ರಾಜಕೀಯ
ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರದಿಂದ ಮೂರು ದಿನಗಳ ಕಾಲ ಗುಜರಾತ್ ಪ್ರವಾಸ
ಸುದ್ದಿದಿನ ಡೆಸ್ಕ್ : ಪ್ರಧಾನಮಂತ್ರಿ ನರೇಂದ್ರ ಮೋದಿ ಸೋಮವಾರದಿಂದ ಮೂರು ದಿನಗಳ ಕಾಲ ಗುಜರಾತ್ ಪ್ರವಾಸ ಕೈಗೊಳ್ಳಲಿದ್ದಾರೆ. ಸೋಮವಾರದಂದು ಗಾಂಧಿನಗರದ ಕಮ್ಯಾಂಡ್ ಅಂಡ್ ಕಂಟ್ರೋಲ್ ಸೆಂಟರ್ ಫಾರ್ ಸ್ಕೂಲ್ಸ್ಗೆ ಭೇಟಿ ನೀಡಲಿದ್ದಾರೆ.
ಈ ಕೇಂದ್ರ ಪ್ರತಿ ವರ್ಷ 500 ಕೋಟಿ ದತ್ತಾಂಶವನ್ನು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಇದನ್ನು ಅರ್ಥಪೂರ್ಣವಾಗಿ ವಿಶ್ಲೇಷಿಸಿ ಕೃತಕ ಬುದ್ಧಿಮತ್ತೆ ಹಾಗೂ ಮಷಿನ್ ಲರ್ನಿಂಗ್ ಕಲಿಕೆಗೆ ಬಳಕೆ ಮಾಡಿಕೊಂಡು ವಿದ್ಯಾರ್ಥಿಗಳ ಒಟ್ಟಾರೆ ಕಲಿಕೆಗೆ ಅನುಕೂಲ ಮಾಡಿಕೊಡಲಾಗುತ್ತಿದೆ.
ಮಂಗಳವಾರದಂದು ಪ್ರಧಾನಮಂತ್ರಿ ಅವರು ಬನಸ್ಕಾಂತದ ದಿಯೋದರ್ನ ಬನಾಸ್ ಡೈರಿ ಸಂಕುಲ್ ಅಭಿವೃದ್ಧಿ ಕಾರ್ಯಕ್ರಮಕ್ಕೆ ಶಿಲಾನ್ಯಾಸ ನೆರವೇರಿಸುವ ಜೊತೆಗೆ ವಿವಿಧ ಯೋಜನೆಗಳನ್ನು ರಾಷ್ಟ್ರಕ್ಕೆ ಸಮರ್ಪಿಸಲಿದ್ದಾರೆ.
ಜಾಮ್ನಗರದಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಸಹಯೋಗದಲ್ಲಿ ನಿರ್ಮಿಸುತ್ತಿರುವ ಗ್ಲೋಬಲ್ ಸೆಂಟರ್ ಫಾರ್ ಟ್ರೆಡಿಷನಲ್ ಮೆಡಿಸನ್ಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಬುಧವಾರದಂದು ಗಾಂಧಿನಗರದಲ್ಲಿ ಆಯೋಜಿಸಿರುವ ಆಯುಷ್ ವಲಯದ ಜಾಗತಿಕ ಹೂಡಿಕೆ ಮತ್ತು ನಾವಿನ್ಯತೆಯ ಶೃಂಗಸಭೆಯನ್ನು ಉದ್ಘಾಟಿಸಲಿದ್ದಾರೆ. ಯೋಗಕ್ಷೇಮ ವಲಯದಲ್ಲಿ ನಾವಿನ್ಯತೆ, ಸಂಶೋಧನೆ, ನವೋದ್ಯಮ ಪರಿಸರ ವ್ಯವಸ್ಥೆಯನ್ನು ರೂಪಿಸುವ ಉದ್ದೇಶದಿಂದ ಈ ಶೃಂಗಸಭೆಗೆ ಆಯೋಜಿಸಲಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243