ದಿನದ ಸುದ್ದಿ
ಪ್ರಶಾಂತ್ ಭೂಷಣ್ ಗೆ 1 ರೂ ದಂಡ ವಿಧಿಸಿದ ಸುಪ್ರೀಂ
ಸುದ್ದಿದಿನ, ದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಹಿರಿಯ ವಕೀಲ ಪ್ರಶಾಂತ್ ಭೂಷಣ್ ಅವರಿಗೆ ಸುಪ್ರೀಂ ಕೋರ್ಟ್ ಇಂದು 1 ರೂ. ದಂಡ ವಿಧಿಸಿದೆ. ಈ ದಂಡವನ್ನು ಪಾವತಿಸದಿದ್ದರೆ, ಮೂರು ತಿಂಗಳವರೆಗೆ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ ಹಾಗೂ ಮೂರು ತಿಂಗಳ ಕಾಲ ಕೋರ್ಟ್ ನಲ್ಲಿ ವಕಾಲತ್ತು ನಡೆಸುವಂತಿಲ್ಲ ಎಂದು ಕೋರ್ಟ್ ಹೇಳಿದೆ. ಕಳೆದ ಜೂ.29ರಂದು ಪ್ರಶಾಂತ್ ಭೂಷಣ್ ಮಾಡಿದ್ದ ಟ್ವೀಟ್ ಗಳಿಗೆ ಸಂಬಂಧಿಸಿದಂತೆ ಕೋರ್ಟ್ ಅವರನ್ನು ತಪ್ಪಿತಸ್ಥರೆಂದು ಪರಿಗಣಿಸಿತ್ತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243