Connect with us

ದಿನದ ಸುದ್ದಿ

ಮರೆಯಾದ ದಾದಾ ಗೆ ಶ್ರದ್ಧಾಂಜಲಿ

Published

on

  • ಜಗದೀಶ್ ಕೊಪ್ಪ

ಭಾರತ ಕಂಡ ಪ್ರಬುದ್ಧ ರಾಜಕಾರಣಿ ಹಾಗೂ ಭಾರತದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇಂದು ನಿಧನರಾಗಿದ್ದಾರೆ. ಅಪಾರ ಓದಿನ ಹಾಗೂ ಪ್ರಣಬ್ ದಾದಾ ಎಂದು ಕರೆಸಿಕೊಳ್ಳುತ್ತಿದ್ದ ಮುಖರ್ಜಿಯವರು ರಾಜೀವ್ ಗಾಂಧಿಯವರ ಆಳ್ವಿಕೆಯಲ್ಲಿ ಕಾಂಗ್ರೇಸ್ ಪಕ್ಷದಿಂದ ಒಂದಷ್ಟು ಕಾಲ ಮೂಲೆಗುಂಪಾಗಿದ್ದು ಹೊರತು ಪಡಿಸಿಸಿದರೆ, ಕಾಂಗ್ರೇಸ್ ಪಕ್ಷದ ನಿಷ್ಟಾವಂತ ನಾಯಕರಲ್ಲಿ ಒಬ್ಬರಾಗಿ ದುಡಿದರು.

ದೇಶ ಕಂಡ ಸಭ್ಯ ರಾಜಕಾರಣಿಗಳಲ್ಲಿ ಒಬ್ಬರಾಗಿದ್ದ ಮುಖರ್ಜಿಯವರು ಪಶ್ಚಿಮ ಬಂಗಾಳದಲ್ಲಿ ಜ್ಯೋತಿ ಬಸುರವರು ಹಲವು ದಶಕಗಳ ಕಾಲ ಎಡರಂಗವನ್ನು ಅಧಿಕಾರಕ್ಕೆ ತಂದು‌ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸುತ್ತಿರುವಾಗ ಕಾಂಗ್ರೇಸ್ ಪಕ್ಷದ ನಾಯಕರಾಗಿದ್ದುಕೊಂಡು, ಎಂದಿಗೂ ಇಂದಿನ ರಾಜಕಾರಣಿಗಳ ರೀತಿಯಲ್ಲಿ ಮೂರನೆಯ ದರ್ಜೆ ಭಾಷೆಯನ್ನು ಬಳಸದೆ ಸೈದ್ಧಾಂತಿಕವಾಗಿ ಹೋರಾಟ ಮಾಡುತ್ತಿದ್ದರು.

ಡಾ.ಮನಮೋಹನ್ ಸಿಂಗ್ ರವರನ್ನು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗೌರ್ನರ್ ಮಾಡಿದ ಮುತ್ಸದ್ಧಿ. ಪಿ.ವಿ.ನರಸಿಂಹರಾವ್ ಪ್ರಧಾನಿಯಾಗಿದ್ದಾಗ ಅವರನ್ನು ಒಪ್ಪಿಸುವುದರ ಮೂಲಕ ಸಿಂಗ್ ರವರನ್ನು ಮುನ್ನಲೆಗೆ ತಂದವರು.ಇಂದಿರಾಗಾಂಧಿ ಮತ್ತು ನರಸಿಂಹರಾವ್ ಅವಧಿಯಲ್ಲಿ ವಿದೇಶಾಂಗ, ಹಣಕಾಸು, ಗೃಹಖಾತೆಯಂತಹ ಪ್ರಭಾವಿ ಖಾತೆಗಳನ್ನು ನಿರ್ವಹಿಸಿದರು.

1984ರಲ್ಲಿ ದೆಹಲಿಯ ಗ್ರೇಟರ್ ಕೈಲಾಸ್ ಪ್ರದೇಶದ ಬಂಗಾಳಿ ಮಾರ್ಕೆಟ್ ಬಳಿ ಒಂದೇ ಅಪಾರ್ಟ್ ಮೆಂಟ್ ನ ಎದುರು‌ ಬದುರು ನಿವಾಸಿಗಳಾಗಿದ್ದ ಎಸ್.ಎಂ.ಕೃಷ್ಣ ಮತ್ತು ಪ್ರಣಬ್ ಮುಖರ್ಜಿ ಒಳ್ಳೆಯ ಸ್ನಹಿತರಾಗಿದ್ದರು. ರಾಷ್ಟ್ರಪತಿ ಹುದ್ದೆಯಿಂದ ಹಿಡಿದು, ಭಾರತ ರತ್ನ ಪ್ರಶಸ್ತಿ ಗೆ ಭಾಜನರಾಗಿದ್ದ ಪ್ರಣಬ್ ದಾದಾ ಒಂದರ್ಥದಲ್ಲಿ ಅಜಾತ ಶತ್ರು. ಪಶ್ಚಿಮ ಬಂಗಾಳದ ರಾಜಕಾರಣದಲ್ಲಿ ಸಿದ್ಧಾರ್ಥ ಶಂಕರ್ ರಾಯ್, ಜ್ಯೋತಿ ಬಸು ಹಾಗೂ ಪ್ರಣಬ್ ಮುಖರ್ಜಿ ಮರೆಯಲಾಗದ ಹೆಸರುಗಳು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

Published

on

ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.

ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.

ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ‍್ವಾಮಿ.ಜಿ.ಎಂ.ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

Published

on

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.

ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)

AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.

ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್‌ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.

ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.

ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್‌ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್‌ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.

ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್‌ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.

ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending