ದಿನದ ಸುದ್ದಿ

ಪ್ರಧಾನಿ ಮೋದಿ ಅವರಿಗೆ ಪ್ರಥಮ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ

Published

on

ಸುದ್ದಿದಿನ ಡೆಸ್ಕ್ : ಮುಂಬೈನಲ್ಲಿ ಇಂದು ಸಂಜೆ ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಪ್ರಥಮ ಲತಾ ದೀನನಾಥ್ ಮಂಗೇಶ್ಕರ್ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತದೆ.

ಈ ಸಾಲಿನ ಫೆಬ್ರವರಿ ತಿಂಗಳಿನಲ್ಲಿ ನಿಧನರಾದ ಖ್ಯಾತ ಹಿನ್ನೆಲೆ ಗಾಯಕಿ, ಭಾರತರತ್ನ ಪುರಸ್ಕೃತ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಸ್ಥಾಪಿಸಲಾಗಿದೆ. ರಾಷ್ಟ್ರಕ್ಕೆ ಅನುಕರಣಿಯ ಕೊಡುಗೆ ನೀಡಿರುವ ವ್ಯಕ್ತಿಗೆ ವಾರ್ಷಿಕವಾಗಿ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ.

ಮಾಸ್ಟರ್ ದೀನನಾಥ್ ಮಂಗೇಶ್ಕರ್ ಸ್ಮೃತಿ ಪ್ರತಿಷ್ಠಾನವು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಈ ಪ್ರಶಸ್ತಿಯನ್ನು ಘೋಷಿಸಿದೆ. ಭಾರತವನ್ನು ಜಾಗತಿಕ ನಾಯಕತ್ವದ ಹಾದಿಯಲ್ಲಿ ಕೊಂಡೊಯ್ಯದಿರುವ ನರೇಂದ್ರ ಮೋದಿ ಅವರು ಶ್ರೇಷ್ಠ ನಾಯಕರಲ್ಲಿ ಒಬ್ಬರೆನಿಸಿದ್ದು, ಸ್ಫೂರ್ತಿಯಾಗಿದ್ದಾರೆ ಎಂದು ಪ್ರತಿಷ್ಠಾನವು ಹೇಳಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version