Connect with us

ದಿನದ ಸುದ್ದಿ

ಪ್ರಧಾನಿ ಮೋದಿ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ದೇಶಗಳಿಗೆ ಅಧಿಕೃತ ಪ್ರವಾಸ : ದ್ವಿಪಕ್ಷೀಯ ಮಾತುಕತೆಗಳಲ್ಲಿ ಭಾಗಿ

Published

on

ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆಯಿಂದ ಇದೇ 4ರವರೆಗೆ ಜರ್ಮನಿ, ಡೆನ್ಮಾರ್ಕ್ ಮತ್ತು ಫ್ರಾನ್ಸ್ ಈ ಮೂರು ದೇಶಗಳಿಗೆ ಅಧಿಕೃತ ಪ್ರವಾಸ ಕೈಗೊಳ್ಳಲಿದ್ದಾರೆ.

ಈ ವರ್ಷ ಪ್ರಧಾನಮಂತ್ರಿಯವರ ಮೊದಲ ವಿದೇಶ ಪ್ರವಾಸ ಇದಾಗಿದೆ. ಪ್ರವಾಸದ ಮೊದಲ ಚರಣದಲ್ಲಿ ಬರ್ಲಿನ್‌ಗೆ ಭೇಟಿ ನೀಡಲಿರುವ ನರೇಂದ್ರ ಮೋದಿ ಅವರು ಜರ್ಮನ್ ಚಾನ್ಸ್‌ಲರ್ ಓಲಾಫ್ ಶೋಲ್ಜ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ.

ಅಲ್ಲದೆ ಉಭಯ ನಾಯಕರು 6ನೇ ಆವೃತ್ತಿಯ ಭಾರತ-ಜರ್ಮನಿ ಅಂತರ್ ಸರ್ಕಾರಿ ಸಮಾಲೋಚನೆ ಸಭೆಯ ಜಂಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಎರಡು ದೇಶಗಳ ಹಲವು ಸಚಿವರು ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ನರೇಂದ್ರ ಮೋದಿ ಮತ್ತು ಓಲಾಫ್ ಶೋಲ್ಜ್ ಅವರು ಉದ್ದಿಮೆದಾರರ ಕಾರ್ಯಕ್ರಮವನ್ನು ಉದ್ದೇಶಿಸಿಯೂ ಜಂಟಿ ಭಾಷಣ ಮಾಡಲಿದ್ದಾರೆ. ಜರ್ಮನಿ ಪ್ರವಾಸದ ಬಳಿಕ 2ನೇ ಚರಣದಲ್ಲಿ ಡೆನ್ಮಾರ್ಕ್‌ಗೆ ಭೇಟಿ ನೀಡಲಿರುವ ನರೇಂದ್ರ ಮೋದಿ ಅಲ್ಲಿನ ಪ್ರಧಾನಮಂತ್ರಿ ಮೆಟ್ಟೆ ಫ್ರೆಡ್‌ರಿಕ್ಸನ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ.

ಡೆನ್ಮಾರ್ಕ್ ಅತಿಥ್ಯದಲ್ಲಿ ನಡೆಯಲಿರುವ 2ನೇ ಇಂಡಿಯಾ-ನಾರ್ಡಿಕ್ ಶೃಂಗಸಭೆಯಲ್ಲೂ ಭಾಗವಹಿಸಲಿದ್ದಾರೆ. ಈ ಭೇಟಿಯ ವೇಳೆ ಪ್ರಧಾನಮಂತ್ರಿಯವರು ಭಾರತ-ಡೆನ್ಮಾರ್ಕ್ ಉದ್ದಿಮೆದಾರರ ವೇದಿಕೆಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಲ್ಲದೆ, ಆ ದೇಶದಲ್ಲಿರುವ ಭಾರತೀಯ ಸಮುದಾಯದ ಸದಸ್ಯರನ್ನು ಉದ್ದೇಶಿಸಿಯೂ ಭಾಷಣ ಮಾಡಲಿದ್ದಾರೆ.

ಡೆನ್ಮಾರ್ಕ್ ದೇಶದ ಭೇಟಿಯಿಂದ ಉಭಯ ದೇಶಗಳ ನಡುವಿನ ಪ್ರಗತಿಗೆ ಉತ್ತಮ ಅವಕಾಶ ದೊರೆತಂತಾಗಿದೆ. ಪ್ರವಾಸದ ಕೊನೆಯ ಚರಣದಲ್ಲಿ ನರೇಂದ್ರ ಮೋದಿ ಅವರು ಫ್ರಾನ್ಸ್‌ಗೆ ಭೇಟಿ ನೀಡಲಿದ್ದು, ಅಲ್ಲಿನ ಅಧ್ಯಕ್ಷ ಇಮಾನ್ಯೂಲ್ ಮ್ಯಾಕ್ರೋಲ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ.

ಭಾರತ ಮತ್ತು ಫ್ರಾನ್ಸ್ ಈ ವರ್ಷ ರಾಜತಾಂತ್ರಿಕ ಬಾಂದವ್ಯದ 75ನೇ ವರ್ಷಾಚರಣೆಯ ಸಂಭ್ರಮದಲ್ಲಿವೆ. ಈ ಸಂದರ್ಭದಲ್ಲಿ ಉಭಯ ದೇಶಗಳ ಪ್ರಧಾನಮಂತ್ರಿಗಳು ಮಾತುಕತೆ ನಡೆಸುವ ಮೂಲಕ ಕಾರ್ಯತಂತ್ರ ಪಾಲುದಾರಿಕೆಯ ಮಹತ್ವಾಕಾಂಕ್ಷಿ ಅಜೆಂಡಾಗೆ ಉತ್ತೇಜನ ನೀಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಸರ್ಕಾರ ನಿರ್ಧಾರ

Published

on

ಸುದ್ದಿದಿನಡೆಸ್ಕ್:ಗ್ರಾಮೀಣ ಪ್ರದೇಶದಲ್ಲಿ 500 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ಹಾಗೂ ನಗರ ಪ್ರದೇಶಗಳಲ್ಲಿ 800 ಪಡಿತರ ಚೀಟಿಗಳಿಗೆ ಒಂದು ಪಡಿತರ ಅಂಗಡಿ ತೆರೆಯಲು ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದು ಆಹಾರ ನಾಗರಿಕ ಸರಬರಾಜು ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಬೆಂಗಳೂರು ಗ್ರಾಮಾಂತರ ಜಿಲ್ಲೆಯಾದ್ಯಂತ ಮುಂದಿನ ಮೂರು ತಿಂಗಳಲ್ಲಿ 10 ಸಾವಿರ ನಿವೇಶನ ನೀಡುವ ಗುರಿ ಹೊಂದಲಾಗಿದೆ. ಈಗಾಗಲೇ 2 ಸಾವಿರದ 500 ಮನೆಗಳು ಮಂಜೂರಾಗಿದ್ದು, ಮುಂದಿನ ದಿನಗಳಲ್ಲಿ ಇದನ್ನು ಕೂಡ ಅರ್ಹ ಫಲಾನುಭವಿಗಳಿಗೆ ಹಂಚಲಾಗುತ್ತದೆ ಎಂದು ಮಾಹಿತಿ ನೀಡಿದರು.

 

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲ ಸೌಲಭ್ಯಗಳ ಕೊರತೆ : ಕರವೇ ಮನವಿ

Published

on

ಸುದ್ದಿದಿನ,ದಾವಣಗೆರೆ:ಜಿಲ್ಲೆಯ ಎಲ್ಲಾ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಗಳನ್ನು ಸರಿಪಡಿಸಲು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾದ ಗಿತ್ತೆ ಮಾಧವ್ ವಿಠ್ಠಲ್ ರಾವ್ ರವರಿಗೆ ಕರವೇ(ಪ್ರವೀಣ ಶಟ್ಟಿ ಬಣ) ಮನವಿ ಸಲ್ಲಿಸಿತು.

ಜಲ್ಲಾಧ್ಯಕ್ಷ ಜಮ್ನಳ್ಳಿ ನಾಗರಾಜ್ ಮಾತನಾಡಿ, ದಾವಣಗೆರೆ ಜಿಲ್ಲೆಯ ಮೊರಾರ್ಜಿ ವಸತಿ ಶಾಲೆಗಳಲ್ಲಿ ಬಡ ಕುಟುಂಬಗಳ ಮಕ್ಕಳೇ ಹೆಚ್ಚಾಗಿ ವಿದ್ಯಾಭ್ಯಾಸ ಮಾಡುತ್ತಿದ್ದು, ಸದರಿ ಮಕ್ಕಳಿಗೆ ವಸತಿ ಶಾಲೆಯಲ್ಲಿ ಸರಿಯಾದ ಮೂಲಭೂತ ಸೌಲಭ್ಯ ಕಲ್ಪಿಸದೇ ಇರುವುದರಿಂದ ಮಕ್ಕಳು ತುಂಬಾ ತೊಂದರೆ ಅನುಭವಿಸುತ್ತಿದ್ದಾರೆ.

ಮಕ್ಕಳಿಗೆ ಸ್ನಾನಕ್ಕೆ ಬಿಸಿ ನೀರು ಇರುವುದಿಲ್ಲ. ಅಲ್ಲದೇ ಮಕ್ಕಳಿಗೆ ಸರಿಯಾಗಿ ಊಟದ ವ್ಯವಸ್ಥೆ ಸಮರ್ಪಕವಾಗಿರುವುದಿಲ್ಲ, ಶೌಚಾಲಯ ಸೌಕರ್ಯಗಳಿರುವುದಿಲ್ಲ, ಮಕ್ಕಳ ಮೇಲ್ವಿಚಾರಣೆಗೆ ವಾರ್ಡನ್‌ಗಳು ರಾತ್ರಿ ಸಮಯದಲ್ಲಿ ಸ್ಥಳದಲ್ಲಿರುವುದಿಲ್ಲ, ಅಲ್ಲದೇ ವಿದ್ಯುತ್ ತೊಂದರೆಯಾದರೆ ಮಕ್ಕಳಿಗೆ ಯು.ಪಿ.ಎಸ್. ಸೌಲಭ್ಯವಿಲ್ಲದೇ ಮಕ್ಕಳ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಮನವಿ ಸ್ವೀಕರಿಸಿದ ಸಿ.ಇ.ಒ ಮಾತನಾಡಿ, ಸಧ್ಯದಲ್ಲೇ ಅಧಿಕಾರಿಗಳ ಸಭೆ ಕರೆಯಲಾಗಿದ್ದು ಈ ವಿಷಯದ ಬಗ್ಗೆ ಚರ್ಚೆ ನಡಿಸಿ ಸೂಕ್ತ ತೀರ್ಮಾನ ಕೈಗೂಳ್ಳಲಾಗುವುದು ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಜಮ್ನಳ್ಳಿ ನಾಗರಾಜ್, ಜಿಲ್ಲಾ ಕಾರ್ಯಧ್ಯಕ್ಷ ಸೈಯದ್ ನಜೀರ್, ನಾಗರಾಜ್ ಆದಾಪುರ್, ಸಂಘಟನಾ ಕಾರ್ಯದರ್ಶಿ ಸಂತೋಷ್ ಕುಮಾರ್, ಮಹಿಳಾ ಜಿಲ್ಲಾಧ್ಯಕ್ಷೆ ಗೀತಾ ಎಂ, ನಗರ ಘಟಕ ಅಧ್ಯಕ್ಷ ಅನೂಪ್ ಇಜಾರಿ, ಮಹಿಳಾ ಗೌರವಾಧ್ಯಕ್ಷೆ ವನಜ ಕರಿಯಪ್ಪ, ಉತ್ತರ ವಲಯದ ಯುವ ಘಟಕದ ಅಧ್ಯಕ್ಷ ಶಿವಕುಮಾರ ಬಿ ಬಿ, ನಾಗರಾಜ ಆಥಪುರ್, ಶಬ್ರಿನ್ ತಾಜ್, ಬಸವರಾಜ ಎಸ್, ಬಸವರಾಜ್ ಪಿ, ಮಂಜುಳಾ ಆರ್, ನಾಗರಾಜ್ ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದತ್ತಾಂಶ ನಿರ್ವಾಹಕ ಗ್ರೇಡ್ ಎ ಪರೀಕ್ಷೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಭಾರತ ಸರ್ಕಾರದ ಸಿಬ್ಬಂದಿ ನೇಮಕಾತಿ ಆಯೋಗವು ದತ್ತಾಂಶ ನಿರ್ವಾಹಕ ಗ್ರೇಡ್ ‘ಎ’ ಪರೀಕ್ಷೆಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ವೆಬೆಸೈಟ್ https://ssc.nic.in ಅಥವಾ https://ssckkr.kar.nic.in ಮೂಲಕ ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 18 ಕೊನೆಯದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ – 080-2527342, 25502520 ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಲು ಉದ್ಯೋಗಾಧಿಕಾರಿ ರವೀಂದ್ರ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending