ದಿನದ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರ | ವಿವಿಧ ಬಹುಮಾನಗಳಿಗಾಗಿ ಅರ್ಜಿ ಆಹ್ವಾನ

Published

on

ಸಾಂದರ್ಭಿಕ ಚಿತ್ರ

ಸುದ್ದಿದಿನ,ಬೆಂಗಳೂರು : ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ, ಜನವರಿ 2021 ರಿಂದ ಡಿಸೆಂಬರ್ 2021ರ ಅವಧಿಯಲ್ಲಿ ಕನ್ನಡದಲ್ಲಿ ಪ್ರಕಟವಾದ ಕೃತಿಗಳಿಗೆ, ಅವುಗಳ ಮುದ್ರಣ, ಮುಖಪುಟ ವಿನ್ಯಾಸ, ಗುಣಮಟ್ಟವನ್ನು ಪರಿಗಣಿಸಿ ವಿವಿಧ ಬಹುಮಾನಗಳಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಕೃತಿಗಳ ಪ್ರಕಾಶಕರು / ಮುದ್ರಕರು / ಕಲಾವಿದರಿಗೆ ‘ಕನ್ನಡ ಪುಸ್ತಕ ಸೊಗಸು-2021’ ಬಹುಮಾನವನ್ನು ನೀಡಲಾಗುವುದು.

ಆಸಕ್ತ ಪ್ರಕಾಶಕರು /ಮುದ್ರಕರು/ ಕಲಾವಿದರು / ಲೇಖಕರುಗಳು ಸ್ವಯಂ ಅರ್ಜಿ ಸಲ್ಲಿಸಬಹುದಾಗಿದೆ, ಪುಸ್ತಕದ ಹೆಸರು, ಲೇಖಕರ ಹೆಸರು, ಪ್ರಕಟವಾದ ವರ್ಷ, ಪ್ರಕಾಶಕರ ಹೆಸರು, ಮುದ್ರಣಾಲಯದ ಹೆಸರು, ಮುಖಪುಟ ಚಿತ್ರ ರಚನೆಯ ಕಲಾವಿದರ ಹೆಸರು / ಚಿತ್ರ ಕಲಾವಿದರ ಪೂರ್ಣ ವಿಳಾಸ – ಈ ಎಲ್ಲಾ ವಿವರಗಳೊಂದಿಗೆ ಪುಸ್ತಕದ ಎರಡು ಪ್ರತಿಗಳನ್ನು ದಿನಾಂಕ:10.02.2022 ರೊಳಗಾಗಿ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಜೆ.ಸಿ.ರಸ್ತೆ, ಬೆಂಗಳೂರು-560 002 – ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಸಲ್ಲಿಸಲಾಗುವ ಪುಸ್ತಕಗಳನ್ನು ಯಾವುದೇ ಕಾರಣಕ್ಕೂ ಹಿಂದಿರುಗಿಸಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ

ಆಡಳಿತಾಧಿಕಾರಿಗಳು,
ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ,
ಮೊದಲನೇ ಮಹಡಿ, ಜೆ.ಸಿ. ರಸ್ತೆ,
ಬೆಂಗಳೂರು -560002 –
ದೂರವಾಣಿ ಸಂಖ್ಯೆ: 080-22484516 / 22107704 – ಇಲ್ಲಿ ಸಂಪರ್ಕಿಸಬಹುದಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Trending

Exit mobile version