Connect with us

ಕ್ರೀಡೆ

ಬೆಳಗಿನ ಪ್ರಮುಖ ಸುದ್ದಿಗಳು

Published

on

ಬೆಳಗಿನ ಪ್ರಮುಖ ಸುದ್ದಿಗಳು

  1. ಪದ್ಮ ಶ್ರೀ ನಾಡೋಜ ಡಾ. ಸಾಲಮರದ ತಿಮ್ಮಕ್ಕನವರ 111ನೇ ಜನ್ಮದಿನ ಹಾಗೂ 2020ರ ನ್ಯಾಷನಲ್ ಗ್ರೀನರಿ ಪ್ರಶಸ್ತಿ ಪ್ರಧಾನ ಸಮಾರಂಭ ಬೆಂಗಳೂರಿನಲ್ಲಿ ಇಂದು ಬೆಳಿಗ್ಗೆ ನಡೆಯಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
  2. ಪ್ರಧಾನಮಂತ್ರಿ ನರೇಂದ್ರ ಮೋದಿ, ಇಂದು ಬೆಳಗ್ಗೆ10:30ಕ್ಕೆ ನವದೆಹಲಿಯಲ್ಲಿ ನಡೆಯಲಿರುವ ’ಉದ್ಯಮಿ ಭಾರತ್’ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಪ್ರಧಾನಿ ಎಂಎಸ್‌ಎಂಇ ಕಾರ್ಯಕ್ಷಮತೆ ಹೆಚ್ಚಳ ಮತ್ತು ವೇಗವರ್ಧನೆ, ಮೊದಲ ಬಾರಿಯ ಎಂಎಸ್‌ಎಂಇ ರಫ್ತುದಾರರ ಸಾಮರ್ಥ್ಯ ವೃದ್ಧಿ ಯೋಜನೆ ಮತ್ತು ಪ್ರಧಾನಮಂತ್ರಿ ಉದ್ಯೋಗ ಸೃಜನೆ ಕಾರ್ಯಕ್ರಮದ ಹೊಸ ವೈಶಿಷ್ಟ್ಯಗಳಿಗೆ ಚಾಲನೆ ನೀಡಲಿದ್ದಾರೆ.
  3. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜುಲೈ 21 ರಂದು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ನೆರವೇರಿಸಲಿದ್ದಾರೆ. ಈ ಕಾರ್ಯಕ್ರಮ ಯಶಸ್ವಿಗೆ ಅಧಿಕಾರಿಗಳು ಎಲ್ಲ ರೀತಿಯ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಮಂಡ್ಯದಲ್ಲಿ ನಿನ್ನೆ ಹೇಳಿದ್ದಾರೆ.

    ಜನರಲ್ಲಿ ವಿದ್ಯುತ್ ಚಾಲಿತ ವಾಹನಗಳ ಬಳಕೆ ಕುರಿತು ಜಾಗೃತಿ ಮೂಡಿಸಲು ಜುಲೈ1 ರಿಂದ 6ರವರೆಗೆ ಇವಿ ಅಭಿಯಾನವನ್ನು ಏರ್ಪಡಿಸಲಾಗಿದೆ. ಈ ಅಭಿಯಾನ ಎಲ್ಲ ಎಸ್ಕಾಂಗಳ ವ್ಯಾಪ್ತಿಯಲ್ಲಿ ನಡೆಯಲಿದ್ದು, ವಿವಿಧ ಸಂಘಸಂಸ್ಥೆಗಳು, ಕಾಲೇಜುಗಳ ಜೊತೆ ಇವಿ ಚಾರ್ಜಿಂಗ್ ಸ್ಟೇಷನ್‌ಗಳ ಸ್ಥಾಪನೆಗೆ ಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

  4. ಮಕ್ಕಳ ಮೇಲಿನ ದೌರ್ಜನ್ಯ ವಿರುದ್ಧದ ದೂರುಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಬೇಕೆಂದು ಚಾಮರಾಜನಗರ ಜಿಲ್ಲಾ ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎಂ. ಶ್ರೀಧರ ಪೊಲೀಸರಿಗೆ ತಿಳಿಸಿದ್ದಾರೆ.
  5. ಪ್ರಾಥಮಿಕ ಕೃಷಿ ಸಾಲ ಸಂಸ್ಥೆ-ಪಿಎಸಿಎಸ್‌ಗಳನ್ನು ಕಂಪ್ಯೂಟರೀಕರಣಗೊಳಿಸಲು ಕೇಂದ್ರ ಸಚಿವ ಸಂಪುಟ ನಿನ್ನೆ ಅನುಮೋದನೆ ನೀಡಿದೆ. ರಾಜ್ಯ ಸಹಕಾರಿ ಬ್ಯಾಂಕುಗಳು ಮತ್ತು ಜಿಲ್ಲಾ ಕೇಂದ್ರೀಯ ಸಹಕಾರಿ ಬ್ಯಾಂಕುಗಳು ನಬಾರ್ಡ್ ವ್ಯಾಪ್ತಿಗೆ ಒಳಪಟ್ಟಿದ್ದು, ಇವುಗಳಲ್ಲಿ ಕಾಮನ್ ಬ್ಯಾಂಕಿಂಗ್ ಸಾಫ್ಟ್‌ವೇರ್ ಸೌಲಭ್ಯ ಈಗಾಗಲೇ ಚಾಲ್ತಿಯಲ್ಲಿವೆ ಎಂದು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಸಿಂಗ್ ಠಾಕೂರ್ ನಿನ್ನೆ ತಿಳಿಸಿದ್ದಾರೆ. ಈ ನಿರ್ಧಾರದಿಂದ ಅಡುಗೆ ಎಣ್ಣೆ ತಯಾರಕರು ಮುಕ್ತವಾಗಿ ಮಾರುಕಟ್ಟೆಯಲ್ಲಿ ವ್ಯಾಪಾರ ಮಾಡಬಹುದಾಗಿದೆ ಎಂದು ಸಚಿವರು ಹೇಳಿದ್ದಾರೆ.
  6. ರಾಜ್ಯದಲ್ಲಿ 1 ಸಾವಿರದ 200 ಐಟಿಐ ಸಂಸ್ಥೆಗಳಿದ್ದು, ಇವುಗಳಲ್ಲಿ ಒಂದೂವರೆ ಲಕ್ಷ ವಿದ್ಯಾರ್ಥಿಗಳಿಗೆ ದೀರ್ಘಾವಧಿ ಕೋರ್ಸ್‌ಗಳನ್ನು ಕಲಿಯಲು ಮತ್ತು 1 ಲಕ್ಷ ವಿದ್ಯಾರ್ಥಿಗಳಿಗೆ ಅಲ್ಪವಾಧಿ ಕೋರ್ಸ್‌ಗಳನ್ನು ಕಲಿಯಲು ಅವಕಾಶ ಕಲ್ಪಿಸಲಾಗಿದೆ. ಪಾಲಿಟೆಕ್ನಿಕ್‌ಗಳಲ್ಲಿ ಈ ಮುನ್ನ 30 ಸಾವಿರದಷ್ಟು ಇದ್ದ ಪ್ರವೇಶಾತಿ ಈಗ 75 ಸಾವಿರಕ್ಕೆ ಹೆಚ್ಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಕುಂದಾಪುರದಲ್ಲಿ ಹೇಳಿದ್ದಾರೆ.
  7. ಕೇಂದ್ರ ಸರ್ಕಾರದ ಯೋಜನೆಗಳಾದ ಪಿ.ಎಂ.ಸ್ವನಿಧಿ ಯೋಜನೆ, ಮಾತೃವಂಧನ, ಪ್ರಧಾನಮಂತ್ರಿ ಮತ್ಸ್ಯ ಸಂಪದ, ಆಯುಷ್ಮಾನ ಭಾರತ ಆರೋಗ್ಯ ವಿಮೆ ಸೇರಿದಂತೆ ವಿವಿಧ ಯೋಜನೆಗಳ ಲಾಭ ಎಲ್ಲಾ ವರ್ಗದ ಜನರಿಗೆ ದೊರೆಯುವಂತಾಗಲು ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ ಹಾಗೂ ರಾಸಾಯನಿಕ ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಬೀದರ್‌ನಲ್ಲಿ ತಿಳಿಸಿದ್ದಾರೆ.
  8. ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮರಾಜು ಅವರ 125ನೇ ಜನ್ಮ ದಿನದ ಅಂಗವಾಗಿ ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂ ಪಟ್ಟಣದಲ್ಲಿ ಜುಲೈ 4 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ಭಾಗವಹಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅವರು, ಅಲ್ಲೂರಿ ಸೀತಾರಾಮರಾಜು ಅವರ ಪುತ್ಥಳಿಯನ್ನು ಅನಾವರಣಗೊಳಿಸಲಿದ್ದಾರೆ.
  9. ಶ್ರೀ ಅಮರನಾಥ ಯಾತ್ರಾರ್ಥಿಗಳ ಮೊದಲ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾಶ್ಮೀರ ಕಣಿವೆಯಲ್ಲಿ ನಿನ್ನೆ ಹಸಿರು ನಿಶಾನೆ ತೋರಿದರು. ಬಿಗಿ ಭದ್ರತಾ ವ್ಯವsಸ್ಥೆ ನಡುವೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆ ಆರಂಭವಾಯಿತು. ಕಾಶ್ಮೀರ ಕಣಿವೆಯಲ್ಲಿರುವ ಶ್ರೀ ಅಮರನಾಥ ಗುಹ ದೇವಾಲಯಕ್ಕೆ ಈ ವರ್ಷದ ೪೩ ದಿನಗಳ ವಾರ್ಷಿಕ ಯಾತ್ರೆ ಇಂದಿನಿಂದ ಕಾಶ್ಮೀರ ಕಣಿವೆಯ ಪಹಲ್‌ಗಾಮ್ ಮತ್ತು ಬಲ್‌ತಾಲ್ ಮಾರ್ಗಗಳಿಂದ ಆರಂಭವಾಗಲಿದೆ.
  10. ಬರುವ ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ. ಜುಲೈ 20 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ರಾಜಸಭೆಯ 233 ಚುನಾಯಿತ ಸದಸ್ಯರು, ನಾಮನಿರ್ದೇಶನ ಹೊಂದಿದ 12ಸದಸ್ಯರು ಹಾಗೂ ಲೋಕಸಭೆಯ 543 ಚುನಾಯಿತ ಸದಸ್ಯರು ಮತ ಚಲಾಯಿಸಬಹುದಾಗಿದೆ. ಲೋಕಸಭೆಯ ಮಹಾ ಪ್ರಧಾನ ಕಾರ್ಯದರ್ಶಿ ಉಪರಾಷ್ಟ್ರಪತಿ ಚುನಾವಣೆಯ ಚುನಾವಣಾಧಿಕಾರಿ ಕಾರ್ಯನಿರ್ವಹಿಸಲಿದ್ದಾರೆ. ಉಪರಾಷ್ಟ್ರಪತಿ ಎಂ. ವೆಂಕಯ್ಯನಾಯ್ಡು ಅವರ ಅಧಿಕಾರವಾಧಿ ಆಗಸ್ಟ್ 10ಕ್ಕೆ ಮುಕ್ತಾಯಗೊಳ್ಳಲಿದೆ.
  11. ವಿಶ್ವ ಯುವ ಕೌಶಲ್ಯ ದಿನದ ದಿನ ಜುಲೈ 15 ರಂದು ಮರುವಿನ್ಯಾಸಗೊಳಿಸಲಾದ ಕೌಶಲ್ಯ ಸಂಪರ್ಕ ವೆಬ್ ಪೋರ್ಟಲ್ ಅಥವಾ ಸ್ಕಿಲ್ ಕನೆಕ್ಟ್ ಅನ್ನು ಪ್ರಾರಂಭಿಸಲಾಗುವುದು ಎಂದು ಕರ್ನಾಟಕದ ಕೌಶಲ್ಯ ಅಭಿವೃದ್ಧಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಉಡುಪಿಯಲ್ಲಿ ಹೇಳಿದ್ದಾರೆ.
  12. ಜುಲೈ ಅಂತ್ಯದೊಳಗೆ ಮೈಶುಗರ್ ಕಾರ್ಖಾನೆ ದುರಸ್ತಿ ಕಾರ್ಯ ಪೂರ್ಣಗೊಳಿಸುವಂತೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ. ನಾರಾಯಣಗೌಡ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನಿನ್ನೆ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಗೋಪಾಲಯ್ಯ ಅವರೊಂದಿಗೆ ಮೈಶುಗರ್ ಕಾರ್ಖಾನೆಗೆ ಭೇಟಿ ನೀಡಿ ದುರಸ್ತಿ ಕಾರ್ಯದ ಪ್ರಗತಿ ಪರಿಶೀಲನೆ ನಡೆಸಿದ ಬಳಿಕ ಮೈಶುಗರ್ ಕಾರ್ಖಾನೆ ಮಂಡ್ಯ ರೈತರ ಜೀವನಾಡಿಯಾಗಿದೆ ಎಂದು ಹೇಳಿದ್ದಾರೆ.
  13. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಇಂದು ಸಂಜೆ 6.02 ಕ್ಕೆ ಮೂರು ಸಿಂಗಾಪುರ ಉಪಗ್ರಹಗಳನ್ನು ಹೊತ್ತ ಪಿಎಸ್‌ಎಲ್ ವಿ-ಸಿ 53ರಾಕೆಟ್‌ಅನ್ನು ಉಡಾವಣೆ ಮಾಡಲು ಸಜ್ಜಾಗಿದೆ. ಉಡಾವಣಾ ವಾಹನವು ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ.
  14. ಬರುವ ಆಗಸ್ಟ್ 6 ರಂದು ಉಪರಾಷ್ಟ್ರಪತಿ ಚುನಾವಣೆ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಆಯೋಗ, ಜುಲೈ 5 ರಂದು ಅಧಿಸೂಚನೆ ಹೊರಬೀಳಲಿದ್ದು, ನಾಮಪತ್ರ ಸಲ್ಲಿಸಲು ಜುಲೈ 19ರವರೆಗೆ ಅವಕಾಶವಿರುತ್ತದೆ ಎಂದು ಹೇಳಿದೆ.
  15. ಅಮರನಾಥ ಯಾತ್ರಾರ್ಥಿಗಳ ಮೊದಲ ತಂಡಕ್ಕೆ ಜಮ್ಮು ಮತ್ತು ಕಾಶ್ಮೀರದ ಲೆಪ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಕಾಶ್ಮೀರ ಕಣಿವೆಯಲ್ಲಿ ಹಸಿರು ನಿಶಾನೆ ತೋರಿದರು. ಬಿಗಿ ಭದ್ರತಾ ವ್ಯವsಸ್ಥೆ ನಡುವೆ ನಿನ್ನೆ ಬೆಳಿಗ್ಗೆ ಜಮ್ಮುವಿನ ಭಗವತಿ ನಗರ ಮೂಲ ಶಿಬಿರದಿಂದ ಯಾತ್ರೆ ಆರಂಭವಾಯಿತು. ಕಾಶ್ಮೀರ ಕಣಿವೆಯಲ್ಲಿರುವ ಶ್ರೀ ಅಮರನಾಥ ಗುಹ ದೇವಾಲಯಕ್ಕೆ ಈ ವರ್ಷದ 43 ದಿನಗಳ ವಾರ್ಷಿಕ ಯಾತ್ರೆ ಇಂದಿನಿಂದ ಕಾಶ್ಮೀರ ಕಣಿವೆಯ ಪಹಲ್‌ಗಾಮ್ ಮತ್ತು ಬಲ್‌ತಾಲ್ ಮಾರ್ಗಗಳಿಂದ ಆರಂಭವಾಗಲಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

ಟಿ-20 ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ದೆಹಲಿಗೆ ಆಗಮನ ; ಸಂಜೆ ರೋಡ್ ಶೋ

Published

on

ಸುದ್ದಿದಿನಡೆಸ್ಕ್:ಟಿ-20ವಿಶ್ವಕಪ್ ಪ್ರಶಸ್ತಿ ವಿಜೇತ ಭಾರತ ಕ್ರಿಕೆಟ್ ತಂಡ ಇಂದು ಬೆಳಗ್ಗೆ ರಾಜಧಾನಿ ದೆಹಲಿಗೆ ಆಗಮಿಸಿತು. ವಿಮಾನ ನಿಲ್ದಾಣದಲ್ಲಿ ಭಾರತದ ಆಟಗಾರರಿಗೆ ಆತ್ಮೀಯ ಸ್ವಾಗತ ಕೋರಲಾಯಿತು. ಪಂದ್ಯಾವಳಿಯ ಫೈನಲ್ ಪಂದ್ಯ ನಡೆದ ಬಾರ್ಬಡೋಸ್‌ನಿಂದ ತಂಡವು ಹಿಂತಿರುಗಿತು.

ಬೆರಿಲ್ ಚಂಡಮಾರುತದಿಂದಾಗಿ ಭಾರತ ತಂಡದ ಆಗಮನ ವಿಳಂಬವಾಯಿತು. ರಾಷ್ಟ್ರದ ರಾಜಧಾನಿಯಲ್ಲಿ ಭಾರತೀಯ ತಂಡವನ್ನು ಸ್ವಾಗತಿಸಲು ಕ್ರಿಕೆಟ್ ಅಭಿಮಾನಿಗಳು ಭಾರೀ ಸಂಖ್ಯೆಯಲ್ಲಿ ಸೇರಿದ್ದಾರೆ. ಆ ಹಿನ್ನೆಲೆಯಲ್ಲಿ ದೆಹಲಿ ಪೊಲೀಸರು ಸಾಕಷ್ಟು ಭದ್ರತಾ ವ್ಯವಸ್ಥೆಗಳನ್ನು ಕೈಗೊಂಡಿದ್ದಾರೆ. ಮುಂಬೈಗೆ ತೆರಳುವ ಮುನ್ನ ಭಾರತ ತಂಡ ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಲಿದೆ.

ಚಾಂಪಿಯನ್ ತಂಡ ಮುಂಬೈನಲ್ಲಿ ಇಂದು ಸಂಜೆ ತೆರೆದ ಬಸ್‌ನಲ್ಲಿ ರೋಡ್ ಶೋನಲ್ಲಿ ಭಾಗವಹಿಸಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ -ಬಿಸಿಸಿಐ ಕಾರ್ಯದರ್ಶಿ ಜೈ ಶಾ ತಿಳಿಸಿದ್ದಾರೆ.

ಸಂಜೆ 5ರಿಂದ 7ರವರೆಗೆ ನಾರಿಮನ್ ಪಾಯಿಂಟ್‌ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ವಿಜಯಯಾತ್ರೆ ನಡೆಯಲಿದೆ. ಅದರ ನಂತರ ವಾಂಖೆಡೆ ಕ್ರೀಡಾಂಗಣದಲ್ಲಿ ಸನ್ಮಾನ ಸಮಾರಂಭ ನಡೆಯಲಿದ್ದು, ಅಲ್ಲಿ ಬಿಸಿಸಿಐ ಭಾರತ ತಂಡಕ್ಕೆ ಬಹುಮಾನ ಮೊತ್ತವನ್ನು ನೀಡಲಿದೆ. ಟಿ-20 ವಿಶ್ವಕಪ್ ವಿಜೇತ ಭಾರತ ಕ್ರಿಕೆಟ್ ತಂಡದ ರೋಡ್ ಶೋಗೆ ಪೊಲೀಸರು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಕ್ರೀಡೆ

11 ವರ್ಷಗಳ ನಂತರ ಭಾರತ ತಂಡಕ್ಕೆ ಐಸಿಸಿ ಟಿ-20 ವಿಶ್ವಕಪ್ ಕಿರೀಟ ; ಗಣ್ಯರ ಮೆಚ್ಚುಗೆ

Published

on

ಸುದ್ದಿದಿನಡೆಸ್ಕ್:ಬಾರ್ಬಡೋಸ್ ನ ಕೆನ್ಸಿಂಗ್ಟನ್ ಓವಲ್ ಕ್ರೀಡಾಂಗಣದಲ್ಲಿ ಕಳೆದ ರಾತ್ರಿ 7 ರನ್ ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿದ ರೋಹಿತ್ ಶರ್ಮ ನೇತೃತ್ವದ ಭಾರತ ತಂಡ, 17 ವರ್ಷಗಳ ನಂತರ ಐಸಿಸಿ ಪುರುಷರ ಟಿ-20 ವಿಶ್ವಕಪ್ ಗೆದ್ದಸಾಧನೆ ಮಾಡಿದೆ.

ಭಾರತ ನೀಡಿದ 177 ರನ್ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ, 8 ವಿಕೆಟ್ ನಷ್ಟಕ್ಕೆ 169 ರನ್ ಗಳಿಸಲಷ್ಟೇ ಶಕ್ತಗೊಂಡಿತು. ದಕ್ಷಿಣ ಆಫ್ರಿಕಾ ಪರ ಹೆನ್ರಿಚ್ ಕ್ಲಾಸೆನ್ 52 ರನ್ ಗಳಿಸಿದರೆ, ಭಾರತ ತಂಡದ ಪರ ಹಾರ್ದಿಕ್ ಪಾಂಡ್ಯ 3, ಜಸ್ ಪ್ರಿತ್ ಬುಮ್ರಾ ಮತ್ತು ಅರ್ಷ್ ದೀಪ್ ಸಿಂಗ್ ತಲಾ 2 ವಿಕೆಟ್ ಪಡೆದರು.

ಟೂರ್ನಿಯಲ್ಲಿ ಅತ್ಯುತ್ತಮ ಇನಿಂಗ್ಸ್ ಆಡಿದ ವಿರಾಟ್ ಕೊಹ್ಲಿ ಸಹಜವಾಗಿಪಂದ್ಯ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. ಹಾಗೆಯೇ 8 ಪಂದ್ಯಗಳಿಂದ 15 ವಿಕೆಟ್ ಉರುಳಿಸಿದ ವೇಗಿ ಜಸ್ ಪ್ರಿತ್ ಬುಮ್ರಾ ಟೂರ್ನಿ ಶ್ರೇಷ್ಠ ಗೌರವಕ್ಕೆ ಪಾತ್ರರಾದರು. 2007ರ ನಂತರ ಭಾರತ ಟಿ20 ವಿಶ್ವಕಪ್ ಗೆದ್ದರೆ, 2013ರ ಚಾಂಪಿಯನ್ಸ್ ಟ್ರೋಫಿ ಬಳಿಕ ಐಸಿಸಿ ಟ್ರೋಫಿ ತನ್ನದಾಗಿಸಿಕೊಂಡಿದೆ.

ಈ ಮಧ್ಯೆ, ಭಾರತ ತಂಡ 2ನೇ ಬಾರಿ ಟಿ20 ವಿಶ್ವಕಪ್ ಗೆದ್ದ ಬೆನ್ನಲ್ಲೇ ಕ್ರಿಕೆಟ್ ನ ದಿಗ್ಗಜರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ಗೆ ನಿವೃತ್ತಿ ಪ್ರಕಟಿಸಿದ್ದಾರೆ. 2024ರ ಟಿ20 ವಿಶ್ವಕಪ್ ಗೆದ್ದ ಭಾರತ ತಂಡಕ್ಕೆ ರಾಷ್ಟ್ರಪತಿ, ಉಪರಾಷ್ಟ್ರಪತಿ ಮತ್ತು ಪ್ರಧಾನಿ ಅಭಿನಂದನೆ ಸಲ್ಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending