ದಿನದ ಸುದ್ದಿ
ಪದ್ಮವಿಭೂಷಣ, ಪದ್ಮಭೂಷಣ, ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲು ಪ್ರಸ್ತಾವನೆಗಳ ಆಹ್ವಾನ
ಸುದ್ದಿದಿನ,ಗದಗ : ಸಮಾಜದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 2021 ನೇ ಸಾಲಿನ ಪದ್ಮಶ್ರೇಣಿಯ ಪ್ರಶಸ್ತಿಗಳಾದ ಪದ್ಮವಿಭೂಷಣ, ಪದ್ಮಭೂಷಣ ಮತ್ತು ಪದ್ಮಶ್ರೀ ಪ್ರಶಸ್ತಿಗಳನ್ನು ನೀಡಲು ಪ್ರಸ್ತಾವನೆಗಳನ್ನು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜೂನ್ 25 ಕೊನೆಯ ದಿನವಾಗಿದೆ.
ಕೇಂದ್ರ ಸರ್ಕಾರವು ಕ್ರೀಡೆ ಮತ್ತು ಸಾಹಸ ಕ್ರೀಡೆಯಲ್ಲಿ ಅಸಾಧಾರಣ ಕೊಡುಗೆ ನೀಡಿರುವ ವ್ಯಕ್ತಿಗಳಿಗೆ ಪ್ರಶಸ್ತಿಯನ್ನು ನೀಡಲಾಗುತ್ತದೆ. ಅರ್ಹ ವ್ಯಕ್ತಿಗಳು ನಿಗಧಿತ ನಮೂನೆಯಲ್ಲಿ ತಮ್ಮ ಜೀವನಪರ್ಯಂತ ಸಾಧಿಸಿರುವ ಪ್ರಗತಿಯೊಂದಿಗೆ ಆಂಗ್ಲ ಭಾಷೆಯಲ್ಲಿ ಭರ್ತಿ ಮಾಡಿ ಕಚೇರಿಗೆ ಕಳುಹಿಸಿಕೊಡಲು ಕೋರಲಾಗಿದೆ.
ಗರಿಷ್ಟ 2 ಪುಟಗಳೊಳಗಿನ ಸಾಧನೆಗಳ ಕುರಿತಾದ ವಿವರಗಳನ್ನು ಆಂಗ್ಲ ಮತ್ತು ಕನ್ನಡ ಭಾಷೆಯಲ್ಲಿ ಪ್ರತ್ಯೇಕವಾಗಿ ಲಗತ್ತಿಸಿ ಸಲ್ಲಿಸುವುದು. ಅರ್ಜಿ ನಮೂನೆಗಳು ಕಚೇರಿಯಲ್ಲಿ ಲಭ್ಯವಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗದಗ ಕಚೇರಿಗೆಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08372-238345 ರ ಮೂಲಕ ಸಂಪರ್ಕಿಸಬಹುದಾಗಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243