಿಗೆ ಮನವಿ ಮಾಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending