Connect with us

ದಿನದ ಸುದ್ದಿ

ಪ್ರವೀಣ್ ಹತ್ಯೆ ಪ್ರಕರಣ ; ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Published

on

ಸುದ್ದಿದಿನ,ಬೆಂಗಳೂರು‌ : ಸಮಾಜದಲ್ಲಿ ಹಿಂಸೆ, ಕ್ಷೋಭೆ ಉಂಟು ಮಾಡುವಂತಹ ದುಷ್ಕೃತ್ಯವನ್ನು ಎಸಗಿರುವ ದುಷ್ಕರ್ಮಿಗಳನ್ನು ದಮನ ಮಾಡುವವರೆಗೂ ವಿಶ್ರಮಿಸುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಆರ್ ಟಿ ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದರು.
ಮಂಗಳೂರಿನಲ್ಲಿ ನಡೆದ ಪ್ರವೀಣ್ ಅವರ ಹತ್ಯೆ ನಿನ್ನೆ ಸಂಭವಿಸಿದ್ದು ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಲಾಗಿದೆ. ಅಪರಾಧಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ಆದೇಶ ನೀಡಲಾಗಿದೆ. ಕೇರಳ ರಾಜ್ಯದ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿರಲಾಗಿದೆ.

ಮಂಗಳೂರು ಹಾಗೂ ಕಾಸರಗೋಡು ಎಸ್ ಪಿಗಳೊಂದಿಗೆ ಮಾತನಾಡಲಾಗಿದೆ. ಕರ್ನಾಟಕ ಡಿಜಿಪಿ ಹಾಗೂ ಕೇರಳದ ಡಿಜಿಪಿಯವರೊಂದಿಗೆ ಮಾತನಾಡಿದ್ದಾರೆ. ಇಂದು ಕೂಡ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಡಿಜಿಯವರನ್ನು ಕರೆಸಿ ಸಂಪೂರ್ಣ ಮಾಹಿತಿ ಪಡೆಯಲಾಗಿದೆ. ಶೀಘ್ರದಲ್ಲಿಯೇ ಕೊಲೆಗೈದವರನ್ನು ಬಂಧಿಸಿ ಉಗ್ರ ಶಿಕ್ಷೆ ನೀಡಲಾಗುವುದು ಎಂದರು.

ಹಿಂದೆ ನಡೆದ ಮಂಗಳೂರು, ಡಿ.ಜಿ.ಹಳ್ಳಿ, ಶಿವಮೊಗ್ಗದ ಪ್ರಕರಣಗಳಂತೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜನರಿಗೆ ಭರವಸೆ ನೀಡಲಾಗಿದೆ. ಅಲ್ಲದೇ ಘಟನೆಯ ಹಿಂದಿರುವ ವ್ಯಕ್ತಿಗಳು, ಸಂಘಟನೆಗಳು ಯಾರೇ ಇದ್ದರೂ ಅವರನ್ನು ಸದೆಬಡೆಯುವ ಕೆಲಸವನ್ನು ಮಾಡಲಾಗುವುದು. ಜನರು ಆವೇಶಕ್ಕೆ ಒಳಗಾಗದೇ ಶಾಂತಿ ಸುವ್ಯವಸ್ಥೆಯನ್ನು ಕಾಪಾಡಬೇಕೆಂದು ಹಾಗೂ ಈ ಸಂದರ್ಭದಲ್ಲಿ ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡದೇ ತನಿಖೆಗೆ ಎಲ್ಲರೂ ಸಹಕರಿಸಬೇಕೆಂದು ಮುಖ್ಯಮಂತ್ರಿಗಳು ಮನವಿ ಮಾಡಿದರು.

ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಿಕೊಡುವ ಸಂದರ್ಭ ಬಂದರೆ ವಹಿಸಿಕೊಡಲು ಹಿಂಜರಿಯುವುದಿಲ್ಲ ಎಂದು ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ

Olympic Games Paris 2024 | ಇಂದು ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನೆ ; ಭವ್ಯ ಸಮಾರಂಭಕ್ಕೆ ಸೀನ್ ನದಿ ಸಜ್ಜು

Published

on

ಸುದ್ದಿದಿನಡೆಸ್ಕ್:ಪ್ಯಾರಿಸ್ ಒಲಿಂಪಿಕ್ಸ್‌ನ ಉದ್ಘಾಟನಾ ಸಮಾರಂಭ ಇಂದು ನಡೆಯಲಿದೆ. ಸೀನ್ ನದಿಯ ಮೇಲೆ ಇಂದು ಭಾರತೀಯ ಕಾಲಮಾನ ರಾತ್ರಿ 11ಗಂಟೆಗೆ ಉದ್ಘಾಟನಾ ಸಮಾರಂಭ ಜರುಗಲಿದೆ. ಪರೇಡ್‌ನಲ್ಲಿ ಭಾರತದ ಧ್ವಜಧಾರಿಗಳಾದ ಶರತ್ ಕಮಲ್ ಮತ್ತು ಪಿ.ವಿ.ಸಿಂಧು ಭಾರತವನ್ನು ಪ್ರತಿನಿಧಿಸಲಿದ್ದಾರೆ.

ಉದ್ಘಾಟನಾ ಸಮಾರಂಭಕ್ಕೂ ಮುನ್ನ ಕೆಲ ಪಂದ್ಯಗಳಿಗೆ ಚಾಲನೆ ನೀಡಲಾಗಿದೆ. ಅದರಂತೆ ಜುಲೈ 24 ರಿಂದ ಫುಟ್‌ಬಾಲ್ ಮತ್ತು ರಗ್ಬಿ ಪಂದ್ಯಗಳು ಶುರುವಾಗಿದ್ದು, ನಿನ್ನೆ ಬಿಲ್ಲುಗಾರಿಕೆ ಸ್ಪರ್ಧೆ ಆರಂಭವಾಗಿದೆ. ಈ ಸ್ಪರ್ಧೆಯೊಂದಿಗೆ ಭಾರತ ಒಲಿಂಪಿಕ್ಸ್ ಅಭಿಯಾನ ಆರಂಭಿಸುತ್ತಿರುವುದು ವಿಶೇಷವಾಗಿದೆ.

ಬಿಲ್ಲುಗಾರಿಕೆಯ ಶ್ರೇಯಾಂಕದ ಸುತ್ತಿನಲ್ಲಿ ಅಂಕಿತ ಭಕತ್, ಭಜನ್ ಕೌರ್ ಮತ್ತು ದೀಪಿಕಾ ಕುಮಾರಿ ಅವರನ್ನೊಳಗೊಂಡ ಭಾರತೀಯ ಮಹಿಳಾ ತಂಡ, 1 ಸಾವಿರದ 983 ಅಂಕಗಳೊಂದಿಗೆ ನಾಲ್ಕನೇ ಸ್ಥಾನವನ್ನು ಗಳಿಸಿ, ಕ್ವಾರ್ಟರ್ ಫೈನಲ್ಸ್ ಪ್ರವೇಶಿಸಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

JUDGE | ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ ನ್ಯಾಯಾಧೀಶರ ಸಂಖ್ಯೆ ಏರಿಕೆ

Published

on

ಸುದ್ದಿದಿನಡೆಸ್ಕ್:ಕಳೆದ 10 ವರ್ಷಗಳಲ್ಲಿ ಹೈಕೋರ್ಟ್ಗಳ ನ್ಯಾಯಾಧೀಶರ ಸಂಖ್ಯೆ 906 ರಿಂದ 1114 ಕ್ಕೆ ಏರಿದೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳ ನ್ಯಾಯಾಧೀಶರನ್ನು ಭಾರತದ ಸಂವಿಧಾನದ ಅಡಿಯಲ್ಲಿ ನೇಮಕ ಮಾಡಲಾಗಿದೆ ಎಂದು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ರಾಜ್ಯಸಭೆಯಲ್ಲಿ ನಿನ್ನೆ ಲಿಖಿತ ಉತ್ತರ ನೀಡಿದ್ದಾರೆ.

ದೇಶದಲ್ಲಿ ಒಟ್ಟು 15 ಸಾವಿರದ 300 ಮೆಗಾ ವ್ಯಾಟ್, ಸಾಮರ್ಥ್ಯದ 21 ಪರಮಾಣು ರಿಯಾಕ್ಟರ್‌ಗಳು ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದು ಕೇಂದ್ರ ಭೂವಿಜ್ಞಾನ ರಾಜ್ಯ ಸಚಿವ ಡಾ. ಜಿತೇಂದ್ರ ಸಿಂಗ್ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.
ದೇಶದಲ್ಲಿ ಪ್ರಸ್ತುತ ಸ್ಥಾಪಿಸಲಾದ ಪರಮಾಣು ಶಕ್ತಿ ಸಾಮರ್ಥ್ಯವು 8 ಸಾವಿರ 180 ಮೆಗಾವ್ಯಾಟ್ ಆಗಿದ್ದು, 24 ಪರಮಾಣು ಶಕ್ತಿ ರಿಯಾಕ್ಟರ್‌ಗಳನ್ನು ಒಳಗೊಂಡಿದೆ.

ಪ್ರಸ್ತುತ ಸ್ಥಾಪಿಸಲಾದ ಪರಮಾಣು ವಿದ್ಯುತ್ ಸಾಮರ್ಥ್ಯವನ್ನು 2031-32ರ ವೇಳೆಗೆ 22 ಸಾವಿರದ 480 ಮೆಗಾವ್ಯಾಟ್‌ಗೆ ಹೆಚ್ಚಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ
ಪರಮಾಣು ವಿದ್ಯುತ್ ಸ್ಥಾವರಗಳಿಂದ ವಾರ್ಷಿಕ ವಿದ್ಯುತ್ ಉತ್ಪಾದನೆಯು 2013-14 ರಲ್ಲಿ 34 ಸಾವಿರದ 228 ಮಿಲಿಯನ್ ಯುನಿಟ್‌ಗಳಿಂದ 2023-24 ರಲ್ಲಿ 47 ಸಾವಿರದ 971 ಮಿಲಿಯನ್ ಯುನಿಟ್‌ಗಳಿಗೆ ಏರಿಕೆಯಾಗಿದೆ ಎಂದು ಡಾ. ಜಿತೇಂದ್ರ ಸಿಂಗ್ ಹೇಳಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

KSOU | ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನಡೆಸ್ಕ್:2024-25 ನೇ ಶೈಕ್ಷಣಿಕ ಸಾಲಿನ ಜುಲೈ ಆವೃತ್ತಿಗೆ ಯುಜಿಸಿ ಅನುಮೋದಿತ ಶಿಕ್ಷಣ ಕ್ರಮಗಳ ಪ್ರವೇಶಾತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೈಬ್ ಸೈಟ್ www.ksoumysuru.ac.in ನಲ್ಲಿ ಅರ್ಜಿ ಸಲ್ಲಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending