ದಿನದ ಸುದ್ದಿ

ಯಶಸ್ವಿ ಜಪಾನ್ ಪ್ರವಾಸದ ಬಳಿಕ ಭಾರತಕ್ಕೆ ಹಿಂದಿರುಗಿದ ಪ್ರಧಾನಮಂತ್ರಿ ನರೇಂದ್ರ ಮೋದಿ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ ಡೆಸ್ಕ್ : ಪ್ರಧಾನಿ ನರೇಂದ್ರ ಮೋದಿ ತಮ್ಮ ಎರಡು ದಿನಗಳ ಜಪಾನ್ ಭೇಟಿಯ ಭಾಗವಾಗಿ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸಿದ ನಂತರ ಕಳೆದ ರಾತ್ರಿ ನವದೆಹಲಿಗೆ ಮರಳಿದ್ದಾರೆ.

ಕ್ವಾಡ್ ಶೃಂಗಸಭೆಯಲ್ಲಿ ಅಮೆರಿಕ ಅಧ್ಯಕ್ಷ ಜೋ ಬೈಡನ್ ಮತ್ತು ಜಪಾನ್ ಮತ್ತು ಆಸ್ಟ್ರೇಲಿಯಾದ ಪ್ರಧಾನಮಂತ್ರಿಗಳು ಭಾಗವಹಿಸಿದ್ದರು.

ಶೃಂಗಸಭೆಯಲ್ಲಿ, ಉಚಿತ, ಮುಕ್ತ ಮತ್ತು ಎಲ್ಲರನ್ನೂ ಒಳಗೊಳ್ಳುವ ಇಂಡೋ-ಪೆಸಿಫಿಕ್ ಗೆ ತಮ್ಮ ಹಂಚಿಕೆಯ ಬದ್ಧತೆ ಮತ್ತು ಸಾರ್ವಭೌಮತ್ವ, ಪ್ರಾದೇಶಿಕ ಸಮಗ್ರತೆ ಮತ್ತು ವಿವಾದಗಳ ಶಾಂತಿಯುತ ಪರಿಹಾರದ ತತ್ವಗಳನ್ನು ಎತ್ತಿಹಿಡಿಯುವ ಮಹತ್ವವನ್ನು ಎಲ್ಲಾ ನಾಯಕರು ಪುನರುಚ್ಚರಿಸಿದರು.

ಇಂಡೋ-ಪೆಸಿಫಿಕ್‌ನಲ್ಲಿನ ಬೆಳವಣಿಗೆಗಳು ಮತ್ತು ಯೂರೋಪಿನಲ್ಲಿನ ಸಂಘರ್ಷದ ಬಗ್ಗೆ ಅವರು ದೃಷ್ಟಿಕೋನಗಳನ್ನು ವಿನಿಮಯ ಮಾಡಿಕೊಂಡರು. ಕ್ವಾಡ್ ಶೃಂಗಸಭೆಯ ನೇಪಥ್ಯದಲ್ಲಿ, ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಜೋ ಬೈಡೆನ್ ಮತ್ತು ಆಸ್ಟ್ರೇಲಿಯಾದ ನೂತನ ಪ್ರಧಾನಿ ಆಂಥೋನಿ ಅಲ್ಬನೀಸ್ ಮತ್ತು ಜಪಾನಿನ ಪ್ರಧಾನಿ ಫುಮಿಯೊ ಕಿಶಿಡಾ ಅವರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸಿದರು.

ಜಪಾನ್‌ಗೆ ಭೇಟಿ ನೀಡಿದ ಮೊದಲ ದಿನವಾದ ಸೋಮವಾರ, ಪ್ರಧಾನಿ ನರೇಂದ್ರ ಮೋದಿ ಅವರು, ಸರಣಿ ಕಾರ್ಯಕ್ರಮಗಳನ್ನು ನಡೆಸಿದರು. ಸಮೃದ್ಧಿಗಾಗಿ ಇಂಡೋ-ಪೆಸಿಫಿಕ್ ಆರ್ಥಿಕ ಚೌಕಟ್ಟು ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಿದ್ದರು ಮತ್ತು ಟೋಕಿಯೊದಲ್ಲಿ ನಡೆದ ವ್ಯಾಪಾರ ದುಂಡುಮೇಜಿನ ಸಭೆಯ ಅಧ್ಯಕ್ಷತೆ ವಹಿಸಿದ್ದರು. ಇದಲ್ಲದೆ, ಪ್ರಧಾನಿ, ಭಾರತೀಯ ಸಮುದಾಯದ ಸದಸ್ಯರೊಂದಿಗೆ ಸಂವಾದ ನಡೆಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version