ದಿನದ ಸುದ್ದಿ
ದೇಹದಾಡ್ಯ ಸ್ಪರ್ಧೆ | ಶ್ರೀ ಶಿವಲಿಂಗೇಶ್ವರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಪ್ರೇಮ್ ಕುಮಾರ್ ಗೆ ‘ಮಿಸ್ಟರ್ ದಾವಣಗೆರೆ’ ಪ್ರಶಸ್ತಿ
ಸುದ್ದಿದಿನ, ಚನ್ನಗಿರಿ : ಶ್ರೀ ಶಿವಲಿಂಗೇಶ್ವರ ಸ್ವಾಮಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಥಮ ಬಿಎ ವಿದ್ಯಾರ್ಥಿ ಪ್ರೇಮ್ ಕುಮಾರ್ ದಾವಣಗೆರೆ ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಭರಮಸಾಗರದಲ್ಲಿ ನಡೆದ ದೇಹದಾಡ್ಯ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ಮಿಸ್ಟರ್ ದಾವಣಗೆರೆ ಎಂಬ ಖ್ಯಾತಿಗಳಿಸಿದ್ದಾರೆ.
ಅಖಿಲ ಭಾರತ ದೇಹದಾಢ್ಯ ಸ್ಪರ್ಧೆಗೆ ಆಯ್ಕೆಯಾಗಿದ್ದು, ಅವರಿಗೆ ಮಾರ್ಗದರ್ಶನ ಮಾಡಿದ ಕಾಲೇಜಿನ ದೈಹಿಕ ನಿರ್ದೇಶಕರಾದ ಶ್ರೀ ಕಲ್ಲೇಶಪ್ಪ ಎಸ್ ಜಿ ಉತ್ತಮ ಮಾರ್ಗದರ್ಶನ ನೀಡುವ ಮೂಲಕ ಪ್ರಥಮ ಸ್ಥಾನ ಗೆಲ್ಲುವಲ್ಲಿ ಸಹಕರಿಸಿದ್ದಾರೆ.
ಕಾಲೇಜಿನ ಪ್ರಾಂಶುಪಾಲರಾದ
ಡಾ. ಅಮೃತೇಶ್ವರ ಬಿ ಜಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಯದ ಪ್ರೇಮ್ ಕುಮಾರ್ ಅಭಿನಂದಿಸಿ ಮಾತನಾಡುತ್ತಾ ಪ್ರತಿಭಾನ್ವಿತ ವಿದ್ಯಾರ್ಥಿಗಳು ಕೇವಲ ಪಠ್ಯಕ್ಕೆ ಸೀಮಿತವಾಗದೆ ಕ್ರೀಡೆ ಪಠ್ಯೇತರ ಚಟುವಟಿಕೆಗಳಲ್ಲಿ ಭಾಗವಹಿಸಿ ಕಾಲೇಜಿಗೆ ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯಕ್ಕೆ ಕೀರ್ತಿ ತರುವಂತೆ ಹಾರೈಸಿದ್ದಾರೆ.
ಹಾಗೆ ಮುಂದೆ ನಡೆಯುವ ಅಖಿಲ ಭಾರತ ದೇಹದಾಢ್ಯ ಸ್ಪರ್ಧೆಯಲ್ಲಿಯೂ ಭಾಗವಹಿಸಿ ಅಲ್ಲೂ ಮೊದಲ ಸ್ಥಾನವನ್ನು ಗಳಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಬೇಕೆಂದು ಹಾರೈಸಿದ್ದಾರೆ. ಹಾಗೂ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸಹಾಯವನ್ನು ಕೂಡ ನೀಡುವುದಾಗಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಪ್ರಾಧ್ಯಾಪಕರಾದ ಡಾ.ಮಹಮೂದ್ ಖಾನ್, ವಿಜಯ್ ಕುಮಾರ್ ಐಕ್ಯುಎಸಿ ಸಂಚಾಲಕರು, ಷಣ್ಮುಖಪ್ಪ ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243