ದಿನದ ಸುದ್ದಿ
ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಕ್ರಯೋಜನಿಕ್ ಇಂಜಿನ್ ತಯಾರಿಕಾ ಘಟಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2022/07/draupadi-murmu_elected_suddidina.jpg&description=ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಕ್ರಯೋಜನಿಕ್ ಇಂಜಿನ್ ತಯಾರಿಕಾ ಘಟಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2022/07/draupadi-murmu_elected_suddidina.jpg&description=ಬೆಂಗಳೂರಿನಲ್ಲಿ ಸ್ವದೇಶಿ ನಿರ್ಮಿತ ಕ್ರಯೋಜನಿಕ್ ಇಂಜಿನ್ ತಯಾರಿಕಾ ಘಟಕಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಚಾಲನೆ', 'pinterestShare', 'width=750,height=350'); return false;" title="Pin This Post">
ಸುದ್ದಿದಿನ ಡೆಸ್ಕ್ : ಮೂರು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಂಗಳೂರಿನಲ್ಲಿ ಇಂದು ಹಿಂದೂಸ್ತಾನ್ ಏರೋನಾಟಿಕಲ್ ಲಿಮಿಟೆಡ್-ಎಚ್.ಎ.ಎಲ್. ದೇಶೀಯವಾಗಿ ನಿರ್ಮಿಸುತ್ತಿರುವ ಕ್ರಯೋಜನಿಕ್ ಇಂಜಿನ್ ತಯಾರಿಕಾ ಘಟಕವನ್ನು ಲೋಕಾರ್ಪಣೆ ಮಾಡಲಿದ್ದಾರೆ.
ಈ ವೇಳೆ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರು, ರಕ್ಷಣಾ ಇಲಾಖೆಯ ಮುಖ್ಯಸ್ಥರು ಉಪಸ್ಥಿತರಿರುತ್ತಾರೆ.
ಅಪರಾಹ್ನ ಬೆಂಗಳೂರಿನ ಸೇಂಟ್ ಜೋಸೆಪ್ ವಿಶ್ವವಿದ್ಯಾಲಯದ ಪ್ರಧಾನ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ.
ನಂತರ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ರಾಜ್ಯ ಸರ್ಕಾರ ಆಯೋಜಿಸಿರುವ ನಾಗರಿಕ ಪೌರ ಸನ್ಮಾನ ಸಮಾರಂಭದಲ್ಲಿ ರಾಷ್ಟ್ರಪತಿ ಅವರು ಸನ್ಮಾನ ಸ್ವೀಕರಿಸುವ ಕಾರ್ಯಕ್ರಮವಿದೆ. ರಾಷ್ಟ್ರಪತಿ ಭೇಟಿ ಹಿನ್ನೆಲೆಯಲ್ಲಿ ರಾಜಭವನದ ಸುತ್ತಮುತ್ತಲ ಪ್ರದೇಶಗಳಲ್ಲಿ ವಾಹನ ಸಂಚಾರಕ್ಕೆ ಕೆಲವು ನಿರ್ಬಂಧ ವಿಧಿಸಲಾಗಿದೆ. ಹಾಗೆಯೇ, ಸುತ್ತಮುತ್ತಲೂ ವ್ಯಾಪಕ ಬಂದೋಬಸ್ತ್ ಏರ್ಪಡಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿಯು ಪ್ರಾರಂಭವಾಗಿದೆ.
ಈ ಶಾಲೆಯಲ್ಲಿ ಅಂಧ ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣದ ಜೊತೆಗೆ ವಸತಿಯುತ ಶಾಲೆಯಾಗಿರುತ್ತದೆ. ಸಾರ್ವಜನಿಕ ಶಿಕ್ಷಣ ಇಲಾಖೆಯವರು ನಿಗದಿಪಡಿಸಿರುವ ಸಾಮಾನ್ಯ ಮಕ್ಕಳಿಗೆ ನೀಡುತ್ತಿರುವ ಶಿಕ್ಷಣವನ್ನೇ ಇಲ್ಲಿಯೂ ಭೋದಿಸುವುದರ ಜೊತೆಗೆ ಬೈಲ್ ಲಿಪಿಯನ್ನು ಅಳವಡಿಸಿಲಾಗಿದೆ.
ಶೈಕ್ಷಣಿಕ ಅವಧಿಯಲ್ಲಿ ಅಂಧ ಮಕ್ಕಳಿಗೆ ಪಠ್ಯೇತರ ಚಟುವಟಿಕೆಗಳಾದ Daily Living Skills(DLS), ಯೋಗ, ದೈಹಿಕ ಶಿಕ್ಷಣ, ಸಂಗೀತ, ಡ್ಯಾನ್ಸ್ ಚಲನ-ವಲನ ತರಬೇತಿ, ಕಂಪ್ಯೂಟರ್ ತರಬೇತಿ, ಒಳಾಂಗಣ ಹಾಗೂ ಹೊರಾಂಗಣ ಆಟಗಳು, ಬ್ರೈಲ್ ಪುಸ್ತಕಗಳು, ಶಾಲಾ ಸಮವಸ್ತ್ರ, ಕಲಿಕಾ ಉಪಕರಣಗಳು, ವೈದ್ಯಕೀಯ ತಪಾಸಣೆಗಳು, ಕರಕುಶಲ ಕಾರ್ಯ ಚಟುವಟಿಕೆಗಳನ್ನು ಕಳಿಸಲಾಗುವುದು.
ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ದೃಷ್ಟಿ ವಿಕಲಚೇತನ ಮಕ್ಕಳು ಕಂಡು ಬಂದಲ್ಲಿ ಅವರ ಪೋಷಕರಿಗೆ ನಮ್ಮ ಶಾಲೆಯ ಬಗ್ಗೆ ಮಾಹಿತಿ ನೀಡಿ ಶೇ.40 ಕ್ಕಿಂತ ಹೆಚ್ಚಿನ ದೃಷ್ಟಿದೋಷ ಹೊಂದಿರುವ ಮಕ್ಕಳು ನಮ್ಮ ಸರ್ಕಾರಿ ಶಾಲೆಗೆ ದಾಖಲಾಗುವಂತೆ ಮಾಡಿ ವಿಕಲಚೇತನ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗೆ ಸಹಕರಿಸುವಂತೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಶಾಲೆಯ ಮುಖ್ಯೋಪಾಧ್ಯಾಯರು, ಅಧೀಕ್ಷರಾದ ಗಂಗಾಧರಪ್ಪ.ಹೆಚ್.ಎನ್ ಮೊ.ಸಂ: 9984534883, 08182-250442 ಸಂಪರ್ಕಿಸಬಹುದೆAದು ಇಲಾಖೆಯ ಅಧೀಕ್ಷಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ
ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಎಪ್ರಿಲ್ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಮೆರವಣಿಗೆ ಮಾರ್ಗ
ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್‌ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

