Connect with us

ದಿನದ ಸುದ್ದಿ

ಯುವ ಕವಿ ಮತ್ತು ಗಾಯಕ ರುಜುವಾನ್ ಕೆ. ಮತ್ತು ನಾಗೇಂದ್ರಪ್ಪ ಅವರಿಗೆ ಉದಯೋನ್ಮುಖ ಕಲಾ ಚೇತನಾ ರಾಜ್ಯ ಪ್ರಶಸ್ತಿ

Published

on

ಸುದ್ದಿದಿನ, ಚಿತ್ರದುರ್ಗ : ಹೊಳಲ್ಕೆರೆ ತಾಲ್ಲೂಕಿನ ಅಂದನೂರು ಗ್ರಾಮದ ಯುವ ಕವಿ ಮತ್ತು ಗಾಯಕರಾದ ರುಜುವಾನ್ ಕೆ ಅವರಿಗೆ ಉದಯೋನ್ಮುಖ ಕಲಾ ಚೇತನಾ ರಾಜ್ಯ ಪ್ರಶಸ್ತಿ. ಮತ್ತು ಶಿಕ್ಷಕರಾದ ನಾಗೇಂದ್ರಪ್ಪ ಅವರಿಗೆ ಉದಯೋನ್ಮುಖ ಕಾವ್ಯ ಚೇತನಾ ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಾಯಿತು.

ನಗರದ ರೋಟರಿ ಬಾಲಭವನದಲ್ಲಿ ಭಾನುವಾರ ಸೂಲೇನಹಳ್ಳಿಯ ತನುಶ್ರೀ ಪ್ರಕಾಶನ ಸಂಸ್ಥೆ ವತಿಯಿಂದ ರಂದು ಆಯೋಜಿಸಿದ್ದ ತನುಶ್ರೀ ಪ್ರಕಾಶನ ಉಧ್ಘಾಟನೆ ಮತ್ತು ಲೋಗೋ ಲೋಕಾರ್ಪಣೆ, ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ರಾಜ್ಯ ಮಟ್ಟದ ಕವಿಗೋಷ್ಠಿ, ಸ್ಥಳೀಯ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪ್ರಶಸ್ತಿಗಳನ್ನು ವಿತರಿಸಲಾಯಿತು.

ಮುಖ್ಯ ಅತಿಥಿಗಳಾಗಿ ಅಂಜನ್ ಕುಮಾರ್ ರಾಜ್ಯಾಧ್ಯಕ್ಷರು ವಿಚಾರ ಮಂಟಪ ಸಾಹಿತ್ಯ ವೇದಿಕೆ ತುಮಕೂರು. ಷಕೀಬ್ ಎಸ್ ಕಣದ್ಮನೆ ನವಿಲೇಹಾಳ್ ಯುವ ಸಾಹಿತಿಗಳು ಮತ್ತು ಸಂಶೋಧಕರು. ಶ್ರೀಧರ ಕೆ ಕಾದಂಬರಿಕಾರರು ಮತ್ತು ಯುವ ಕವಿಗಳು. ರಾಜುಸೂಲೇನಹಳ್ಳಿ ಕಾದಂಬರಿಕಾರರು. ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ | ರೈತರ ಖಾತೆಗೆ ನಾಳೆ ಪ್ರಧಾನಿ ಹಣ ವರ್ಗಾವಣೆ ; ಎಷ್ಟು ಕೋಟಿ..?

Published

on

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಾಳೆ ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20 ಸಾವಿರ ಕೋಟಿ ರೂಪಾಯಿ ಹಣವನ್ನು ವರ್ಗಾವಣೆ ಮಾಡಲಿದ್ದಾರೆ.

ವಾರಾಣಸಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಅವರು, ಮೂರನೇ ಬಾರಿಗೆ ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಹಣ ವರ್ಗಾವಣೆ ಮಾಡಲಿದ್ದಾರೆ. ಅಧಿಕಾರ ಸ್ವೀಕರಿಸಿದ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ, ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಸಹಿ ಹಾಕಿದ್ದರು.

2019ರಲ್ಲಿ ದೇಶದ ರೈತರ ಹಿತದೃಷ್ಟಿಯಿಂದ ಈ ಯೋಜನೆ ಜಾರಿಗೆ ಬಂದಿತ್ತು. ವರ್ಷಕ್ಕೆ ಆರು ಸಾವಿರ ರೂಪಾಯಿಯನ್ನು ತಲಾ 2 ಸಾವಿರದಂತೆ ಮೂರು ಕಂತುಗಳ ಮೂಲಕ ರೈತರ ಖಾತೆಗೆ ಜಮೆ ಮಾಡಲಾಗುತ್ತಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಧ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಇಲ್ಲ : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್: ರಾಜ್ಯದಲ್ಲಿ ಸದ್ಯಕ್ಕೆ ಬಸ್ ಟಿಕೆಟ್ ದರ ಹೆಚ್ಚಳ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಪೆಟ್ರೋಲ್-ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ಬಳಿಕವೂ ಬಿಜೆಪಿ ಆಡಳಿತದ ರಾಜ್ಯಗಳಿಗಿಂತ ಹಾಗೂ ದಕ್ಷಿಣ ಭಾರತದ ರಾಜ್ಯಗಳಿಗಿಂತ ನಮ್ಮ ರಾಜ್ಯದಲ್ಲಿ ಇಂಧನ ಬೆಲೆ ಕಡಿಮೆ ಇದೆ ಅಂಕಿ ಅಂಶಗಳ ಸಮೇತ ವಿವರಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ತೆರಿಗೆ ಹೆಚ್ಚಳದ ಅನಿವಾರ್ಯತೆಯನ್ನು ಹಾಗೂ ಕೇಂದ್ರ ಸರ್ಕಾರ ರಾಜ್ಯದ ಪಾಲಿನ ಹಣವನ್ನು ಕೊಡದೇ ಇರುವುದರಿಂದ ಸೃಷ್ಟಿ ಆಗಿರುವ ಪರಿಸ್ಥಿತಿಯನ್ನು ತಿಳಿಸಿದರು.

ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 60 ಸಾವಿರ ಕೋಟಿ ರೂಪಾಯಿಗಳನ್ನು ವ್ಯಯ ಮಾಡುತ್ತಿದೆ. ಇಷ್ಟೂ ಹಣ ರಾಜ್ಯದ ಎಲ್ಲಾ ಜಾತಿ-ಸಮುದಾಯಗಳ ಬಡವರು ಮತ್ತು ಮಧ್ಯಮ ವರ್ಗದವರಿಗೆ ಹೋಗುತ್ತದೆ. ಅಲ್ಪ ಪ್ರಮಾಣದ ಡೀಸೆಲ್-ಪೆಟ್ರೋಲ್ ತೆರಿಗೆ ಹೆಚ್ಚಳದಿಂದ ನಮಗೆ ಹೆಚ್ಚುವರಿಯಾಗಿ ಸಂಪನ್ಮೂಲ ಸಂಗ್ರಹ ಆಗುವುದು ಕೇವಲ 3 ಸಾವಿರ ಕೋಟಿ ರೂಪಾಯಿ ಮಾತ್ರ ಎಂದು ಹೇಳಿದರು.

GST ಯಲ್ಲಿ ಕೇಂದ್ರ ಸರ್ಕಾರ ಏಕಸ್ವಾಮ್ಯ ಮಾಡಿಕೊಂಡಿರುವುದರಿಂದ ರಾಜ್ಯಗಳ ಪರಮಾಧಿಕಾರವಾಗಿದ್ದ ತೆರಿಗೆ ಸಂಗ್ರಹದ ಅವಕಾಶಗಳು ಇಲ್ಲವಾಗಿದೆ ಎಂದು ದೂರಿದರು. ರಾಜ್ಯದ ಜನರ ಪಾಲಿನ ಹಣವನ್ನು ಕೇಂದ್ರ ಸರ್ಕಾರ ಕೊಟ್ಟಿದ್ದರೆ ನಮಗೆ ತೆರಿಗೆ ಹೆಚ್ವಿಸುವ ಅಗತ್ಯವೇ ಬೀಳುತ್ತಿರಲಿಲ್ಲ ಎಂದು ಸಮರ್ಥಿಸಿಕೊಂಡರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

Published

on

  • ಸಂಜಯ್ ಹೊಯ್ಸಳ

ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ ಮೊಸಳೆ ಸಂತತಿಗಳಿವೆ. ಅವುಗಳೆಂದರೆ..

ಉಪ್ಪು ನೀರಿನ ಮೊಸಳೆ (Saltwater crocodile) 
ಮಗ್ಗರ್/ಮಾರ್ಷ್ (Mugger)
ಘಾರಿಯಲ್ (Gharial)

ಇವುಗಳಲ್ಲಿ ಕರ್ನಾಟಕದಲ್ಲಿನ ನದಿಗಳಲ್ಲಿ, ಕೆಲವು ದೊಡ್ಡ ಕೆರೆಗಳಲ್ಲಿ ಕಂಡುಬರುವ ಮೊಸಳೆಗಳು ಮಗ್ಗರ್/ಮಾರ್ಷ್ ಮೊಸಳೆಗಳಾಗಿವೆ. ಕರ್ನಾಟಕದಲ್ಲಿ ಮೊಸಳೆಗಳು ಹೆಚ್ಚಾಗಿ ಉತ್ತರ ಕನ್ನಡ ಜಿಲ್ಲೆಯ ಕಾಳಿ ನದಿ ಪಾತ್ರದಲ್ಲಿ ಕಂಡುಬರುತ್ತವೆ. ಇತ್ತೀಚೆಗೆ ಮೊಸಳೆಯ ದವಣೆಗೆ ಸಿಲುಕಿ‌ ಕೆಲವು ಸಾವು ನೋವಿನ ಪ್ರಕರಣಗಳು ಆ ಭಾಗದಲ್ಲಿ ವರದಿಯಾಗಿವೆ‌.

ಇನ್ನು ಉತ್ತರ ಕರ್ನಾಟಕದ ಭಾಗದ ಕೆಲವು ಪ್ರಮುಖ ನದಿಗಳ ಪಾತ್ರದಲ್ಲೂ ಮೊಸಳೆಗಳು ಆಗಾಗ್ಗೆ ಕಂಡುಬರುತ್ತವೆ. ನಾನು ನೋಡಿದಂತೆ ಉತ್ತರ ಕರ್ನಾಟಕ ಭಾಗಕ್ಕೆ ಹೋಲಿಸಿದರೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಮೊಸಳೆಗಳ ದಾಳಿ ಪ್ರಕರಣಗಳು ತುಂಬಾ ಕಡಿಮೆ ಎನ್ನಬಹುದು. ಈ‌ ಭಾಗದ ನದಿಗಳಲ್ಲಿ ಮೊಸಳೆಗಳ ಸಂಖ್ಯೆ ಕಡಿಮೆ ಇರುವುದು ಇದಕ್ಕೆ ಕಾರ ಇರಬಹುದು.

ಕಾವೇರಿ ನದಿಯಲ್ಲಿ ಅತಿಹೆಚ್ಚು ಮೊಸಳೆಗಳು‌ ಕಂಡು ಬರುವುದು ಮಂಡ್ಯದ ಶ್ರೀರಂಗಪಟ್ಟಣ ತಾಲ್ಲೂಕಿನ ವಿಶ್ವವಿಖ್ಯಾತ ಪಕ್ಷಿ ಧಾಮವಾದ ರಂಗನತಿಟ್ಟು ಪಕ್ಷಿಧಾಮದಲ್ಲಿ. ಹಿಂದೆ ಪಂಚತಂತ್ರದಲ್ಲಿ ಮೊಸಳೆ ಮತ್ತು ಕೋತಿ‌ಕತೆಯಲ್ಲಿ ಮೊಸಳೆಯ ಹೆಂಡತಿಗೆ ಕೋತಿ‌ ನೇರಳೆ ಹಣ್ಣುಗಳನ್ನು ಹೊತ್ತೊಯ್ಯುವ ಕತೆಯಲ್ಲಿ ಗಂಡ ಮತ್ತು‌ ಹೆಂಡತಿ‌ ಮೊಸಳೆಯನ್ನು ಕಲ್ಪಿಸಿಕೊಂಡು ಮಾತ್ರ ನಾನು ಮೊದಲು ಅವುಗಳ ಸಹಜ ಆವಾಸಸ್ಥಾನದಲ್ಲಿ ಮೊಸಳೆಯನ್ನು ನೋಡಿದ್ದು ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಹರಿಯುವ ಲಕ್ಷ್ಮಣತೀರ್ಥ ನದಿಯಲ್ಲಿ. ನಂತರ ಬಂಡೀಪುರ ದಟ್ಟಡವಿಯಲ್ಲಿ ಹರಿಯುವ ಮೂಲೆಹೊಳೆ/ ನುಗು ನದಿಯಲ್ಲಿ…‌ ನಂತರದ ದಿನಗಳಲ್ಲಿ ಕಬಿನಿ, ಪಾಲರ್ ಸೇರಿ ಬಹಳಷ್ಟು ಕಡೆ ಬಹಳಷ್ಟು ಮೊಸಳೆಗಳನ್ನು ನೋಡುವ ಅವಕಾಶ ಸಿಕ್ಕಿತು.

ಘಾರಿಯಲ್ ಗಳು ತುಂಬಾ ಅಪರೂಪದ ಮೊಸಳೆ ಸಂತತಿಗಳಾಗಿದ್ದು, ಸದ್ಯ ಉತ್ತರ ಭಾರತದ ಕೆಲವು ನದಿಗಳು ಹಾಗೂ ನೇಪಾಳದಲ್ಲಿ ಮಾತ್ರ ಇವು ಕಾಣಸಿಗುತ್ತಿವೆ. ಇವುಳನ್ನು IUCN red list ಗೆ ಸೇರಿಸಿದ್ದು, ಇವುಗಳ ಸಂರಕ್ಷಣೆಗೆ ವಿಶೇಷ ಗಮನ ನೀಡಲಾಗಿದೆ.

ನಮಗೆಲ್ಲಾ ಗೊತ್ತಿರುವಂತೆ ಜೀವವೈವಿಧ್ಯತೆಯ ರಕ್ಷಣೆಯಲ್ಲಿ ಎಲ್ಲಾ ಜೀವಿಗಳ‌ ಇರುವಿಕೆ ಬಹಳ ಮುಖ್ಯ. ಜಲಚರಗಳಲ್ಲಿ ಅಗ್ರ ಪರಪಕ್ಷಕಗಳಲ್ಲಿ ಒಂದೆನಿಸಿದ ಮೊಸಳೆ ಜಲಚರ ಜೀವಿಗಳ ಸಮತೋಲನ ಸಾಧಿಸಿ ಅಲ್ಲಿನ ಜೀವವೈವಿಧ್ಯ ಕಾಪಾಡುವಲ್ಲಿ ಇವು ಪ್ರಮುಖ ಪಾತ್ರ ವಹಿಸುತ್ತವೆ. ಹೀಗಾಗಿ ನಾವು ಮೊಸಳೆಗಳನ್ನು ಕೂಡ ಇತರ ಪ್ರಾಣಿಗಳಂತೆ ರಕ್ಷಿಸಬೇಕು.

ಮುಖ್ಯವಾಗಿ ಅವುಗಳ ಆವಾಸಸ್ಥಾನವಾದ ನದಿ, ಸರೋವರದಂತಹ ಜಲಮೂಲಗಳನ್ನು ಸಂರಕ್ಷಿಸಬೇಕು. ಅಲ್ಲಿ ಅಕ್ರಮ ಮರಳುಗಾರಿಗೆ ತಡೆದು, ಜಲಮಾಲಿನ್ಯ ನಿಯಂತ್ರಣ ಮಾಡಬೇಕು. ಹಾಗೆ ಪ್ಲಾಸ್ಟಿಕ್ ತ್ಯಾಜ್ಯಗಳು ನದಿ, ಸರೋವರಗಳನ್ನು ಸೇರದಂತೆ ಕ್ರಮವಹಿಸಬೇಕು. ಹಾಗೆಯೇ ಎಲ್ಲಾದರೂ ಮೊಸಳೆಗಳು ಕಂಡುಬಂದರೆ ಗಾಬರಿಯಾಗದೆ ತಕ್ಷಣ ಅರಣ್ಯ ಇಲಾಖೆಯ ಗಮನಕ್ಕೆ ತರಬೇಕು. (ಬರಹ:ಸಂಜಯ್ ಹೊಯ್ಸಳ,ಫೇಸ್ ಬುಕ್ ನಿಂದ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending