ರಾಜಕೀಯ
ಬಿಜೆಪಿಯವ್ರನ್ನ ಟಚ್ ಮಾಡಿದ್ರೆ ಹುಷಾರ್ : ಪ್ರತಾಪ್ ಸಿಂಹ
ಸುದ್ದಿದಿನ, ಚಾಮರಾಜನಗರ : “ನಮ್ಮ ಬಿಜೆಪಿ ಕಾರ್ಯಕರ್ತರನ್ನ ಕುಮಾರಸ್ವಾಮಿ ಸರ್ಕಾರ ಏನಾದ್ರೂ ಮುಟ್ಟಿದ್ರೆ, ನಾವು ಸುಮ್ಮನಿರೋಲ್ಲ, ಹುಷಾರ್” ಎಂದು ಸಂಸದ ಪ್ರತಾಪ್ ಸಿಂಹ ಗುಡುಗಿದರು.
ಶನಿವಾರ ಚಾಮರಾಜ ನಗರಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರನ್ನು ಟಚ್ ಮಾಡಿದ್ರೆ ನಾವು ಸುಮ್ಮನೆ ಕೂರೊಲ್ಲ. ಹಾಗೇ ನಾನು ಹಾಸನದಿಂದ ಎಂಪಿ ಚುನಾವಣೆಗೆ ಸ್ಪರ್ಧಿಸೋದಿಲ್ಲ. ಅದು ಕೇವಲ ಊಹಾಪೂಹವಷ್ಟೆ. ಮೈಸೂರಿನಲ್ಲಿ ಸಾಕಷ್ಟು ಅಭಿವೃದ್ಧಿಯ ಕೆಲಸ ಮಾಡಿದ್ದೇನೆ. ಅದಕ್ಕಾಗಿ ಕೇಂದ್ರದಿಂದ ಹನ್ನೊಂದುವರೆ ಕೋಟಿ ಬಿಡುಗಡೆ ಮಾಡಿಸಿದ್ದೇನೆ ಹಾಗಾಗಿ ಮೈಸೂರಿನಿಂದಾನೆ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ:ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ನಡೆದಿರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಯ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತೆ ಮಂಜುಶ್ರೀ ಎನ್ ಹಾಗೂ ಮಂಗಳೂರು ಪ್ರಾದೇಶಿಕ ಕಛೇರಿಯ ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಡಾ.ಕೆ.ಎ.ಓಬಳಪ್ಪ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ.
ಡಾ.ಕೆ.ಎ.ಓಬಳಪ್ಪ ಇವರು ದಿ ಅಕಾಡೆಮಿ ಆಫ್ ಜನರಲ್ ಎಜುಕೇಶನ್, ಮಣಿಪಾಲ ಇಲ್ಲಿ ಅಧಿಸೂಚನೆ ಹೊರಡಿಸಿರುವ ಕನ್ನಡ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದು, ಸಂದರ್ಶನಕ್ಕೂ ಹಾಜರಾಗಿರುತ್ತಾರೆ. ಆದರೆ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸದೆ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಮಾಹಿತಿಹಕ್ಕು ಅಡಿಯಲ್ಲಿ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ದೃಢೀಕರಿಸಿ ನೀಡುವಂತೆ ಕೋರಿದಾಗಲೂ ಮಾಹಿತಿ ನೀಡದೆ ನಿರಾಕರಿಸಿರುತ್ತಾರೆ. ಯು.ಜಿ.ಸಿ ನಿಯಮಾವಳಿ ಪ್ರಕಾರ 1:5 ಅನುಪಾತದಲ್ಲಿ ಸಂದರ್ಶನಕ್ಕೆ ಆಹ್ವಾನಿಸದೆ ವಿಷಯವಾರು ಮತ್ತು ಮೀಸಲಾತಿವಾರು 1:10, 1:15 ಅನುಪಾತದವರೆಗೂ ಮನಸ್ಸಿಚ್ಚೆಯಂತೆ ಸಂದರ್ಶನಕ್ಕೆ ಆಹ್ವಾನ ನೀಡಿ, ಕಾನೂನುಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಿರುತ್ತಾರೆ.
ಹೀಗಾಗಿ ಅಂತಿಮ ಆಯ್ಕೆ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸುವರೆಗೂ ಈ ನೇಮಕಾತಿ ಪ್ರಕ್ರಿಯೆಯನ್ನು ತಾತ್ಕಾಲಿಕವಾಗಿ ತಡೆಹಿಡಿಯುವಂತೆ ಕಾಲೇಜು ಶಿಕ್ಷಣ ಆಯುಕ್ತರು ಹಾಗೂ ಪ್ರಾದೇಶಿಕ ಜಂಟಿ ನಿರ್ದೇಶಕರುಗಳಿಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಆದರೆ ತಕರಾರು ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ಸ್ಪಷ್ಟನೆ ನೀಡದೆ ನಿಯಮಬಾಹಿರವಾಗಿ ನೇಮಕಾತಿ ಪ್ರಕ್ರಿಯೆಯನ್ನು ಮುಂದುವರೆಸಲಾಗಿರುತ್ತದೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
ಸುದ್ದಿದಿನ,ದಾವಣಗೆರೆ:ನವೆಂಬರ್ 10 ರ ಬೆಳಿಗ್ಗೆ 10 ಗಂಟೆ ಸುಮಾರಿಗೆ, ಹೊನ್ನಾಳಿ ತಾಲ್ಲೂಕು ಹಿರೇಗೋಣಿಗೆರೆ ಗ್ರಾಮದ ಅರಣ್ಯ ಪ್ರದೇಶದಲ್ಲಿ ಇರುವ ಸರ್ವೆ ನಂ 67ರಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿಯಲ್ಲಿ ಕಂದಕ ನಿರ್ಮಾಣ ಕೆಲಸದ ಕೂಲಿ ಕೆಲಸದಲ್ಲಿ ನಿರತರಾಗಿದ್ದ ಜಿಕ್ರಿಯಾ ಸಬಾದ್ ಬಿನ್ ನಿಯಾಸಾಬ್ ಸುಮಾರು ವಯಸ್ಸು 61, ಜಾಬ್ ಕಾರ್ಡ್ ಸಂಖ್ಯೆ ಕೆಎನ್ -12-005-037-004/396, ಹಠಾತ್ತನೆ ಕುಸಿದು ಬಿದ್ದು ಸ್ಥಳದಲ್ಲೇ ನಿಧನರಾಗಿರುವರು.
ಘಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಭೇಟಿ ನೀಡಿ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು. ಕಾಮಗಾರಿ ಸ್ಥಳಗಳಲ್ಲಿ ನಿಯಮಿತ ಆರೋಗ್ಯ ತಪಾಸಣೆ ಮತ್ತು ಸುರಕ್ಷತೆಯ ಮಹತ್ವವನ್ನು ಒತ್ತಿ ಹೇಳಿದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಮತ್ತು ಅವರಿಗೆ ಎಲ್ಲಾ ಸರ್ಕಾರಿ ಸವಲತ್ತುಗಳು ಮತ್ತು ಸಹಾಯವನ್ನು ಆದಷ್ಟು ಬೇಗ ನೀಡಲಾಗುವುದು ಎಂದು ಭರವಸೆ ನೀಡಿದರು.
ಈ ವೇಳೆ ಹೊನ್ನಾಳಿ ತಾಲ್ಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ, ಹೊನ್ನಾಳಿ ವಲಯ ಅರಣ್ಯ ಅಧಿಕಾರಿ ಮತ್ತು ಹಿರೇಗೋಣಿಗೆರೆ ಗ್ರಾಮ ಪಂಚಾಯತ್ ಪಿಡಿಓ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಇದೇ 15 ರಂದು ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ
ಸುದ್ದಿದಿನ,ದಾವಣಗೆರೆ:ಜಿಲ್ಲೆಯಾದ್ಯಂತ ನರೇಗಾ ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗಾಗಿ ವಿವಿಧ ತಾಲ್ಲೂಕುಗಳಲ್ಲಿನ ಕಾಮಗಾರಿಯ ಸ್ಥಳಗಳಲ್ಲಿಯೇ ಉಚಿತ ಆರೋಗ್ಯ ತಪಾಸಣೆ ಶಿಬಿರಗಳನ್ನು ನವಂಬರ್ 15 ರಂದು ಆಯೋಜಿಸಲಾಗಿದೆ.
ಶಿಬಿರ ನಡೆಯುವ ಸ್ಥಳಗಳು
ಚನ್ನಗಿರಿ ತಾಲ್ಲೂಕು – ದಾಗಿನಕಟ್ಟೆ ಗ್ರಾಮ ಪಂಚಾಯಿತಿ, ದಾವಣಗೆರೆ ತಾಲ್ಲೂಕು – ಕಾಡಜ್ಜಿ ಗ್ರಾಮ ಪಂಚಾಯಿತಿ, ಹರಿಹರ ತಾಲ್ಲೂಕು – ಕಡರನಾಯಕನಹಳ್ಳಿ ಗ್ರಾಮ ಪಂಚಾಯಿತಿ, ಹೊನ್ನಾಳಿ ತಾಲ್ಲೂಕು – ತಿಮ್ಲಾಪುರ ಗ್ರಾಮ ಪಂಚಾಯಿತಿ, ಜಗಳೂರು ತಾಲ್ಲೂಕು – ತೋರಣಗಟ್ಟೆ ಗ್ರಾಮ ಪಂಚಾಯಿತಿ, ನ್ಯಾಮತಿ ತಾಲ್ಲೂಕು – ಕುಂಕೋವಾ ಗ್ರಾಮ ಪಂಚಾಯಿತಿ.
ತಪಾಸಣೆಯ ಅಂಶಗಳು
ರಕ್ತದ ಒತ್ತಡ, ರಕ್ತದಲ್ಲಿನ ಸಕ್ಕರೆ, ಕ್ಷಯರೋಗ, ಪರೀಕ್ಷೆ, ಕುಷ್ಟರೋಗ ಪರೀಕ್ಷೆ, ಜ್ವರದ ಪ್ರಕರಣಗಳಲ್ಲಿ ರಕ್ತದ ಮಾದರಿ ಸಂಗ್ರಹ ಹಾಗೂ ಅಗತ್ಯವಿದ್ದರೆ ಇತರೆ ತಪಾಸಣೆಗಳನ್ನೂ ನಡೆಸಲಾಗುತ್ತದೆ. ಈ ಶಿಬಿರಗಳ ಮೂಲಕ ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯನ್ನು ಬಲಪಡಿಸುವ ಜೊತೆಗೆ, ಸಮಯೋಚಿತ ವೈದ್ಯಕೀಯ ನೆರವು ಮತ್ತು ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ.
ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ದುಡಿದು ಜೀವನ ಸಾಗಿಸುತ್ತಿರುವ ಕೂಲಿಕಾರರ ಆರೋಗ್ಯ ನಮ್ಮ ಪ್ರಮುಖ ಆದ್ಯತೆ. ಶ್ರಮದ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಈ ಶ್ರಮಜೀವಿಗಳ ದೈಹಿಕ ಕ್ಷೇಮತೆ ಖಚಿತಪಡಿಸಿಕೊಳ್ಳುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿರುತ್ತದೆ.
ಈ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯ ಪ್ರತೀಕವಾಗಿದೆ. ಈ ಶಿಬಿರಗಳ ಮೂಲಕ ಪ್ರತಿ ಕೆಲಸಗಾರರು ತಮ್ಮ ಆರೋಗ್ಯದ ಬಗ್ಗೆ ಅರಿವು ಪಡೆಯಬೇಕು, ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಅಗತ್ಯ ಚಿಕಿತ್ಸೆಯನ್ನು ಪಡೆಯಬೇಕು. ಎಲ್ಲ ಇಲಾಖಾ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಪಂಚಾಯತ್ ನೌಕರರು ಈ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಬೇಕೆಂದು ಎಂದು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ2 days agoಕರ್ತವ್ಯ ಲೋಪ ; ಪಿ.ಮಣಿವಣ್ಣನ್, ಕ್ರೈಸ್ ಇ.ಡಿ ಕಾಂತರಾಜು ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ17 hours agoಕರ್ತವ್ಯ ಲೋಪ | ಆಯುಕ್ತೆ ಮಂಜುಶ್ರೀ, ಜಂಟಿ ನಿರ್ದೇಶಕಿ ಕೆ.ಆರ್.ಕವಿತಾ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಸಚಿವ ಪ್ರಿಯಾಂಕ ಖರ್ಗೆ ಪಂಚಾಯತ್ ರಾಜ್ ಇಲಾಖೆ ನಿರ್ಲಕ್ಷ್ಯ | ದೂರು ನೀಡಿ 6 ತಿಂಗಳಾದರೂ ಯಾವುದೇ ಕ್ರಮವಿಲ್ಲ ; ವಕೀಲ ಡಾ.ಕೆ.ಎ.ಓಬಳಪ್ಪ ಆರೋಪ
-
ದಿನದ ಸುದ್ದಿ2 days agoಹೊಳಲ್ಕೆರೆ | ಕೆ.ಟಿ.ಪಿ.ಪಿ ನಿಯಮ ಉಲ್ಲಂಘನೆ ; ನಕಲಿ ಜಿ.ಎಸ್.ಟಿ ಬಿಲ್ಲುಗಳ ಮೂಲಕ ಖರೀದಿ ವ್ಯವಹಾರ ಪ್ರಾಂಶುಪಾಲ ಡಾ ಎಸ್.ಪಿ ರವಿ ವಿರುದ್ಧ ಲೋಕಾಯುಕ್ತಕ್ಕೆ ವಕೀಲ ಡಾ.ಓಬಳೇಶ್ ದೂರು
-
ದಿನದ ಸುದ್ದಿ2 days agoಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ | 8 ಕುಲಸಚಿವರು, 10 ಹಣಕಾಸು ಅಧಿಕಾರಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು
-
ದಿನದ ಸುದ್ದಿ2 days agoದಾವಣಗೆರೆ | ತಾತ್ಕಲಿಕ ಉಪ ಪೊಲೀಸ್ ಠಾಣೆಗೆ ಎಸ್ ಪಿ ಉಮಾ ಪ್ರಶಾಂತ್ ಚಾಲನೆ
-
ದಿನದ ಸುದ್ದಿ19 hours agoನರೇಗಾ ಕಾರ್ಮಿಕ ಕೆಲಸದ ಸ್ಥಳದಲ್ಲಿ ನಿಧನ : ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭೇಟಿ
-
ದಿನದ ಸುದ್ದಿ2 days agoದಾವಣಗೆರೆಯಿಂದ ಶ್ರೀಶೈಲಂಗೆ ನೂತನ ಬಸ್ ಮಾರ್ಗಕ್ಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಚಾಲನೆ

