ದಿನದ ಸುದ್ದಿ
18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಕೋವಿಡ್ ಲಸಿಕೆ : ಸಚಿವ ಡಾ. ಕೆ.ಸುಧಾಕರ್
ಸುದ್ದಿದಿನ ಬೆಂಗಳೂರು : ಕೋವಿಡ್ ವಿರುದ್ಧದ ಹೋರಾಟಕ್ಕೆ ಇನ್ನಷ್ಟು ವೇಗ ನೀಡಲು ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, 18 ವರ್ಷ ಮೇಲ್ಪಟ್ಟವರಿಗೆ ಮುನ್ನೆಚ್ಚರಿಕಾ ಡೋಸ್ ನೀಡುತ್ತಿರುವುದರಿಂದ ಸೋಂಕಿನ ವಿರುದ್ಧದ ಹೋರಾಟ ಮತ್ತಷ್ಟು ಬಲಗೊಂಡಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆ ಸಚಿವ ಡಾಕ್ಟರ್ ಕೆ.ಸುಧಾಕರ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಇಂದಿನಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯಬಹುದಾಗಿದ್ದು, 18 ವರ್ಷ ಮೇಲ್ಪಟ್ಟವರು ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣವಾಗಿದ್ದಲ್ಲಿ ಈ ಡೋಸ್ ಪಡೆಯಬಹುದಾಗಿದೆ ಎಂದು ತಿಳಿಸಿದರು.
ದೇಶದಲ್ಲಿ ಈವರೆಗೆ 185 ಕೋಟಿ ಹಾಗೂ ರಾಜ್ಯದಲ್ಲಿ ಈವರೆಗೆ 10ಕೋಟಿ 47ಲಕ್ಷ ಡೋಸ್ ಲಸಿಕೆ ನೀಡಲಾಗಿದೆ. ಜೊತೆಗೆ ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 60ವರ್ಷ ಮೇಲ್ಪಟ್ಟ ನಾಗರಿಕರಿಗೆ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದೆ ಎಂದು ಸಚಿವರು ವಿವರಿಸಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243