ದಿನದ ಸುದ್ದಿ
ರಾಷ್ಟ್ರೀಯ ಶಿಕ್ಷಣ ನೀತಿಯಡಿ ನೈತಿಕ ಮೌಲ್ಯಗಳ ಕಲಿಕೆಗೆ ಆದ್ಯತೆ : ಡಾ ಸಿ.ಎನ್. ಅಶ್ವತ್ಥ ನಾರಾಯಣ
ಸುದ್ದಿದಿನ ಡೆಸ್ಕ್ : ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿ (NEP) ನೈತಿಕ ಮೌಲ್ಯಗಳ ಕಲಿಕೆಗೆ ಆದ್ಯತೆ ನೀಡಲಾಗಿದೆ. ಇದಕ್ಕೆ ಸಾಧು ಸಂತರ ಮನಪೂರ್ವಕ ಬೆಂಬಲವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ. ( C.S. Ashwath Narayana) ಹೇಳಿದ್ದಾರೆ.
ಬೆಂಗಳೂರಿನಲ್ಲಿಂದು ಏರ್ಪಡಿಸಿದ್ದ ಯದುಗಿರಿ ಯತಿರಾಜ ಮಠದ ಶ್ರೀಗಳಾದ ಯದುಗಿರಿ ಯತಿರಾಜ ನಾರಾಯಣ ಜೀಯರ್ ಸ್ವಾಮೀಜಿ ಅವರಿಗೆ ತುಮಕೂರು ವಿಶ್ವ ವಿದ್ಯಾಲಯದ ( Tumakuru university) ಗೌರವ ಡಾಕ್ಟರೇಟ್ ಪದವಿ ಪ್ರದಾನ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಇದನ್ನೂ ಓದಿ | ವಿದ್ಯುತ್ ಕ್ಷೇತ್ರದಲ್ಲಿ ಹಲವು ಸುಧಾರಣೆಗಳಿಗೆ ನಾಂದಿ : ಪ್ರಧಾನಮಂತ್ರಿ ನರೇಂದ್ರ ಮೋದಿ
ಸ್ವಾಮೀಜಿಗಳು ಸರ್ವ ಸಮಾನತೆ ಮತ್ತು ನೈತಿಕ ಜಾಗೃತಿಯನ್ನು ಪ್ರತಿಷ್ಠಾಪಿಸುತ್ತಿದ್ದಾರೆ. ಇದರಿಂದಾಗಿ ಶ್ರೀಗಳ ನಡೆ ನುಡಿಗಳಿಗೆ ಸಾಮಾಜಿಕ ಆಯಾಮ ಬಂದಿದೆ ಎಂದು ಅವರು ಅಭಿಪ್ರಾಯಪಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243,