ದಿನದ ಸುದ್ದಿ
ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿಗೆ ಆದ್ಯತೆ : ಪ್ರಧಾನಿ ಮೋದಿ
ಸುದ್ದಿದಿನ ಡೆಸ್ಕ್ : ಗ್ರಾಮಗಳ ಸರ್ವಾಂಗೀಣ ಅಭಿವೃದ್ಧಿ ನಮ್ಮ ಸರ್ಕಾರದ ಆದ್ಯತೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ.
ಈ ಉದ್ದೇಶಕ್ಕಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಲಾಗಿದೆ ಮತ್ತು ಹಲವು ಸೌಲಭ್ಯಗಳು ಈಗ ಗ್ರಾಮಗಳಿಗೆ ತಲುಪುತ್ತಿವೆ ಎಂದು ತಿಳಿಸಿದ್ದಾರೆ.
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಹುಟ್ಟೂರಾದ ಉತ್ತರಪ್ರದೇಶದ ಕಾನ್ಪುರ್ ದೇಹಾತ್‌ನ ಪರೌಂಖ್ ಗ್ರಾಮದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಅಮೃತ ಸರೋವರಗಳ ನಿರ್ಮಾಣ ಹಾಗೂ ನಿರ್ವಹಣೆ ಮಾಡಲು ಕೊಡುಗೆ ನೀಡಬೇಕು ಹಾಗೂ ಗರಿಷ್ಠ ಪ್ರಮಾಣದಲ್ಲಿ ನೈಸರ್ಗಿಕ ಕೃಷಿಯನ್ನು ಅಳವಡಿಕೊಳ್ಳಬೇಕೆಂದು ಜನತೆಗೆ ಮನವಿ ಮಾಡಿದರು.
ಪ್ರತಿಯೊಬ್ಬರು ಸಂಘಟಿತ ಪ್ರಯತ್ನ ಮಾಡಿದರೆ ಆತ್ಮ ನಿರ್ಭರ ಭಾರತದ ಕನಸು ನನಸಾಗಲಿದೆ ಎಂದರು. ಉತ್ತರಪ್ರದೇಶದ ರಾಜ್ಯಪಾಲರಾದ ಆನಂದಿ ಬೆನ್ ಪಟೇಲ್, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶುಕ್ರವಾರ ಮಧ್ಯಾಹ್ನ ರಾಷ್ಟ್ರಪತಿಯವರ ಹುಟ್ಟೂರಿಗೆ ಭೇಟಿ ನೀಡಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದಿನಿಂದ 4 ದಿನಗಳ ಕಾಲ ಉತ್ತರ ಪ್ರದೇಶ ಪ್ರವಾಸ ಕೈಗೊಂಡಿದ್ದು, ಇದರ ಅಂಗವಾಗಿ ಮೊದಲ ದಿನ ಅವರು ತಮ್ಮ ಹುಟ್ಟೂರಿಗೆ ಭೇಟಿ ನೀಡಿದ್ದಾರೆ.
I am humbled by Rashtrapati Ji’s special gesture. It shows his humility, simplicity and greatness. When I expressed gratitude and wanted to know why he did this, he instantly said – you have come to my village, it is a part of our culture to do so! @rashtrapatibhvn https://t.co/hzGR4p8orj
— Narendra Modi (@narendramodi) June 3, 2022
ಸುದ್ದಿದಿನ.ಕಾಂ|ವಾಟ್ಸಾಪ್|9980346243