ದಿನದ ಸುದ್ದಿ

ಪ್ರಿ ವೆಡ್ಡಿಂಗ್ ಫೋಟೋಶೂಟ್ ವೇಳೆ ತೆಪ್ಪ ಮುಳುಗಿ ನವಜೋಡಿ ಸಾವು

Published

on

ಸುದ್ದಿದಿನ,ಮೈಸೂರು: ಪ್ರಿ ವೆಡ್ಡಿಂಗ್ ಫೋಟೋಶೂಟ್ ಮಾಡಿಸಲು ಹೋದ ವಧು-ವರ ತೆಪ್ಪ ಮುಳಗಿ ಸಾವನ್ನಪ್ಪಿರುವ ದುರ್ಘಟನೆ ಮೈಸೂರಿನ ತಲಕಾಡಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ತಿ.ನರಸೀಪುರ ತಾಲೂಕಿನ ಮುಡುಕುತೊರೆ ಬಳಿ ಅಂತದ್ದೇ ಒಂದು ಘಟನೆ ನಡೆದಿದ್ದು, ಫೋಟೋಶೂಟ್​ ಸಂದರ್ಭದಲ್ಲಿ ತೆಪ್ಪ ಮಗುಚಿ ಚಂದ್ರು (28), ಶಶಿಕಲಾ (20) ಎನ್ನುವವರು ಅಸುನೀಗಿದ್ದಾರೆ. ಇಬ್ಬರು ಕ್ಯಾತಮಾರನಹಳ್ಳಿ ನಿವಾಸಿಗಳು ಎನ್ನಲಾಗಿದೆ.

ಆಯತಪ್ಪಿ ನೀರಿಗೆ ಬಿದ್ದ ಶಶಿಕಲಾರನ್ನು ಉಳಿಸಲು ಹೋದ ಚಂದ್ರು ಕೂಡ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದು, ಮೃತದೇಹಗಳಿಗಾಗಿ ಶೋಧ ಕಾರ್ಯಾಚರಣೆ ನಡೆದಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version