Connect with us

ದಿನದ ಸುದ್ದಿ

ಸ್ವಾತಂತ್ರ್ಯದ ಕೂಗಿಗಿಂತ ಜೈಲಿನ ಗೋಡೆಗಳು ಎತ್ತರವಿಲ್ಲ..! : “ಪ್ರಧಾನ ಜೈಲರ್”ಗೆ ಹಿರಿಯ ಪತ್ರಕರ್ತನ ಎಚ್ಚರಿಕೆಯ ಪತ್ರ..!

Published

on

  • ರವೀಶ್ ಕುಮಾರ್, ಎನ್ ಡಿಟಿವಿ ಸಂಪಾದಕ, ಕನ್ನಡಕ್ಕೆ : ನವೀನ್ ಸೂರಿಂಜೆ, ಪತ್ರಕರ್ತ

ಮಂದೀಪ್ ಪುನಿಯಾ ಅವರ ಬಂಧನ ನನ್ನನ್ನು ಬಹಳ ಕಾಡುತ್ತಿದೆ. ಹತ್ರಾಸ್ ಪ್ರಕರಣದಲ್ಲಿ ಸಿದ್ದೀಕ್ ಕಪ್ಪನ್ ವಿಚಾರ ಏನಾಯ್ತು ಎಂಬುದೇ ಗೊತ್ತಾಗುತ್ತಿಲ್ಲ. ಕಾನ್ಪುರದ ಪತ್ರಕರ್ತ ಅಮಿತ್ ಸಿಂಗ್ ವಿರುದ್ಧವೂ ಪ್ರಕರಣ ದಾಖಲಾಗಿದೆ. ಈಗ ರಾಜ್‌ದೀಪ್ ಸರ್ದೇಸಾಯಿ ಮತ್ತು ಸಿದ್ಧಾರ್ಥ್ ವರದರಾಜನ್ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಪರಿಸ್ಥಿತಿ ನೋಡುವಾಗ ಭಾರತದಲ್ಲಿ ಪತ್ರಿಕಾ ಸ್ವಾತಂತ್ರ್ಯ ಕೊನೆಗೊಳ್ಳುವುದೇ ಎಂಬ ಆತಂಕ ಎದುರಾಗಿದೆ.

ಸ್ವಾತಂತ್ರ್ಯದ ಕೂಗಿಗಿಂತ ಜೈಲಿನ ಗೋಡೆಗಳು ಎತ್ತರವಿರಲು ಸಾಧ್ಯವಿಲ್ಲ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಯಾರು ಕಸಿಯಲು ಬಯಸುತ್ತಾರೋ ಅವರು ಇಡೀ ದೇಶವನ್ನು ಬಂಧನದಲ್ಲಿಡಲು ಬಯಸುತ್ತಾರೆ.

ಆತ್ಮೀಯ ಜೈಲರ್ ರವರೇ,

ಭಾರತದ ಇತಿಹಾಸವು ಈ ಕರಾಳ ದಿನಗಳ ಸುರಕ್ಷತೆಯನ್ನು ನಿಮಗೆ ವಹಿಸುತ್ತಿದೆ. ರಾತ್ರೋ ರಾತ್ರಿ “ಅವರ” ಪೊಲೀಸರು ಸ್ವಾತಂತ್ರ್ಯ ಬಯಸುವ ಪತ್ರಕರ್ತರನ್ನು ಬಂಧಿಸಿ ನಿಮ್ಮಲ್ಲಿಗೆ ಕರೆತರಬಹುದು. ಅದಕ್ಕಾಗಿಯೇ ದೂರದೂರುಗಳಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

ಒಂದು ನೆನಪಿರಲಿ, ಮುಂದೊಂದು ದಿನ ನಿಮ್ಮ ಮಕ್ಕಳು ಗೂಗಲ್ ಸರ್ಚ್ ಮಾಡಿ ನಿಮ್ಮನ್ನು ಪ್ರಶ್ನಿಸುತ್ತಾರೆ. ಆಗ ನಾನು ನೌಕರನಷ್ಟೇ ಆಗಿದ್ದೆ. ನಿಜವಾದ ಜೈಲರ್ ಬೇರೊಬ್ಬನಿದ್ದ ಎಂದು ನಿಮ್ಮ ಮಕ್ಕಳಿಗೆ ಹೇಳಿರಿ. ನೀವು ಐಎಎಸ್, ಐಪಿಎಸ್ ಅಧಿಕಾರಿಯಾಗಿದ್ದರೆ ನಿಮ್ಮ ಮಕ್ಕಳು ಪತ್ರಕರ್ತರಾಗದಂತೆ ನೋಡಿಕೊಳ್ಳಿ. ಪತ್ರಕರ್ತರಾಗಿ ಸತ್ಯ ಹೇಳಿದರೆ ಸಣ್ಣ ತಪ್ಪುಗಳನ್ನು ಹುಡುಕಿ ಜೈಲಿಗೆ ಹಾಕಲಾಗುತ್ತದೆ.

ಭಾರತ ಮಾತೆ ಎಲ್ಲವನ್ನೂ ವೀಕ್ಷಿಸುತ್ತಿದ್ದಾಳೆ. ಗೋದಿ ಮೀಡಿಯಾದ ಮುಖ್ಯಸ್ಥರಿಗೆ ಕಿರೀಟಧಾರಣೆ ಮಾಡಲಾಗುತ್ತಿದೆ ಮತ್ತು ಸ್ವತಂತ್ರ ಧ್ವನಿಗಳನ್ನು ಜೈಲಿಗೆ ಕಳುಹಿಸಲಾಗುತ್ತಿದೆ. ಸ್ವತಂತ್ರ ಪತ್ರಕರ್ತರು ಡಿಜಿಟಲ್ ಮಾಧ್ಯಮದಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ರೈತ ಚಳವಳಿಯ ಸುದ್ದಿ ಯೂಟ್ಯೂಬ್ ಚಾನೆಲ್ ಮತ್ತು ಫೇಸ್‌ಬುಕ್ ಲೈವ್ ಮೂಲಕ ಗ್ರಾಮದಿಂದ ಗ್ರಾಮಕ್ಕೆ ತಲುಪಿರುವುದನ್ನು ರೈತರು ಗಮನಿಸಿದ್ದಾರೆ. ಅವುಗಳನ್ನು ತಡೆಯಲು, ಸಣ್ಣ ತಪ್ಪುಗಳನ್ನು ಹುಡುಕಿ ಅವರ ಮೇಲೆ ಎಫ್‌ಐಆರ್ ಮಾಡಲಾಗುತ್ತಿದೆ.

ಸ್ವತಂತ್ರ್ಯದ ಘೋಷಣೆ ಕೂಗುವ ಆ ಸ್ಥಳದ ಮೇಲೆ ಜೈಲರ್ ಕಣ್ಣು ಬಿದ್ದಿದೆ. ಜೈಲರ್ ರವರೇ, ನೀವು ಆ ಜೈಲರ್ ಅಲ್ಲ. ಜೈಲರ್ ಮತ್ತೊಬ್ಬರಿದ್ದಾರೆ. ಆ ಜೈಲರ್ ಈ ಬಾರಿಯ ಬಜೆಟ್ ನಲ್ಲಿ “ಪ್ರಧಾನಿ ಜೈಲು ಬಂಧನ ಯೋಜನೆ” ಪ್ರಾರಂಭಿಸಬಹುದು. ನರೇಗಾ ಯೋಜನೆಯಡಿ ಬರೋ ಗ್ರಾಮಗಳನ್ನು ಜೈಲನ್ನಾಗಿ ಮಾಡಬೇಕು.

ಗ್ರಾಮಗಳಲ್ಲಿ ಪ್ರಶ್ನೆ ಕೇಳುವವರನ್ನು ಮತ್ತು ಭಾಷಣ ಮಾಡುವವರನ್ನು ಜೈಲಿಗೆ ಹಾಕಬೇಕು. ಕೊನೆಗೆ ಜೈಲುಗಳನ್ನು ನಿರ್ಮಿಸಿದವನನ್ನು ಮತ್ತು ಜೈಲಿನತ್ತಾ ದಿಟ್ಟಿಸಿದವನನ್ನೂ ಜೈಲಿಗೆ ಹಾಕಬೇಕು. ಇಡೀ ದೇಶದ ಗ್ರಾಮ ಗ್ರಾಮವೇ ನಿಶ್ಯಬ್ದವಾಗಿರಬೇಕು. ಯಾಕೆಂದರೆ “ಪ್ರಧಾನಿ ಜೈಲು ಬಂಧನ ಯೋಜನೆ”ಯನ್ನು ಜೈಲರ್ ಪ್ರಾರಂಭಿಸಿದ್ದಾರೆ ಎಂದು ಘೋಷಿಸಬೇಕು.

ಪ್ರಶ್ನಿಸುವ ಪತ್ರಕರ್ತರನ್ನು ಜೈಲಿನಲ್ಲಿ ಇರಿಸಿದರೆ, ಎರಡು ಬೆಳವಣಿಗೆಗಳು ನಡೆಯಬಹುದು. ಮೊದಲನೆಯದಾಗಿ ಪತ್ರಿಕೆಗಳು ಜೈಲಿನಿಂದ ಹೊರಬರುತ್ತವೆ. ಎರಡನೆಯದಾಗಿ ಜೈಲಿನಿಂದ ಹೊರಗಿರುವ ಪತ್ರಿಕೆಗಳಲ್ಲಿ ಸಾಫ್ಟ್ ಸ್ಟೋರಿಗಳು ಬರಬಹುದು. ಇದು ವಿಶ್ವ ಗುರು ಭಾರತಕ್ಕೆ ಒಳ್ಳೆಯದೇ ? ಯೋಚಿಸಿ.

ಸಿದ್ಧಾರ್ಥ್ ವರದರಾಜನ್, ರಾಜ್‌ದೀಪ್ ಸರ್ದೇಸಾಯಿ, ಅಮಿತ್ ಸಿಂಗ್ ಸೇರಿದಂತೆ ಎಲ್ಲಾ ಪತ್ರಕರ್ತರ ವಿರುದ್ಧದ ಪ್ರಕರಣಗಳನ್ನು ಹಿಂಪಡೆಯಬೇಕೆಂದು ನಾನು ವಿನಂತಿಸುತ್ತೇನೆ. ಮಂದೀಪ್ ಪುನಿಯಾ ಬಿಡುಗಡೆ ಮಾಡಲೇಬೇಕು. ಪ್ರಶ್ನಿಸುವ ಪತ್ರಕರ್ತರ ವಿರುದ್ದ ನಡೆಯುವ ಎಫ್‌ಐಆರ್ ಆಟ ನಿಲ್ಲಬೇಕು.

ಅತ್ಯಂತ ಗಂಭೀರವಾಗಿ ಒಂದು ತಿಳಿದುಕೊಳ್ಳಿ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲಾಗುತ್ತದೆ ಎಂದು ಜನ ಅರ್ಥ ಮಾಡಿಕೊಳ್ಳುವ ದಿನ ಬಂದೇ ಬರುತ್ತದೆ. ಆ ದಿನ ಈ ದೇಶದ ಹಳ್ಳಿಗಳ ಗೋಡೆಗಳು, ವಿಮಾನಗಳು ನಿಲ್ದಾಣಗಳು, ಬುಲೆಟ್ ರೈಲುಗಳು, ತರಕಾರಿ ಮಂಡಿಗಳು, ಜಾತ್ರೆಗಳು, ಮಾರುಕಟ್ಟೆಗಳು ಮತ್ತು ಶೌಚಾಲಯ ಗೋಡೆಗಳ ಮೇಲೆ, ಟ್ರಾಕ್ಟರುಗಳು, ಬಸ್ಸುಗಳು ಮತ್ತು ಟ್ರಕ್‌ಗಳ ಹಿಂದೆ ಜನ ಬರೆಯಲು ಪ್ರಾರಂಭಿಸುತ್ತಾರೆ.

“ಗುಲಾಮಿ ಮಾಧ್ಯಮಗಳು ಎಲ್ಲಿಯವರೆಗೆ ಇರುತ್ತದೆಯೋ ಅಲ್ಲಿಯವರೆಗೆ ಆ ದೇಶದಲ್ಲಿ ಸ್ವಾತಂತ್ರ್ಯ ಇರಲು ಸಾಧ್ಯವಿಲ್ಲ. ಗೋದಿ ಮಾಧ್ಯಮದಿಂದ ಮುಕ್ತವಾದರಷ್ಟೇ ಹೊಸ ಸ್ವಾತಂತ್ರ್ಯ ಬರಲು ಸಾಧ್ಯ”

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026 : ಕತಾ ಸ್ಪರ್ಧೆ ; ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನ ಅಮಾನ್ಯ ; ಪರಿಷ್ಕೃತ ಫಲಿತಾಂಶ ‌ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ – ದೀಪಾವಳಿ ವಿಶೇಷ ಸಂಚಿಕೆ 2026ರ ಕತಾ ಸ್ಪರ್ಧೆಯ ನಿಯಮಾವಳಿಯನ್ನು ಉಲಂಘಿಸಿರುವ ಕಾರಣ ಅನಂತ ಕುಣಿಗಲ್ ಅವರ ಸಂಸ‌ ಕತೆ ಪಡೆದ ಪ್ರಥಮ ಸ್ಥಾನವನ್ನು ಅಮಾನ್ಯ ಮಾಡಲಾಗಿದೆ ಎಂದು ಪತ್ರಿಕೆಯ ಸಂಪಾದಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕತೆ-ಕವಿತೆ ಸ್ಪರ್ಧೆಯ ನಿಯಮಾವಳಿಗಳ ಪ್ರಕಾರ ‘ “ಸ್ವತಂತ್ರ ರಚನೆಯಾಗಿರ ಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು” ಎನ್ನುವ ನಿಯಮಾವಳಿಗಳನ್ನು ಉಲಂಘಿಸಿರುವುದರಿಂದ ಪ್ರಥಮ ಸ್ಥಾನ ಪಡೆದ ” ಸಂಸ” ಕತೆಯನ್ನು ಅಮಾನ್ಯಗೊಳಿಸಲಾಗಿದೆ.

‘ಸಂಸ’ ಕತೆಯ ಕತೆಗಾರರಾದ ಅನಂತ ಕುಣಿಗಲ್ ಅವರು
ಸ್ವತಃ ತಮ್ಮ ಫೇಸ್ ಬುಕ್ ವಾಲ್ ನಲ್ಲಿ ‘ ಸಂಸ’ ಕತೆಯು ಈ ಹಿಂದೆ ಯಾವುದೋ ಕತಾ ಸ್ಪರ್ಧೆಯಲ್ಲಿ ಸಮಾಧಾನಕರ ಬಹುಮಾನ ಪಡೆದಿತ್ತು. ಮತ್ತೊಂದೆಡೆ ತೃತೀಯ, ಮಗದೊಂದೆಡೆ ದ್ವಿತೀಯ ಬಹುಮಾನ ಲಭಿಸಿತ್ತು, ಅಲ್ಲದೆ ‘ಟೋಟೋ’ ಅವಾರ್ಡ್ ನ ಅಂತಿಮ ಸುತ್ತಿಗೆ ಎರಡು ಬಾರಿ ಶಾರ್ಟ್ ಲಿಸ್ಟ್ ಆಗಿತ್ತು ಎಂದು ಬರೆದು ಕೊಂಡಿರುತ್ತಾರೆ. ಆದಕಾರಣ ಈ ಕ್ರಮವನ್ನು ಕೈಗೊಳ್ಳಲಾಗಿದೆ.

ಕತಾ ಸ್ಪರ್ಧೆಯ ಪರಿಷ್ಕೃತ ಫಲಿತಾಂಶ

ಕತಾ ಸ್ಪರ್ಧೆಯಲ್ಲಿ ರವಿಮುಡೋಡಿ ಅವರ ʼಅರ್ಧ ರೇಖೆಯ ಚಿತ್ರʼ  ಕತೆಗೆ ಪ್ರಥಮ ಬಹುಮಾನ, ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ ದ್ವಿತೀಯ ಬಹುಮಾನ ಹಾಗೂ ಅಜೇಯ ಸಿಂಹ ಕೆ.ವಿ ಅವರ ‘ ಮಾರ್ಜಕದ ಶ್ರೀಮುಡಿ’ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕ ಮಾಹಿತಿ ನೀಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದೇವನಗರಿ ಸುದ್ದಿದಿನ ಪತ್ರಿಕೆಯ ದೀಪಾವಳಿ ವಿಶೇಷಾಂಕ- 2026 ರ ಕತೆ – ಕವಿತೆ ಫಲಿತಾಂಶ ಪ್ರಕಟ

Published

on

ಸುದ್ದಿದಿನ,ದಾವಣಗೆರೆ:ದೇವನಗರಿ ಸುದ್ದಿದಿನ ಹಾಗೂ ಶ್ಯಾಮ್‌ ಪ್ರಕಾಶನ, ನವಿಲೇಹಾಳು ವತಿಯಿಂದ ದೀಪಾವಳಿ ವಿಶೇಷಾಂಕ-2026 ರ ಕತೆ ಮತ್ತು ಕವಿತೆ ಸ್ಪರ್ಧೆಯ ಫಲಿತಾಂಶ ಪ್ರಕಟವಾಗಿದ್ದು, ಕತಾ ಸ್ಪರ್ಧೆಯಲ್ಲಿ ಅನಂತ್‌ ಕುಣಿಗಲ್‌ ಅವರ ́ಸಂಸʼ ಕತೆಗೆ ಪ್ರಥಮ ಬಹುಮಾನ,. ರವಿ ಮಡೋಡಿ ಅವರ ʼಅರ್ಧ ರೇಖೆಯ ಚಿತ್ರʼ ಕತೆಗೆ ದ್ವಿತೀಯ ಬಹುಮಾನ ಹಾಗೂ ವಿಜಯ ಶ್ರೀ ಹಾಲಾಡಿ ಅವರ ʼಮಳೆಹಾಡುʼ ಕತೆಗೆ  ತೃತೀಯ ಬಹುಮಾನ ದೊರೆತಿದೆ ಎಂದು ಸುದ್ದಿದಿನ ಪತ್ರಿಕೆ ಸಂಪಾದಕರಾದ ಗೋವರ್ಧನ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಜೇಯ ಸಿಂಹ ಕೆ.ವಿ. ಅವರ ʼಮಾರ್ಜಕದ ಶ್ರೀಮುಡಿʼ, ಟಿ.ಆರ್.‌ ಪ್ರಕಾಶ ಭಾಗವತ ಅವರ ʼಸಮಾಧಿʼ , ರಘುನಂದನ್‌ ಅವರ ʼಹೀಗೊಂದು ಕಛೇರಿʼ , ಡಾ||. ಮಿರ್ಜಾ ಬಷೀರ್‌ ಅವರ ʼ ಒಂದು ಸದ್ದಿಲ್ಲದ ಕ್ರಾಂತಿʼ, ಸುಜಾತ ಎಸ್.‌ ಎನ್‌ ರೆಡ್ಡಿ ಅವರ ʼ ಸತ್ಯ ದರ್ಶನʼ, ಚಂದ್ರಿಕಾ ನಾಗರಾಜ್‌ ಹಿರಿಯಡಕ  ಅವರ ʼ ವೆಂಕಟನ ಸ್ವೆಟರ್, ರೈಹಾನ ಅವರ  ʼಬಾವಿಗೆ ಬಿದ್ದರೂʼ, ಒಟ್ಟು ಈ  ಏಳುಕತೆಗಳು ತೀರ್ಪುಗಾರ ಮೆಚ್ಚುಗೆ ಪಡೆದಿವೆ.

ಕತಾ ಸ್ಪರ್ಧೆಯ ತೀರ್ಪುಗಾರರಾಗಿ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಕತೆಗಾರ ಹಾಗೂ ನಿವೃತ್ತ ಪ್ರಾಧ್ಯಾಪಕ ಅಮರೇಶ ನುಗಡೋಣಿ, ಹೊಸಪೇಟೆ, ಕವಿ ಕತೆಗಾರ , ಜಿ. ಮುದ್ದುವೀರಸ್ವಾಮಿ, ದಾವಣಗೆರೆ, ಕತೆಗಾರ್ತಿ ಹಾಗೂ ಕನ್ನಡ ಪ್ರಾಧ್ಯಾಪಕಿ, ಸುಜಾತ ಚಲಾವಾದಿ, ತಾಳಿಕೋಟೆ, ಕತೆಗಾರ ಹಾಗೂ ಅಕ್ಷರ ಸಂಗಾತ ಮಾಸ ಪತ್ರಿಕೆಯ ಸಂಪಾದಕ ಡಾ. ಟಿ ಎಸ್‌. ಗೊರವರ, ಗಜೇಂದ್ರಘಡ ಇವರು ಕಾರ್ಯನಿವಹಿದ್ದರು ಎಂದು ಮಾಹಿತಿ ನೀಡಿದ್ಧಾರೆ.

ಪ್ರಥಮ ಬಹುಮಾನ ಹತ್ತು ಸಾವಿರ ರೂ (10000 ರೂ ) ನಗದು, ದ್ವೀತೀಯ ಬಹುಮಾನ ಐದು ಸಾವಿರ ನಗದು, (5000 ರೂ), ತೃತೀಯ ಬಹುಮಾನ ಮೂರು ಸಾವಿರ (3000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ನೀಡಲಾಗುವುದು.

ಕವಿತೆ ಸ್ಪರ್ಧೆ ಫಲಿತಾಂಶ

ಕವಿತೆ ಸ್ಪರ್ಧೆಯಲ್ಲಿ ಆನಂದ ಕುಂಚನೂರ ಅವರ ʼ ಬೆತ್ತಲೆ ಶಿಖರʼ ಕವಿತೆಗೆ ಪ್ರಥಮ ಬಹುಮಾನ, ಅಜಯ್‌ ಅಂಗಡಿ ಅವರ ʼಒಂದು ಶ್ರಾವಣ ಸಂಜೆಗೆʼ ದ್ವಿತೀಯ ಬಹುಮಾನ, ಭಾಗ್ಯ ಜ್ಯೋತಿ ಹಿರೇಮಠ ಅವರ ʼ ಗೋಡೆ ಕವಿತೆಗೆ ತೃತೀಯ ಬಹುಮಾನ ದೊರೆತಿದೆ.

ಫೈಜ್ನಟ್ರಾಜ್‌ ಅವರ ʼಅವ್ವ ತಟ್ಟಿದ ರೊಟ್ಟಿಯಲ್ಲಿ ಬೆರಳಿನ ಗುರುತುʼ, ಹೊನ್ನಪ್ಪ. ನೀ. ಕರೆಕನ್ನಮ್ಮನವರ ಅವರ ʼಒಂಟಿಯಾನದ ಸರಕುʼ, ಕವಿತ ಎ.ವಿ ಅವರ ʼಬಂದಿದ್ದಾರೆ ಸಿಕ್ಕಿಲ್ಲʼ, ರಮ್ಯ ಕೆ.ಜಿ. ಅವರ ʼಬಿಡಿಸಿಕೊಳ್ಳುತ್ತದೊಂದು ಚಿತ್ರ,ʼ, ಮುರ್ತುಜಾ ಬೇಗಂ ಕೊಡಗಲಿ ಅವರ ʼಒಂದು ಕನ್ನಡಿ ಮೂರು ಬಿಂಬಗಳುʼ, ಮನಸ್ವಿ ಎಂ ಸ್ವಾಮಿ ಅವರ ʼ ರಾಜಧಾನಿಯಲ್ಲಿ ರಾಜʼ, ವೀಣಾ ರಾವ್ ಅವರ  ʼಬಣ್ಣಗಳ ಆಚೆಗೆʼ ಒಟ್ಟು ಏಳು ಕವಿತೆಗಳು ತೀರ್ಪುಗಾರರ ಮೆಚ್ಚುಗೆ ಪಡೆದಿವೆ.

ಕವಿತೆ ಸ್ಪರ್ಧೆಯ ತೀರ್ಪುಗಾರರಾಗಿ ಕವಿ ಚಂದ್ರಶೇಖರ ತಾಳ್ಯ, ಹೊಳಲ್ಕೆರೆ, ಕವಯಿತ್ರಿ ಸವಿತಾ ನಾಗಭೂಷಣ, ಶಿವಮೊಗ್ಗ, ಕವಿ ವಿಲ್ಸನ್‌ ಕಟೀಲು ಅವರು ಕಾರ್ಯನಿರ್ವಹಿಸಿದ್ದರು.

ಪ್ರಥಮ ಬಹುಮಾನ ಐದು ಸಾವಿರ ರೂ (5000 ರೂ ) ನಗದು, ದ್ವೀತೀಯ ಬಹುಮಾನ ಮೂರು ಸಾವಿರ ನಗದು, (3000 ರೂ), ತೃತೀಯ ಬಹುಮಾನ ಎರಡು ಸಾವಿರ (2000) ರೂ ನಗದು ಹಾಗೂ ಪ್ರಮಾಣ ಪತ್ರವನ್ನು ಬಹುಮಾನಿತರಿಗೆ ಇದೇ ಅಕ್ಟೋಬರ್‌ 24 ರಂದು ದಾವಣಗೆರೆಯ ಕುವೆಂಪು ಕನ್ನಡ ಭವನದಲ್ಲಿ ʼ ನಡೆಯುವ ದೀಪಾವಳಿ ವಿಶೇಷಾಂಕ-2026 ರ ಬಿಡುಗಡೆ ಕಾರ್ಯಕ್ರಮದಲ್ಲಿ  ನೀಡಿ ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗೆ: 9980346243 ಸಂಪರ್ಕಿಸಲು ಈ ಮೂಲಕ ತಿಳಿಸಲಾಗಿದೆ.

Continue Reading

ದಿನದ ಸುದ್ದಿ

ನನ್ನ ನೆಚ್ಚಿನ ಪುಸ್ತಕ ವಿಮರ್ಶೆ ಸ್ಪರ್ಧೆ ; ವಿದ್ಯಾರ್ಥಿಗಳಿಗೆ ಬಹುಮಾನ

Published

on

ಸುದ್ದಿದಿನ,ದಾವಣಗೆರೆ:ಪೂಜ್ಯ ಡಾ|| ಸದ್ಯೋಜಾತ ಶಿವಾಚಾರ್ಯ ಮಹಾಸ್ವಾಮಿಗಳವರ ಸ್ಮರಣಾರ್ಥ ಹಾಗೂ ಶಿಕ್ಷಕರ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ದಾವಣಗೆರೆ ಜಿಲ್ಲಾ ಮಟ್ಟದ “ನನ್ನ ನೆಚ್ಚಿನ ಪುಸ್ತಕ” ವಿಮರ್ಶೆ ಸ್ಪರ್ಧೆಯಲ್ಲಿ ಜಿಲ್ಲೆಯ ಹಲವಾರು ಪ್ರೌಢಶಾಲೆಯ ಮಕ್ಕಳು ಭಾಗವಹಿಸಿದ್ದರು.

ತೀರ್ಪುಗಾರರ ಮೆಚ್ಚುಗೆ ಪಡೆದ ಸಿದ್ಧಗಂಗಾ ಸಂಸ್ಥೆಯ ನಯಾಸ ಡಿ.ಎಸ್.‌ ಪ್ರಥಮ ಬಹುಮಾನವಾಗಿ ಒಂದು ಸಾವಿರ, ದ್ವಿತೀಯ ಬಹುಮಾನ ಗಳಿಸಿದ ಜಾಹ್ನವಿ ರೂ. 750 ಮತ್ತು ತೃತೀಯ ಬಹುಮಾನ ಗಳಿಸಿದ ಚೈತನ್ಯ ವಿ. ಎಸ್‌. ರೂ. 500 ನಗದು ಬಹುಮಾನ ಪಡೆದರು. ಜೊತೆಗೆ ಈ ಮಕ್ಕಳಿಗೆ ಆಯೋಜಕರು ಸ್ಮರಣಿಕೆ, ಪ್ರಶಸ್ತಿಪತ್ರ ನೀಡಿ ಶಾಲು ಹೊದಿಸಿ ಸನ್ಮಾನಿಸಿದರು. ಎಳೆಯರ ಪ್ರಬುದ್ಧತೆಯನ್ನು ಶ್ಲಾಘಿಸಿದರು.

ಸಿದ್ಧಗಂಗಾ ವಿದ್ಯಾಸಂಸ್ಥೆಯ ಮುಖ್ಯಸ್ಥೆ ಜಸ್ಟಿನ್‌ ಡಿಸೌಜ ಅವರು ವಿಜೇತ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ವಿದ್ಯಾರ್ಥಿಗಳ ನಿರಂತರ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಪಾಲಕರ ಪ್ರೋತ್ಸಾಹ ಈ ಯಶಸ್ಸಿಗೆ ಕಾರಣವಾಗಿದೆ ಎಂದರು.

ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಯಲ್ಲಿ ಪಠ್ಯಪುಸ್ತಕಗಳ ಜೊತೆಗೆ ಉತ್ತಮ ಕಾದಂಬರಿಗಳು, ಕಥಾಸಂಕಲನಗಳು, ಸಾಧಕರ ಆತ್ಮಕಥೆ ಕುರಿತಾದ ಪುಸ್ತಕಗಳನ್ನು ಓದುವ ಹವ್ಯಾಸ ಅತ್ಯಂತ ಮಹತ್ವದ್ದು, ಓದಿನ ಮೂಲಕ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಚಿಂತನೆ, ವಿಶ್ಲೇಷಣೆ ಮತ್ತು ಅಭಿವ್ಯಕ್ತಿ ಸಾಮರ್ಥ್ಯವೂ ವೃದ್ಧಿಯಾಗುತ್ತದೆ. ವಿದ್ಯಾರ್ಥಿಗಳು ಮುಂದೆಯೂ ಇಂತಹ ಸಾಹಿತ್ಯಿಕ ಚಟುವಟಿಕೆಗಳಲ್ಲಿ ಸಕ್ರೀಯವಾಗಿ ಪಾಲ್ಗೊಂಡು ಹೆಚ್ಚಿನ ಸಾಧನೆ ಮಾಡಬೇಕು ಎಂದು ಶುಭ ಹಾರೈಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending